Karnataka Guest Lecturer Salary Hike: ಸಂಕ್ರಾಂತಿ ಕೊಡುಗೆ, ಅತಿಥಿ ಉಪನ್ಯಾಸಕರ ವೇತನ ದುಪ್ಪಟ್ಟು ಹೆಚ್ಚಿಸಿದ ಸರಕಾರ

ಅತಿಥಿ ಉಪನ್ಯಾಸಕರ ಬಹುದಿನಗಳ ಬೇಡಿಕೆ ಈಡೇರಿಸಲು ಸರ್ಕಾರ ಕೊನೆಗೂ ಒಪ್ಪಿದೆ.  ಅತಿಥಿ ಉಪನ್ಯಾಸಕರ ವೇತನ ಏರಿಕೆ ಮಾಡಲಾಗಿದೆ.

karnataka government agree to hike guest lecturer salary gow

ಬೆಂಗಳೂರು(ಜ.14): ಕರ್ನಾಟಕದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ (karnataka government first grade college) ಕರ್ತವ್ಯ ನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರ (Guest Lecturer) ಬಹುದಿನಗಳ ಬೇಡಿಕೆ ಈಡೇರಿಸಲು ಸರ್ಕಾರ ಕೊನೆಗೂ ಒಪ್ಪಿದೆ. ನಾನಾ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಹೋರಾಟಕ್ಕಿಳಿದಿದ್ದ ಸರಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರಿಗೆ ಸರಕಾರ ಸಂಕ್ರಾಂತಿಗೆ ಸಿಹಿಸುದ್ದಿ ಕೊಟ್ಟಿದ್ದು, ವೇತನವನ್ನು ದುಪ್ಪಟ್ಟಿಗಿಂತಲೂ ಹೆಚ್ಚು ಏರಿಸಿದೆ. ಜೊತೆಗೆ, ಸೆಮಿಸ್ಟರ್‌ವಾರು ನೇಮಕಾತಿಯನ್ನು ನಿಲ್ಲಿಸಿ, ಇನ್ನು ಮುಂದೆ ಇಡೀ ಶೈಕ್ಷಣಿಕ ವರ್ಷಕ್ಕೆ ನೇಮಿಸಿ ಕೊಳ್ಳುವುದಾಗಿ ಘೋಷಿಸಿದೆ. ಅತಿಥಿ ಉಪನ್ಯಾಸಕರ ವೇತನ (salary) 11,000 ರೂ ನಿಂದ 28,000 ರೂ. ಗೆ ಏರಿಕೆ ಮಾಡಲಾಗಿದೆ. ಐದು ವರ್ಷ ಕ್ಕಿಂತ ಹೆಚ್ಚು ವರ್ಷ ಕೆಲಸ ಮಾಡಿರುವವರಿಗೆ , ಯುಜಿಸಿ ಕ್ವಾಲಿಫಿಕೇಷನ್ ಇರುವವರಿಗೆ  13,000 ರೂ ನಿಂದ 32,000 ರೂ. ಗೆ ಏರಿಕೆ ಮಾಡಲಾಗಿದೆ. ಇದು ಸಂಕ್ರಾಂತಿ ಹಬ್ಬದ ಕೊಡುಗೆ ಎಂದು ಉನ್ನತ ಶಿಕ್ಷಣ ಸಚಿವ ಡಾ ಅಶ್ವಥ್ ನಾರಾಯಣ್ (Ashwath Narayan) ಸುದ್ದಿಗೋಷ್ಟಿ ನಡೆಸಿ ಮಾಹಿತಿ ನೀಡಿದ್ದಾರೆ.

ಅತಿಥಿ ಉಪನ್ಯಾಸಕರ ಬೇಡಿಕೆ ಇದ್ದು, ಇವರ ಬೇಡಿಕೆಗೆ ಅನುಗುಣವಾಗಿ, ಸಿಎಂ ನೇತೃತ್ವದಲ್ಲಿ ಸಮಿತಿ ರಚಿಸಲಾಗಿತ್ತು. ಅಪರ ಮುಖ್ಯ ಕಾರ್ಯದರ್ಶಿ ಕುಮಾರ್ ನಾಯಕ್ ನೇತೃತ್ವದಲ್ಲಿ ಸಮಿತಿ ಮಾಡಲಾಗಿತ್ತು. ಈ ಸಮಿತಿ ಸರ್ಕಾರದ ಮುಂದೆ ವರದಿ ನೀಡಿತ್ತು. ಇದನ್ನು ಮುಖ್ಯಮಂತ್ರಿಗಳು ಗಮನಿಸಿದ್ದು,  ವರದಿಯನ್ನು ಅನುಷ್ಠಾನಕ್ಕೆ ತರಲು ಒಪ್ಪಿಗೆ ಸೂಚಿಸಿದ್ದಾರೆ ಎಂದು ಅಶ್ವಥ್ ನಾರಾಯಣ್  ಹೇಳಿದ್ದಾರೆ. 

2002ರಲ್ಲಿ ಅತಿಥಿ ಉಪನ್ಯಾಸಕರ ಯೋಜನೆ ಪ್ರಾರಂಭವಾಯ್ತು. UGC ಕ್ವಾಲಿಫಿಕೇಷನ್ ಇರೋರು, 5 ವರ್ಷ ಸೇವೆ ಸಲ್ಲಿಸಿದವರಿಗೆ 32 ಸಾವಿರ. UGC ಕ್ವಾಲಿಫಿಕೇಷನ್ ಇಲ್ಲದವರಿಗೆ 30ಸಾವಿರ ನೀಡಲಾಗುವುದು. UGC ಇಲ್ಲದೆ ಐದು‌ ವರ್ಷ ಸೇವೆ ಸಲ್ಲಿಸಿದವರಿಗೆ 28 ಸಾವಿರ ನೀಡಲಾಗುವುದು ಎಂದಿದ್ದಾರೆ. ಜತೆಗೆ, ಇವರು ನಿಗದಿತ ಶೈಕ್ಷಣಿಕ ಅರ್ಹತೆ ಗಳಿಸಿಕೊಳ್ಳಲು 3 ವರ್ಷಗಳ ಕಾಲಾವಕಾಶ ನೀಡಲಾಗಿದೆ. ಅತಿಥಿ ಉಪನ್ಯಾಸಕರಿಗೆಲ್ಲ ಇನ್ನು ಮುಂದೆ ಪ್ರತೀ ತಿಂಗಳು 10ರೊಳಗೆ ವೇತನ ಪಾವತಿಸಲಾಗುವುದು ಎಂದು ಹೇಳಿದ್ದಾರೆ.

Kannada Medium BE: ಆರಂಭವಾದ ವರ್ಷವೇ ಸೊನ್ನೆ ಸುತ್ತಿದ ಕನ್ನಡ ಮಾಧ್ಯಮ ಕೋರ್ಸ್

ಜ.17ರಿಂದ ಅರ್ಜಿ  ಸಲ್ಲಿಕೆ ಆರಂಭ: ಇದಲ್ಲದೆ, ಅತಿಥಿ ಉಪನ್ಯಾಸಕರ ಸುಗಮ ನೇಮಕಾತಿಗೆ ಆನ್‌ಲೈನ್ ಪೋರ್ಟಲ್ ಕೂಡ ಅಭಿವೃದ್ಧಿ ಪಡಿಸಲಾಗಿದ್ದು, ಅರ್ಹ ಅಭ್ಯರ್ಥಿಗಳು ಇದರಲ್ಲಿ ಜ.17ರಿಂದ ಅರ್ಜಿ ಹಾಕಿಕೊಳ್ಳಬಹುದು. ಇದಕ್ಕೆ ಒಂದು ವಾರ ಕಾಲಾವಕಾಶವಿದ್ದು, ಅಭ್ಯರ್ಥಿಗಳು ತಮ್ಮ ಇಷ್ಟದ 5 ಸರಕಾರಿ ಕಾಲೇಜುಗಳನ್ನು ಆಯ್ಕೆ ಮಾಡಲು ಅವಕಾಶ ಮಾಡಿಕೊಡಲಾಗಿದೆ. ಇದರೊಂದಿಗೆ ಅತಿಥಿ ಉಪನ್ಯಾಸಕರಿಗೆ ಸೂಕ್ತ ಕಾರ್ಯಭಾರ ಇರುವಂತೆ ವ್ಯವಸ್ಥೆ ಮಾಡಲಾಗುವುದು ಎಂದು ಹೇಳಿದ್ದಾರೆ.

ಮುಖ್ಯಮಂತ್ರಿಗಳಿಂದ ಸ್ಪಷ್ಟನೆ: ಈ ಬಗ್ಗೆ ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ "ಕರ್ನಾಟಕದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರ ಬಹುದಿನಗಳ ಬೇಡಿಕೆ ಈಡೇರಿಸಲು ಸರ್ಕಾರ ಒಪ್ಪಿದೆ. ಈ ಸಂಬಂಧ ರಚಿಸಲಾಗಿದ್ದ  ಸಮಿತಿಯು ಮಾಡಿದ್ದ ಶಿಫಾರಸುಗಳ ಜಾರಿಗೆ ಹಣಕಾಸಿನ ಅನುಮೋದನೆ ನೀಡಲಾಗಿದೆ. ಇದರೊಂದಿಗೆ  ಅತಿಥಿ ಉಪನ್ಯಾಸಕರಿಗೆ ಅನುಕೂಲ ಆಗಲಿದೆ." ಎಂದು ಟ್ವೀಟ್ ಮಾಡಿ ಸ್ಪಷ್ಟಪಡಿಸಿದ್ದಾರೆ. ಜೊತೆಗೆ ಕರ್ನಾಟಕ ಸರ್ಕಾರದ ವತಿಯಿಂದ ಎಲ್ಲ ಅತಿಥಿ ಉಪನ್ಯಾಸಕರಿಗೆ ಸಂಕ್ರಾಂತಿಯ ಶುಭಾಶಯಗಳನ್ನು ಕೋರುತ್ತೇನೆ ಎಂದು ಮುಖ್ಯಮಂತ್ರಿ ಶುಭ ಹಾರೈಸಿದ್ದಾರೆ.

Latest Videos
Follow Us:
Download App:
  • android
  • ios