Asianet Suvarna News Asianet Suvarna News

ಶಾಲೆಗಳಲ್ಲಿ ಹುಟ್ಟುಹಬ್ಬ ಆಚರಣೆ ನಿಷೇಧಿಸಿ ರಾಜ್ಯ ಸರ್ಕಾರ ಆದೇಶ

ಕರ್ನಾಟಕದ ಎಲ್ಲಾ ಶಾಲೆಗಳಲ್ಲಿ ಹುಟ್ಟುಹಬ್ಬ ಆಚರಣೆ ಮಾಡದಂತೆ ಬ್ಯಾನ್ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

karnataka government  bans birthday celebration in  schools gow
Author
First Published Jun 19, 2024, 7:55 PM IST

ಬೆಂಗಳೂರು (ಜೂ.19): ಕರ್ನಾಟಕದ ಎಲ್ಲಾ ಶಾಲೆಗಳಲ್ಲಿ ಹುಟ್ಟುಹಬ್ಬ ಆಚರಣೆ ಮಾಡದಂತೆ ಬ್ಯಾನ್ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಸರ್ಕಾರಿ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ಮಕ್ಕಳ ಪಾಲನಾ ಸಂಸ್ಥೆಗಳಲ್ಲಿ ಸಂಸ್ಥೆಯ ಸಿಬ್ಬಂದಿ, ಅಧಿಕಾರಿಗಳು, ಖಾಸಗಿ ವ್ಯಕ್ತಿಗಳ (ಸೆಲೆಬ್ರಿಟಿಗಳು, ಗಣ್ಯವ್ಯಕ್ತಿಗಳು ಇತ್ಯಾದಿ.) ಹಾಗೂ ಅವರ ಮಕ್ಕಳ ಹುಟ್ಟುಹಬ್ಬ ಆಚರಣೆಯನ್ನು ನಿಷೇಧಿಸಿದೆ ಎಂದು ಸುತ್ತೋಲೆ ಹೊರಡಿಸಿದೆ.

ಈ ಹಿಂದೆ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವ್ಯಾಪ್ತಿಗೆ ಬರುವ ವಸತಿ ಶಾಲಾ- ಕಾಲೇಜುಗಳಲ್ಲಿ ಇನ್ನು ಮುಂದೆ ಧಾರ್ಮಿಕ ಹಬ್ಬಗಳನ್ನು ಆಚರಿಸುವಂತಿಲ್ಲ. ರಾಷ್ಟ್ರೀಯ ಹಬ್ಬ, ನಾಡಹಬ್ಬ ಮತ್ತು ಜಯಂತಿಗಳನ್ನು ಮಾತ್ರ ಆಚರಿಸುವಂತೆ ಫೆಬ್ರವರಿ 2024ರಲ್ಲಿ ಆದೇಶಿಸಲಾಗಿತ್ತು. 

ಸರ್ಕಾರದ ಸೂಚನೆಯಲ್ಲಿ ಈ ರೀತಿ ವಿವರಣೆ ನಿಡಿಲಾಗಿದೆ. ಮಕ್ಕಳ ಪಾಲನಾ ಸಂಸ್ಥೆಗಳಲ್ಲಿ ಸಂಸ್ಥೆಯ ಸಿಬ್ಬಂದಿ, ಅಧಿಕಾರಿಗಳು, ಖಾಸಗಿ ವ್ಯಕ್ತಿಗಳು, Celebrities ರಾಜಕೀಯ ಮುಖಂಡರುಗಳು, ಮಠಾದೀಶರು ಇತ್ಯಾದಿ... ತಮ್ಮ ಅಥವಾ ತಮ್ಮ ಮಕ್ಕಳ ಜನ್ಮ ದಿನವನ್ನು ಕೇಕ್ ಕತ್ತರಿಸಿ ಮಕ್ಕಳಿಗೆ ಸಿಹಿ ಇತ್ಯಾದಿ.. ಹಂಚುವ ಮೂಲಕ ಆದ್ದೂರಿಯಾಗಿ ಆಚರಿಸುತ್ತಿರುವುದು ತಿಳಿದು ಬಂದಿದೆ.

ನಾನು 1ರಿಂದ 4ನೇ ಕ್ಲಾಸ್ ಓದಿಲ್ಲ, ಡೈರೆಕ್ಟ್ 5ನೇ ಕ್ಲಾಸಿಗೆ ಶಾಲೆಗೆ ಸೇರಿದೆ; ಸಿಎಂ ಸಿದ್ದರಾಮಯ್ಯ

ಸರ್ಕಾರಿ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ಮಕ್ಕಳ ಪಾಲನಾ ಸಂಸ್ಥೆಗಳಿಗೆ ದಾಖಲಾಗುವ ಮಕ್ಕಳು ಕಾನೂನು ಸಂಘರ್ಷಕ್ಕೆ ಒಳಗಾದ ಮಕ್ಕಳು, ಬಾಲ ಕಾರ್ಮಿಕ ಪದ್ಧತಿಯಿಂದ ರಕ್ಷಿಸಲ್ಪಟ್ಟಿ, ಬಾಲ್ಕ ವಿವಾಹಕ್ಕೆ ಒಳಗಾದ, ಅತ್ಯಾಚಾರಕ್ಕೆ ಒಳಗಾದ, ತಂದೆ-ತಾಯಿಯಿಂದ ತಿರಸ್ಕರಿಸಲ್ಪಟ್ಟಿ, ತಾಯಿ ಅಥವಾ ತಂದೆ ಇಲ್ಲದ, ಭಿಕ್ಷಾಟನೆಯಿಂದ ರಕ್ಷಿಸಲ್ಪಟ್ಟ ಇತ್ಯಾದಿ ಪಾಲನೆ ಮತ್ತು ರಕ್ಷಣೆಯ ಅವಶ್ಯವಿರುವ ಮಕ್ಕಳನ್ನು ಮಕ್ಕಳ ಕಲ್ಯಾಣ ಸಮಿತಿಯ/ಬಾಲನ್ಯಾಯ ಮಂಡಳಿಗಳ ಆದೇಶದ ಮೂಲಕ ಮಕ್ಕಳ ಪಾಲನಾ ಸಂಸ್ಥೆಗಳಿಗೆ ದಾಖಲು ಮಾಡಲಾಗಿರುತ್ತದೆ. ಈ ಎಲ್ಲಾ ವರ್ಗದ ಮಕ್ಕಳು ಸಮಾಜದಿಂದ ವಂಚಿತರಾಗಿ ಮನನೊಂದವರಾಗಿರುವುದರಿಂದ ಮಕ್ಕಳ ಪಾಲನಾ ಸಂಸ್ಥೆಯಲ್ಲಿ ದಾಖಲಾಗಿರುವ ಮಕ್ಕಳ ಮನಸ್ಸಿಗೆ * ಖುಷಿ ತರುವಂತಹ ಸೃಜನಶೀಲತೆಯ ಕಾರ್ಯಕ್ರಮಗಳನ್ನು ಏರ್ಪಡಿಸಿ ಮಕ್ಕಳ ಮನಸ್ಸು ಸನ್ನಡ ಹಾಗೂ ಆಹ್ಲಾದಕರವಾಗುವಂತೆ ಪ್ರೋತ್ಸಾಹಿಸಬೇಕಾಗುತ್ತದೆ.

ತಿಂಗಳ ಮೂರನೇ ಶನಿವಾರ ಬ್ಯಾಗ್‌ ರಹಿತ ದಿನ: ಸೂಚನೆ

ಆದರೆ ಸರ್ಕಾರಿ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ಮಕ್ಕಳ ಪಾಲನಾ ಸಂಸ್ಥೆಗಳಲ್ಲಿ ಸಂಸ್ಥೆಯ Celebrities ಇತ್ಯಾದಿ ಗಣ್ಯವ್ಯಕ್ತಿಗಳು ಮಕ್ಕಳ ಹುಟ್ಟುಹಬ್ಬವನ್ನು ಕೇಕ್ ಕತ್ತರಿಸಿ ಮಕ್ಕಳಿಗೆ ಸಿಹಿ ಇತ್ಯಾದಿ ಹಂಚು. ಹಂಚುವ ಅದ್ದೂರಿ ಕಾರ್ಯಕ್ರಮಗಳು ಸಂಸ್ಥೆಯಲ್ಲಿ ಆಚರಿಸುವುದರಿಂದ ಮಕ್ಕಳ ಪಾಲನಾ ಸಂಸ್ಥೆಯ ಮಕ್ಕಳಿಗೆ ಅವರ ಹುಟ್ಟು ಹಬ್ಬ ಈ ರೀತಿ ಆಚರಿಸಿಕೊಳ್ಳಲು ಸಾಧ್ಯವಾಗದೇ ಆಚರಿಸಲ್ಪಡುತ್ತಿರುವ ಹುಟ್ಟುಹಬ್ಬದೊಂದಿಗೆ ಹೋಲಿಕೆ (evaparision ಮಾಡಿಕೊಂಡಲ್ಲಿ ಈ ಮಕ್ಕಳ ಮನಸ್ಸಿನ ಮೇಲೆ ದುಷ್ಪರಿಣಾಮ ಬೀರಿ, ಮನಸ್ಸಿಗೆ ಆಘಾತವಾಗಿ ಮಕ್ಕಳ ಮನಸ್ಸು ದುರ್ಬಲವಾಗುವ ಸಂಭವ ಹೆಚ್ಚಾಗಿರುತ್ತದೆ. ಇಂತಹ ಆಚರಣೆಗಳು ಸದರಿ ವಮಕ್ಕಳ ಆತ್ಮಾಭಿಮಾನ, ಆತ್ಮಗೌರವಕ್ಕೆ ಧಕ್ಕೆಯನ್ನುಂಟು ಮಾಡುತ್ತವೆ.

 

Latest Videos
Follow Us:
Download App:
  • android
  • ios