ಬ್ರೇಕಿಂಗ್: ಶಾಲಾ-ಕಾಲೇಜು ಆರಂಭದ ಬಗ್ಗೆ ಮಹತ್ವದ ಸೂಚನೆ ಹೊರಡಿಸಿದ ಶಿಕ್ಷಣ ಇಲಾಖೆ

ಕೊರೋನಾ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಶಾಲಾ-ಕಾಲೇಜುಗಳ  ಪ್ರಾರಂಭದ ಕುರಿತು ರಾಜ್ಯ ಶಿಕ್ಷಣ ಇಲಾಖೆ ಮಹತ್ವದ ಪತ್ರಿಕಾ ಪ್ರಕಟಣೆ ಹೊರಡಿಸಿದೆ.

Karnataka Education Dept Announces schools and colleges Not opening till September end rbj

ಬೆಂಗಳೂರು, (ಸೆ.19) : ಈ ಸೆಪ್ಟೆಂಬರ್ ಅಂತ್ಯದವರೆಗೂ ಶಾಲಾ-ಕಾಲೇಜುಗಳು ಆರಂಭವಿಲ್ಲ ಎಂದು  ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

"

ಕೊರೊನಾ ಆತಂಕದ ನಡುವೆಯೂ ಸೆ. 21 ರಿಂದ ಶಾಲಾ-ಕಾಲೇಜುಗಳ ಆರಂಭವಾಗಲಿದೆ ಎಂದು ಹೇಳಲಾಗಿತ್ತು. ಆದರೆ, ದಿನದಿಂದ ದಿನಕ್ಕೆ ಕೊರೋನಾ ಸೋಂಕಿನ ಪ್ರಮಾಣ ಹೆಚ್ಚಳವಾಗುತ್ತಿದೆ. ಈ ಹಿನ್ನಲೆಯಲ್ಲಿ ಸದ್ಯಕ್ಕೆ ಶಾಲಾ ಕಾಲೇಜು ಆರಂಭ ಇಲ್ಲ ಎಂದು ಪ್ರಾಥಮಿಕ ‌ಮತ್ತು ಪ್ರೌಢಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಎಸ್.ಆರ್.ಉಮಾಶಂಕರ್ ಸ್ಪಷ್ಟಪಡಿಸಿದ್ದಾರೆ.

ಸೆ. 21ರಿಂದ ಶಾಲೆ ಆರಂಭವಾಗ್ತಾವಾ..? ಎಲ್ಲಾ ಗೊಂದಲಗಳಿಗೆ ತೆರೆ

ಅಲ್ಲದೇ , ರಾಜ್ಯದಲ್ಲಿ ಕೋವಿಡ್ ಸೋಂಕಿತ ಪ್ರಕರಣ ಕಡಿಮೆಯಾಗದ ಹಿನ್ನೆಲೆಯಲ್ಲಿ ಶಾಲಾ ಕಾಲೇಜುಗಳಿಗೆ ವಿದ್ಯಾರ್ಥಿಗಳು ಭೇಟಿ ನೀಡದಿರಲು ಪತ್ರಿಕಾ ಪ್ರಕಟಣೆ ಮೂಲಕ ಸೂಚನೆ ನೀಡಲಾಗಿದೆ. 

ಸೆಪ್ಟೆಂಬರ್ 21ರಿಂದ ದೇಶಾದ್ಯಂತ 9 ರಿಂದ 12ನೇ ತರಗತಿ ಶಾಲಾ-ಕಾಲೇಜು ಆರಂಭಕ್ಕೆ ನೂತನ ಮಾರ್ಗಸೂಚಿ ಬಿಡುಗಡೆ ಮಾಡಿತ್ತು. ಅದರಂತೆ ರಾಜ್ಯದ ಸರ್ಕಾರವೂ ಸಹ ಸೆಪ್ಟೆಂಬರ್ 21ರಿಂದ  9, 10 ಹಾಗೂ 11, 12ನೇ ತರಗತಿ ಪ್ರಾರಂಭಿಸಲು ರಾಜ್ಯ ಶಿಕ್ಷಣ ಇಲಾಖೆ ಮುಂದಾಗಿತ್ತು. ಇದೀಗ ಏಕಾಏಕಿ ತನ್ನ ನಿರ್ಧಾರವನ್ನು ವಾಪಸ್ ಪಡೆದಿದೆ.

Latest Videos
Follow Us:
Download App:
  • android
  • ios