ಬೆಂಗಳೂರು, (ಅ.16): ಕೊರೋನಾ ಭೀತಿ ಹಿನ್ನೆಲೆಯಲ್ಲಿ ರಾಜ್ಯದ ಪದವಿಪೂರ್ವ ಉಪನ್ಯಾಸಕರಿಗೂ ನವೆಂಬರ್ 1, 2020ರವರೆಗೆ ರಜೆ ನೀಡಿ ರಾಜ್ಯ ಸರ್ಕಾರ ಘೋಷಿಸಿದೆ. 

ಈಗಾಗಲೇ ಸರ್ಕಾರಿ ಶಾಲಾ ಶಿಕ್ಷಕರಿಗೆ ಅಕ್ಟೋಬರ್ 30ರ ವರೆಗೆ ರಜೆ ನೀಡಲಾಗಿದೆ. ಇದರ ಬೆನ್ನಲ್ಲೇ ಇದೀಗ ಉಪನ್ಯಾಸಕರಿಗೂ ಸಹ ರಜೆ ಕೊಡಲಾಗಿದೆ.

ವಿದ್ಯಾರ್ಥಿಗಳಿಗೆ, ಶಿಕ್ಷಕರಿಗೆ ಗುಡ್‌ ನ್ಯೂಸ್ ಕೊಟ್ಟ ರಾಜ್ಯ ಸರ್ಕಾರ...!

ಮಾಜಿ ವಿಧಾನಪರಿಷತ್ ಸದಸ್ಯ ರಮೇಶ್ ಬಾಬು ಅವರು, ಶಾಲೆಗಳಿಗೂ ರಜೆ ಘೋಷಿಸಿದಂತೆ ಪದವಿಪೂರ್ವ ಕಾಲೇಜು ಉಪನ್ಯಾಸಕರಿಗೂ ರಜೆ ಘೋಷಿಸುವಂತೆ ಸರ್ಕಾರಕ್ಕೆ ಪತ್ರ ಬರೆದು ಮನವಿ ಮಾಡಿದ್ದರು. ಇದರ ಬೆನ್ನಲ್ಲೇ ರಾಜ್ಯ ಸರ್ಕಾರ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರಿಗೂ ಅಕ್ಟೋಬರ್ 21ರಿಂದ ನವೆಂಬರ್ 1ರವರೆಗೆ ರಾಜ್ಯ ಸರ್ಕಾರ ರಜೆ ಘೋಷಣೆ ಮಾಡಿದೆ.

ಈ ಕುರಿತಂತೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ಟ್ವಿಟ್ ಮಾಡಿದ್ದು, ದಿನಾಂಕ.21.10.2020 ರಿಂದ 01.11.2020 ರವರೆಗೆ ಪದವಿಪೂರ್ವ ಶಿಕ್ಷಣ‌ ಉಪನ್ಯಾಸಕರುಗಳಿಗೆ ದಸರಾ‌ ರಜೆ ಘೋಷಿಸಲು ಇಲಾಖಾಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ತಿಳಿಸಿದ್ದಾರೆ.