Asianet Suvarna News Asianet Suvarna News

2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ ಪರೀಕ್ಷಾ ವೇಳಾಪಟ್ಟಿ ಪ್ರಕಟ!

ರಾಜ್ಯದಲ್ಲಿ 2023-24ನೇ ಶೈಕ್ಷಣಿಕ ವರ್ಷದ ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ಅಂತಿಮ ಪರೀಕ್ಷಾ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷಾ ಮಂಡಳಿಯಿಂದ ಪ್ರಕಟಿಸಲಾಗಿದೆ.

Karnataka education 2023 24 SSLC and 2nd PUC Exam Schedule Announced sat
Author
First Published Jan 17, 2024, 6:05 PM IST

ಬೆಂಗಳೂರು (ಜ.17): ರಾಜ್ಯದಲ್ಲಿ 2023-24ನೇ ಶೈಕ್ಷಣಿಕ ವರ್ಷದ ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ಅಂತಿಮ ಪರೀಕ್ಷಾ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷಾ ಮಂಡಳಿಯಿಂದ ಪ್ರಕಟಿಸಲಾಗಿದೆ.

ಮಾರ್ಚ್ 1 ರಿಂದ ಮಾರ್ಚ್ 22 ರವರೆಗೆ ದ್ವಿತೀಯ ಪಿಯು ಪರೀಕ್ಷೆಯ ವೇಳಾಪಟ್ಟಿಯನ್ನು ನಿಗದಿ ಮಾಡಲಾಗಿದೆ. ಉಳಿದಂತೆ ಮಾರ್ಚ್ 25 ರಿಂದ ಏಪ್ರಿಲ್ 6 ರವರೆಗೆ SSLC ಪರೀಕ್ಷೆಯ ವೇಳಾಪಟ್ಟಿಯನ್ನು ಹಂಚಿಕೆ ಮಾಡಲಾಗಿದೆ. ವಿಷಯವಾರು ವೇಳಾಪಟ್ಟಿಯ ವಿವರ ಇಲ್ಲಿದೆ ನೋಡಿ. 

ದ್ವೀತಿಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ ದಿನಾಂಕ

01-03-2024 ರ ಶುಕ್ರವಾರ ಕನ್ನಡ ಹಾಗೂ ಅರೇಬಿಕ್ ಪರೀಕ್ಷೆ

04-03-2024 ಸೋಮವಾರ ಗಣಿತ ಪರೀಕ್ಷೆ

05-03-2024 ರಂದು ರಾಜ್ಯ ಶಾಸ್ತ್ರ, ಸಂಖ್ಯಾಶಾಸ್ತ್ರ ಪರೀಕ್ಷೆ

06-03-2024 ರಂದು ಮಾಹಿತಿ ತಂತ್ರಜ್ಞಾನ, ರೀಟೈಲ್, ಆಟೋ ಮೊಬೈಲ್,ಪರೀಕ್ಷೆ

07-03-2024 ರಂದು ಇತಿಹಾಸ ಹಾಗೂ ಭೌತಶಾಸ್ತ್ರ ಪರೀಕ್ಷೆ

09-03-2024 ಐಚ್ಛಿಕ ಕನ್ನಡ,ಲೆಕ್ಕಶಾಸ್ತ್ರ, ಭೂಗರ್ಭ ಶಾಸ್ತ್ರ,ಗೃಹ ವಿಜ್ಞಾನ ಪರೀಕ್ಷೆ

11-03-2024 ರಂದು ತರ್ಕಶಾಸ್ತ್ರ,ವ್ಯವಹಾರ ಅಧ್ಯಯನ ಪರೀಕ್ಷೆ

13-03-2024 ರಂದು ಇಂಗ್ಲಿಷ್ ಪರೀಕ್ಷೆ

15-03-2024 ರಂದು ಹಿಂದೂಸ್ತಾನಿ ಸಂಗೀತ, ಮನಃಶಾಸ್ತ್ರ, ರಸಾಯನ ಶಾಸ್ತ್ರ, ಮೂಲಗಣಿತ ಪರೀಕ್ಷೆ

16-03-2024 ರಂದು ಅರ್ಥಶಾಸ್ತ್ರ ಪರೀಕ್ಷೆ

18-03-2024 ರಂದು ಭೂಗೋಳ ಶಾಸ್ತ್ರ, ಜೀವಶಾಸ್ತ್ರ ಪರೀಕ್ಷೆ

20-03-2024 ರಂದು ಸಮಾಜಶಾಸ್ತ್ರ, ವಿದ್ಯುನ್ಮಾನ ಶಾಸ್ತ್ರ, ಗಣಕ ವಿಜ್ಞಾನ ಪರೀಕ್ಷೆ

22-03-2024 ರಂದು ಹಿಂದಿ ಪರೀಕ್ಷೆ

ಬೆಳಗ್ಗೆ 10.15ಕ್ಕೆ ಪರೀಕ್ಷೆ ಆರಂಭವಾಗಿ 1.30ಕ್ಕೆ ಮುಕ್ತಾಯ

 

ಎಸ್‌ಎಸ್‌ಎಲ್‌ಸಿ ಪರೀಕ್ಷಾ ವೇಳಾಪಟ್ಟಿ

25-03-2024 ರ ಸೋಮವಾರ ಪ್ರಥಮ ಭಾಷೆ ಪರೀಕ್ಷೆ - ಕನ್ನಡ, ತೆಲುಗು, ಹಿಂದಿ, ಮರಾಠಿ,  ತಮಿಳು, ಉರ್ದು, ಸಂಸ್ಕೃತ ಇಂಗ್ಲಿಷ್, ಇಂಗ್ಲಿಷ್-NCERT

27-03-2024 ರಂದು ಸಮಾಜ ವಿಜ್ಞಾನ ಪರೀಕ್ಷೆ

30-03-2024 ರಂದು ,ವಿಜ್ಞಾನ ,ರಾಜ್ಯಶಾಸ್ತ್ರ, ಪರೀಕ್ಷೆ

02-04-2024 ರಂದು ಗಣಿತ,ಸಮಾಜ ಶಾಸ್ತ್ರ ಪರೀಕ್ಷೆ

03-04-2024 ಅರ್ಥಶಾಸ್ತ್ರ ಪರೀಕ್ಷೆ

ಬೆಳಗ್ಗೆ 10.15 ರಿಂದ ಮಧ್ಯಾಹ್ನ 1.30 ರ ವರೆಗೆ ನಡೆಯಲಿರೋ ಪರೀಕ್ಷೆ

Follow Us:
Download App:
  • android
  • ios