Asianet Suvarna News Asianet Suvarna News

ಸಿಇಟಿ ಎಡವಟ್ಟು, ತಜ್ಞರ ಸಮಿತಿ ರಚನೆ ಮಾಡಿ ತನಿಖೆಗೆ ಸರ್ಕಾರ ಆದೇಶ

ಸಿಇಟಿ ಪರೀಕ್ಷೆ ಅವಾಂತರದ ಪ್ರಶ್ನೆಗಳನ್ನ ಪರಿಶೀಲಿಸಲು ತಜ್ಞರ ಸಮಿತಿ ರಚನೆ ಮಾಡಲಾಗಿದೆ. ತಜ್ಞರ ಸಮಿತಿ ರಚಿಸಿ ರಾಜ್ಯ ಸರ್ಕಾರ ತನಿಖೆಗೆ ಆದೇಶಿಸಿದೆ.

Karnataka government formation  expert committee to investigate KCET  exam 2024 gow
Author
First Published Apr 22, 2024, 3:19 PM IST

ಬೆಂಗಳೂರು (ಏ.22): ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ)ಯಲ್ಲಿ ಪಠ್ಯ ವ್ಯಾಪ್ತಿಯ ಹೊರಗಿನ ಪ್ರಶ್ನೆಗಳನ್ನು ಕೇಳಲಾಗಿದೆ ಎನ್ನುವ ದೂರುಗಳ ಮಧ್ಯೆಯೇ ಸಿಇಟಿ ಪರೀಕ್ಷೆ ಅವಾಂತರ ಖಂಡಿಸಿ ಎಬಿವಿಪಿ ಪ್ರತಿಭಟನೆ ನಡೆಸಿದೆ.  ಇದರ ಬೆನ್ನಲ್ಲೇ ಔಟ್ ಆಫ್ ಸಿಲೆಬಸ್ ಪ್ರಶ್ನೆಗಳನ್ನ ಪರಿಶೀಲಿಸಲು ತಜ್ಞರ ಸಮಿತಿ ರಚನೆ ಮಾಡಲಾಗಿದೆ. ತಜ್ಞರ ಸಮಿತಿ ರಚಿಸಿ ರಾಜ್ಯ ಸರ್ಕಾರ ತನಿಖೆಗೆ ಆದೇಶಿಸಿದೆ. ಉನ್ನತ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಶ್ರೀಕರ್ ಎಂ.ಎಸ್ ಆದೇಶ ಹೊರಡಿಸಿದ್ದಾರೆ.

ಸಿಇಟಿ ಎಡವಟ್ಟು, ಸರ್ಕಾರ ಮೌನ, ವಿದ್ಯಾರ್ಥಿಗಳ ಕುತ್ತಿಗೆಗೆ ಕೈ ಹಾಕಿ ಪೊಲೀಸರ ಗೂಂಡಾ ವರ್ತನೆ

 ಇದೇ 18, 19 ರಂದು ಸಿಇಟಿ ಪರೀಕ್ಷೆ ನಡೆದಿತ್ತು. ಭೌತಶಾಸ್ತ್ರ, ರಾಸಾಯನ ಶಾಸ್ತ್ರ, ಗಣಿತ ಹಾಗೂ ಜೀವಶಾಸ್ತ್ರ  ವಿಷಯಗಳಿಗೆ ನಡೆದ ಪರೀಕ್ಷೆಯಲ್ಲಿ ಸಿಲೆಬಸ್‌ ನಲ್ಲಿ ಇಲ್ಲದ ಪರಿಕ್ಷೆಯನ್ನು ಕೇಳಲಾಗಿತ್ತು. ಇದಕ್ಕೆ ವ್ಯಾಪಕ ವಿರೋಧ ವ್ಯಕ್ತವಾದ ಬೆನ್ನಲ್ಲೇ ಈಗಾಗಲೇ ಪರೀಕ್ಷೆ ಸಂಬಂಧಿಸಿದಂತೆ ಆಕ್ಷೇಪಣೆ ಸಲ್ಲಿಸಲು ಇದೇ 27 ರವರೆಗೆ ಕಾಲಾವಕಾಶ ಕೂಡ ಕೊಡಲಾಗಿದೆ.

ಪ್ರಶ್ನೆ ಪತ್ರಿಕೆಗಳಲ್ಲಿ ಪಠ್ಯೇತರ ಪ್ರಶ್ನೆಗಳನ್ನು ಕೇಳಲಾಗಿದೆ ಎನ್ನುವ ದೂರುಗಳ ಬಗ್ಗೆ ಪ್ರತಿಕ್ರಿಯಿಸಿರುವ ಕೆಇಎ ಅಂತಹ ಅನುಮಾನಗಳು ಇದ್ದಲ್ಲಿ ಆಕ್ಷೇಪಣೆಗಳನ್ನು ಸಲ್ಲಿಸಬಹುದು. ನಂತರ ಅದನ್ನು ವಿಷಯ ತಜ್ಞರ ತಂಡ ಪರಿಶೀಲಿಸಿ ಸೂಕ್ತವಾದ ಸಲಹೆಯನ್ನು ನೀಡಲಿದೆ. ಆ ನಂತರ ಸ್ಪಷ್ಟವಾದ ತೀರ್ಮಾನ ಮಾಡಲಾಗುವುದು ಎಂದು ಹೇಳಿದೆ.

ಸಿಇಟಿ ಪರೀಕ್ಷೆ ಮುಗಿದ ಮೇಲೆ ಪಿಯು ಹೊಸ ಪಠ್ಯದ ಮಾಹಿತಿ ಕೇಳಿದ ಕೆಇಎ!

ಪ್ರಶ್ನೆ ಪತ್ರಿಕೆಯನ್ನು ಸಿದ್ಧಪಡಿಸಲು ಕೆಲವೊಂದು ನಿಯಮಗಳಿದ್ದು, ಆ ಪ್ರಕಾರವೇ ಮಾಡಲಾಗಿರುತ್ತದೆ. ಇದರ ನಡುವೆಯೂ ಆಕ್ಷೇಪಣೆ ಸಲ್ಲಿಸಲು ಅವಕಾಶ ಇರುತ್ತದೆ. ಈ ವಿಷಯದಲ್ಲಿ ಆತಂಕ ಪಡುವ ಅಗತ್ಯ ಏನೂ ಇಲ್ಲ. ಈ ಸಂಬಂಧ ಆಕ್ಷೇಪಣೆ ಸಲ್ಲಿಸಲು ಕೆಇಎ ವೆಬ್‌ಸೈಟ್ ನಲ್ಲಿ ಲಿಂಕ್ ಬಿಡುಗಡೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವೃತ್ತಿಪರ ಕೋರ್ಸ್‍ಗಳಾದ ಎಂಜಿನಿಯರಿಂಗ್, ವೈದ್ಯಕೀಯ, ಅಗ್ರಿಕಲ್ಚರ್, ಪ್ಯಾರಾ ಮೆಡಿಕಲ್ ಪದವಿ ಪ್ರವೇಶಕ್ಕಾಗಿ ದ್ವಿತೀಯ ಪಿಯು ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಲಾಗುತ್ತದೆ.

Follow Us:
Download App:
  • android
  • ios