ಕನ್ನಡ ಮಾಧ್ಯಮ ಶಾಲಾ ಮಕ್ಕಳಿಗೆ ಗುಡ್ ನ್ಯೂಸ್, ಇನ್ಮುಂದೆ ಸ್ಪೋಕನ್ ಇಂಗ್ಲೀಷ್ ಕ್ಲಾಸ್
ಸರ್ಕಾರಿ ಕನ್ನಡ ಮಾಧ್ಯಮ ಶಾಲಾ ಮಕ್ಕಳಿಗೆ ಕರ್ನಾಟಕ ಶಿಕ್ಷಣ ಇಲಾಖೆ ಗುಡ್ ನ್ಯೂಸ್ ನೀಡಿದೆ. ಖಾಸಗಿ ಶಾಲಾ ಮಕ್ಕಳ ಜೊತೆ ಓದಿನಲ್ಲಿ ಸರ್ಕಾರಿ ಕನ್ನಡ ಮಾಧ್ಯಮ ಶಾಲಾ ಮಕ್ಕಳು ಸ್ಪರ್ಧೆ ನೀಡುವಂತೆ ಮಾಡಲು ಶಿಕ್ಷಣ ಇಲಾಖೆ ಮಹತ್ವದ ನಿರ್ಧಾರ ಮಾಡಿದೆ.
ವರದಿ-ನಂದೀಶ್ ಮಲ್ಲೇನಹಳ್ಳಿ, ಏಷ್ಯಾನೆಟ್ ಸುವರ್ಣ ನ್ಯೂಸ್
ಬೆಂಗಳೂರು(ಜುಲೈ 20): ಸರ್ಕಾರಿ ಶಾಲೆಗಳಲ್ಲೂ ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಗೆ ಸ್ಪೋಕನ್ ಇಂಗ್ಲೀಷ್ ಕ್ಲಾಸ್ ನಡೆಸಲು ಶಿಕ್ಷಣ ಇಲಾಖೆ ಚಿಂತನೆ ನಡೆಸಿದೆ. ಸರ್ಕಾರಿ ಶಾಲಾ ಮಕ್ಕಳು ಖಾಸಗಿ ಶಾಲೆಯ ಮಕ್ಕಳಿಗೆ ಕಾಂಪಿಟೇಟ್ ಮಾಡಲು ಶಿಕ್ಷಣ ಇಲಾಖೆ ಮುಂದಾಗಿದೆ.ಮಕ್ಕಳಿಗೆ ಸಂವಹನ ಭಾಷೆಯಾಗಿ ಇಂಗ್ಲೀಷ್ ಕಲಿಸಲು ಶಿಕ್ಷಣ ಇಲಾಖೆ ಪ್ಲಾನ್ ರೂಪಿಸಿದೆ.
ನಗರ ಹಾಗೂ ಗ್ರಾಮೀಣ ಪ್ರದೇಶ ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಗೆ ಇಂಗ್ಲೀಷ್ ಕಬ್ಬಿಣದ ಕಡಲೆ ಇದ್ದಂತೆ.ಇದನ್ನು ಸರಳೀಕರಣಗೊಳಿಸಲು ಸ್ಪೋಕನ್ ಇಂಗ್ಲೀಷ್ ತರಗತಿಗಳನ್ನು ಪ್ರಾರಂಭಿಸಲು ಮುಂದಾಗಿದ್ದೇವೆ ಅಂತ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿಸಿ ನಾಗೇಶ್ ಮಾಹಿತಿ ನೀಡಿದರು..
ಕರ್ನಾಟಕದಲ್ಲಿ 13,800 ಸರ್ಕಾರಿ ಶಾಲೆ ವಿಲೀನ?: ಸಚಿವ ನಾಗೇಶ ಹೇಳಿದ್ದಿಷ್ಟು
ಕನ್ನಡ ಮಾಧ್ಯಮದ ಮಕ್ಕಳಿಗೆ ಸ್ಪೋಕನ್ ಇಂಗ್ಲೀಷ್ ತರಗತಿ
ಕನ್ನಡ ಮಾಧ್ಯಮದಲ್ಲಿ ಓದುತ್ತಿರುವ ಮಕ್ಕಳಿಗೆ ವಾರಕ್ಕೊಮ್ಮೆ ಅಥವಾ ಎರಡು ದಿನಕ್ಕೊಮ್ಮೆಸ್ಪೋಕನ್ ಇಂಗ್ಲೀಷ್ ತರಗತಿ ಆಯೋಜನೆ ಮಾಡಲು ವೇಳಾಪಟ್ಟಿ ಸಿದ್ಧತೆ ಮಾಡಿಕೊಳ್ಳುತ್ತಿದೆ. ಮೈಸೂರಿನ ಸಂಸ್ಥೆ ಮೂಲಕ ಶಿಕ್ಷಕರಿಗೆ ಟ್ರೈನಿಂಗ್ ಕೊಡಲಾಗುತ್ತಿದ್ದು, ಮಕ್ಕಳಿಗೆ
ಸ್ಪೋಕನ್ ಇಂಗ್ಲೀಷ್ ಶಿಕ್ಷಕರು, ಅತಿಥಿ ಶಿಕ್ಷಕರಿಗೆ ಹೊಣೆ ನೀಡಲಾಗಿದೆ. ಮಕ್ಕಳು ನಿರರ್ಗಳವಾಗಿ ಇಂಗ್ಲೀಷ್ ಮಾತನಾಡುವುದೇ ಈ ಯೋಜನೆಯ ಉದ್ದೇಶ ಮುಖ್ಯ ಉದ್ದೇಶವಾಗಿದೆ ಅಂತ ಶಿಕ್ಷಣ ಇಲಾಖಾ ಅಧಿಕಾರಿಗಳು ತಿಳಿಸಿದ್ದಾರೆ.
ಮೊದಲ ಹಂತವಾಗಿ ಸರಕಾರಿ ಮಾದರಿ ಶಾಲೆಗಳಲ್ಲಿ ಆರಂಭ
ಮೊದಲ ಹಂತವಾಗಿ ಗ್ರಾಮೀಣ ಭಾಗದ ಶಾಲೆಗಳಲ್ಲಿ ಹಾಗೂ ಎಲ್ಲ ಸರ್ಕಾರಿ ಶಾಲೆಗಳಲ್ಲಿ ಸ್ಪೋಕನ್ ಇಂಗ್ಲಿಷ್ ಕ್ಲಾಸ್ ನಡೆಸಲು ನಿರ್ಧಾರ ಶಿಕ್ಷಣ ಇಲಾಖೆ ಚಿಂತನೆ ನಡೆಸಿದೆ.ಆಲ್ಲದೆ ಸರ್ಕಾರ 15 ಸಾವಿರ ಶಾಲಾ ಶಿಕ್ಷಕರ ನೇಮಕಾತಿ ನಂತರ ಈ ಯೋಜನೆ ಆರಂಭವಾಗಲಿದೆ ಅಂತ ಶಿಕ್ಷಣ ಸಚಿವರು ಹೇಳಿದ್ದಾರೆ.ಆಲ್ಲದೆ ಇಂಗ್ಲೀಷ್ ಮಕ್ಕಳಿಗೆ ಅನಿವಾರ್ಯವಾಗಿದೆ ಹಾಗೂ ಸ್ಪೋಕನ್ ಇಂಗ್ಲಿಷ್ ಮಾಡಿಸುವ ಕೆಲಸವನ್ನ ಸ್ಪೋಕನ್ ಇಂಗ್ಲಿಷ್ ಶಿಕ್ಷಕರೇ ಪಾಠ ಮಾಡ್ತಾರೆ ಅಂತ ಸಚಿವರು ಹೇಳಿದ್ದಾರೆ.
SSLC ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ
ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟವಾಗಿದೆ. ಆದ್ರೆ, ವೆಬ್‌ಸೈಟ್‌ನಲ್ಲಿ ನಾಳೆ (ಜುಲೈ 21) ಫಲಿತಾಂಶ ಲಭ್ಯವಾಗಲಿದೆ.
ಈ ಬಗ್ಗೆ ಮಾಹಿತಿ ನೀಡಿದ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿಸಿ ನಾಗೇಶ್, 2022ರ ಜೂನ್ 27ರಿಂದ ಜುಲೈ 4ರ ವರೆಗೆ ನಡೆದ ಎಸ್‌ಎಸ್ಎಲ್‌ಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, 37,479 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಪೂರಕ ಪರೀಕ್ಷೆಗೆ 94,669 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. ಉತ್ತೀರ್ಣ ಪ್ರಮಾಣ ಶೇ.39.59 ಇದೆ ಎಂದರು.
ನಾಳೆ(ಗುರುವಾರ) ಮಧ್ಯಾಹ್ನ 12 ಗಂಟೆ ನಂತರ ಈ ವೆಬ್‌ಸೈಟ್‌ನಲ್ಲಿ ( https://karresults.nic.in/ ) ಫಲಿತಾಂಶ ವೀಕ್ಷಿಸಬಹುದು. ಅಲ್ಲದೇ ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿರುವ ಫೋನ್ ನಂಬರ್‌ಗಳಿಗೆ ಎಸ್ಎಂಎಸ್ ಮೂಲಕವೂ ಫಲಿತಾಂಶ ಕಳುಹಿಸಲಾಗುತ್ತದೆ ಎಂದು ತಿಳಿಸಿದರು.