Asianet Suvarna News Asianet Suvarna News

SSLC ಪರೀಕ್ಷೆಗೆ ಸಿದ್ಧತೆ: ಮಾದರಿ ಪ್ರಶ್ನೆ ಪತ್ರಿಕೆ ರಿಲೀಸ್...

* ಎಸ್‌ಎಸ್‌ಎಲ್‌ಸಿ ಪರೀಕ್ಷೆ ಪೂರ್ವ ತಯಾರಿ ನಡೆಸಿದ ಶಿಕ್ಷಣ ಇಲಾಖೆ
* SSLC ಪರೀಕ್ಷೆಗೆ ಮಾದರಿ ಪ್ರಶ್ನೆ ಪತ್ರಿಕೆ ರಿಲೀಸ್
* ಎಸ್‌ಎಸ್‌ಎಲ್​ಸಿ ಪರೀಕ್ಷೆಗೆ ಸಿದ್ಧರಾಗಿ...

Karnataka Education Dept Releases sslc model-question paper rbj
Author
Bengaluru, First Published Jun 16, 2021, 5:58 PM IST

ಬೆಂಗಳೂರು, (ಜೂನ್.16): ರಾಜ್ಯದಲ್ಲಿ ಕೊರೊನಾ ಕೇಸ್ಗಳು ದಿನದಿಂದ ದಿನಕ್ಕೆ ಇಳಿಕೆಯಾಗುತ್ತಿರುವ ಬೆನ್ನಲ್ಲೇ ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ಪೂರ್ವ ತಯಾರಿ ಮಾಡಿಕೊಳ್ಳುತ್ತಿದೆ.

ಇದರ ಮಧ್ಯೆ 2020-21ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮಾದರಿ ಪ್ರಶ್ನೆ ಪತ್ರಿಕೆಯನ್ನು ಪ್ರಕಟಿಸಿದೆ. www.sslc.karnataka.gov.in ಬೋರ್ಡ್‌ ವೆಬ್‌ಸೈಟ್‌ನಲ್ಲಿ ಮಾದರಿ ಪ್ರಶ್ನೆ ಪತ್ರಿಕೆ ಲಭ್ಯವಿದೆ. 

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಸಿದ್ಧತೆ : ಯಾವಾಗ ನಡೆಯಲಿದೆ..?

ಬಹು ಆಯ್ಕೆಯ ಗಣಿತ, ವಿಜ್ಞಾನ, ಸಮಾಜ ವಿಜ್ಞಾನ ವಿಷಯದ ಪ್ರಶ್ನೆಪತ್ರಿಕೆಗಳು ಲಭ್ಯವಾಗಿದ್ದು ಉತ್ತರವನ್ನು OMR ಶೀಟ್‌ನಲ್ಲಿ ನಮೂದಿಸಬೇಕು. ಪ್ರತೀ ವಿಷಯಕ್ಕೆ ತಲಾ 40 ಅಂಕಗಳ ಒಟ್ಟು 120 ಅಂಕದ ಪ್ರಶ್ನೆ ಪತ್ರಿಕೆ ಇದಾಗಿದ್ದು 3 ಗಂಟೆಗಳ ಕಾಲ ಅವಕಾಶ ನೀಡಲಾಗಿದೆ.

ಇನ್ನೆರಡು ದಿನದಲ್ಲಿ ಮಾತೃ ಭಾಷೆ ಸೇರಿ 3 ವಿಷಯಗಳ ಪ್ರಶ್ನೆಪತ್ರಿಕೆ ಪ್ರಕಟವಾಗುತ್ತೆ. ಪ್ರಶ್ನೆ ಪತ್ರಿಕೆಯನ್ನು ವೆಬ್ ಸೈಟ್‌ನಲ್ಲಿ ಡೌನ್ ಲೋಡ್ ಮಾಡಿ ಅಭ್ಯಾಸ ಮಾಡಲು ಸೂಚಿಸಲಾಗಿದೆ. ಹಾಗೂ ಶಿಕ್ಷಕರಿಗೂ ಈ ಕುರಿತು ಕಾರ್ಯ ಪ್ರವೃತ್ತರಾಗುವಂತೆ ಸೂಚನೆ ನೀಡಲಾಗಿದೆ.

ಇನ್ನು ಎಸ್‌ಎಸ್‌ಎಲ್​ಸಿ ಪರೀಕ್ಷೆ ಜುಲೈ ಅಂತ್ಯದಲ್ಲಿ ನಡೆಸುವ ಸಾಧ್ಯತೆಗಳಿವೆ.  20 ದಿನಗಳ ಮುಂಚೆ ಪರೀಕ್ಷೆ ಬಗ್ಗೆ ಘೋಷಿಸುವುದಾಗಿ ಈ ಹಿಂದೆ ಸಚಿವ ಸುರೇಶ್ ಕುಮಾರ್ ಹೇಳಿದ್ದನ್ನು ಇಲ್ಲಿ ಸ್ಮರಿಸಹುದು.

Follow Us:
Download App:
  • android
  • ios