ದ್ವಿತೀಯ ಪಿಯು ಪರೀಕ್ಷೆ ಯಾವಾಗ? ಮಹತ್ವದ ಸುಳಿವು ಕೊಟ್ಟ ಸರ್ಕಾರ

* ದ್ವಿತೀಯ ಪಿಯು ಪರೀಕ್ಷೆ ಮತ್ತು ಸಿಇಟಿ ನಡೆಸುವ ಬಗ್ಗೆ ಮಹತ್ವ ಸುಳಿವು
* ಪಿಯು ಬೋರ್ಡ್ ನಿರ್ದೇಶಕಿ ಆರ್ ಸ್ನೇಹಲ್ ಮಹತ್ವ ಮಾಹಿತಿ
* ರಾಜ್ಯ ಸರ್ಕಾರದ ನಿಲುವಿನ ಬಗ್ಗೆ ಕೇಂದ್ರ ಸರ್ಕಾರಕ್ಕೆ ನೀಡಿದ ಸಲಹೆಯನ್ನು ಮಾಧ್ಯಮಗಳಿಗೆ ತಿಳಿಸಿದ ಆರ್ ಸ್ನೇಹಲ್

Karnataka Govt All Set to conduct PUC Exams In June rbj

ಬೆಂಗಳೂರು, (ಮೇ.25): ದ್ವಿತೀಯ ಪಿಯು ಪರೀಕ್ಷೆ ಮತ್ತು ಸಿಇಟಿ ನಡೆಸುವ ಬಗ್ಗೆ ಕರ್ನಾಟಕದ ಅಭಿಪ್ರಾಯ ಕೇಳಿದ್ದ ಕೇಂದ್ರ ಸರ್ಕಾರಕ್ಕೆ ರಾಜ್ಯ ಸರ್ಕಾರ ತನ್ನ ಅಭಿಪ್ರಾಯಗಳನ್ನು ತಿಳಿಸಿದೆ.

ರಾಜ್ಯ ಸರ್ಕಾರದ ನಿಲುವಿನ ಬಗ್ಗೆ ಕೇಂದ್ರ ಸರ್ಕಾರಕ್ಕೆ ನೀಡಿದ ಸಲಹೆಯನ್ನು ಪಿಯು ಬೋರ್ಡ್ ನಿರ್ದೇಶಕಿ ಆರ್ ಸ್ನೇಹಲ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಪಿಯುಸಿ ಪರೀಕ್ಷೆ: ಶಿಕ್ಷಣ ಸುಧಾರಣೆಗಳ ಸಲಹಾಗಾರರಿಂದ ಸರ್ಕಾರಕ್ಕೆ ಮಹತ್ವದ ಸಲಹೆ

 ರಾಜ್ಯದಲ್ಲಿ ಜುಲೈನಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆಸಲು ಸಿದ್ಧತೆ ನಡೆಸಲಾಗಿದೆ. ಪರೀಕ್ಷಾ ಪ್ರಕ್ರಿಯೆ ಪೂರ್ಣಗೊಳ್ಳಲು 75 ದಿನಗಳ ಅಗತ್ಯವಿದೆ. ಪರೀಕ್ಷೆ ಪಠ್ಯ, ಪ್ರಶ್ನೆ ಪತ್ರಿಕೆ ಸಿದ್ಧಪಡಿಸುವ ಪ್ರಕ್ರಿಯೆ ಪೂರ್ಣಗೊಂಡಿದೆ. ಈಗ ಮತ್ತೊಮ್ಮೆ ಪಠ್ಯ ಕಡಿತ, ಪ್ರಶ್ನೆಪತ್ರಿಕೆ ಬದಲಾವಣೆ ಮಾಡುವುದು ಕಷ್ಟಕರವಾಗುತ್ತದೆ. ಕೇಂದ್ರದ ಸಲಹೆ, ಸಭೆ ನಂತರ ಪರೀಕ್ಷಾ ಪದ್ಧತಿ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ ಎಂದು ರಾಜ್ಯ ಸರ್ಕಾರ ತಿಳಿಸಿದೆ.

ಕೇಂದ್ರದ ಸಲಹೆ ಹಾಗೂ ಸಭೆ ಬಳಿಕ ಪರೀಕ್ಷಾ ಪದ್ದತಿ ಹಾಗೂ ಪಠ್ಯ ಕಡಿತದ ಬಗ್ಗೆ ಚಿಂತನೆ ಮಾಡಲಾಗಿದೆ. ಈಗಾಗಲೇ ಪ್ರಶ್ನೆ ಪತ್ರಿಕೆಗಳನ್ನು ಸಿದ್ದಪಡಿಸುವ ಪ್ರಕ್ರಿಯೆ ಪೂರ್ಣಗೊಂಡಿದೆ. ಜತೆಗೆ ಪಠ್ಯವನ್ನೂ ಸಹ ರೂಪಿಸಲಾಗಿದೆ. ಮತ್ತೆ ಈಗ ಪಠ್ಯ ಕಡಿತ ಪ್ರಶ್ನೆ ಪತ್ರಿಕೆ ಬದಲಾವಣೆ ಮಾಡುವುದು ಕಷ್ಟವಾಗುತ್ತದೆ ಎಂದು ತಿಳಿಸಿರುವ ರಾಜ್ಯ ಸರ್ಕಾರ, ಸಿಬಿಎಸ್‌ಇ 12 ನೇ ತರಗತಿ ಪರೀಕ್ಷೆಯ ನಂತರವೇ ವೃತ್ತಿಪರ ಕೋರ್ಸ್‌ಳಿಗೆ ಪ್ರವೇಶ ಪರೀಕ್ಷೆಗಳನ್ನು ನಡೆಸುವಂತೆ ಮನವಿ ಮಾಡಿದೆ. 

Latest Videos
Follow Us:
Download App:
  • android
  • ios