* ಸರ್ಕಾರವನ್ನು ಆತಂಕಕ್ಕೆ ದೂಡಿದ ಮಕ್ಕಳಲ್ಲಿನ ಅಪೌಷ್ಟಿಕತೆ  * ಮಕ್ಕಳಲ್ಲಿನ ಅಪೌಷ್ಟಿಕತೆ ನಿವಾರಿಸಲು ಮಹತ್ವದ ಕ್ರಮ ಕೈಗೊಂಡ ರಾಜ್ಯ ಸರ್ಕಾರ* ಮೊಟ್ಟೆ, ಬಾಳೆಹಣ್ಣು ವಿತರಿಸಲು ರಾಜ್ಯ ಸರ್ಕಾರ  ನಿರ್ಧಾರ

ಬೆಂಗಳೂರು, (ನ.24):  ಮಕ್ಕಳಲ್ಲಿ ಅಪೌಷ್ಟಿಕತೆ (Malnutrition In Children) ಹಿನ್ನೆಲೆಯಲ್ಲಿ ಮೊಟ್ಟೆ (Egg), ಬಾಳೆಹಣ್ಣು(Banana) ವಿತರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. 

ಡಿಸೆಂಬರ್ ತಿಂಗಳಿ​ನಿಂದ 1ರಿಂದ 8ನೇ ತರಗತಿ ವಿದ್ಯಾರ್ಥಿಗಳಿಗೆ(Students) ಮೊಟ್ಟೆ, ಬಾಳೆಹಣ್ಣು ವಿತರಿಸಲು ನಿರ್ಧಾರ ಮಾಡಲಾಗಿದ್ದು, ಈ ಕಾರ್ಯಕ್ರಮ ಅನುಷ್ಠಾನಕ್ಕೆ ರಾಜ್ಯ ಸರ್ಕಾರ (Karnataka Government) ಇಂದು (ನ.24) ಸುತ್ತೋಲೆ ಹೊರಡಿಸಿದೆ.

Koppal: 300 ವಿದ್ಯಾರ್ಥಿಗಳು, ಇರುವುದು 3 ತರಗತಿಗಳು ಮಾತ್ರ, ಸರ್ಕಾರಿ ಮಾದರಿ ಶಾಲೆಯ ದುಸ್ಥಿತಿ!

7 ಜಿಲ್ಲೆಗಳಲ್ಲಿ ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ. ಯಾದಗಿರಿ, ಕಲಬುರಗಿ, ಬಳ್ಳಾರಿ, ಕೊಪ್ಪಳ, ರಾಯಚೂರು, ಬೀದರ್, ವಿಜಯಪುರ ಜಿಲ್ಲೆಯ ಮಕ್ಕಳಲ್ಲಿ ಅಪೌಷ್ಟಿಕತೆ ಕಂಡುಬಂದಿದೆ. ಇದರಿಂದ ಈ ಸರ್ಕಾರ ನಿರ್ಧಾರ ಕೈಗೊಂಡಿದೆ.

ಕೆಲವು ಜಿಲ್ಲೆಗಳಲ್ಲಿ ಶೇಕಡಾ 70 ಕ್ಕಿಂತಲೂ ಹೆಚ್ಚು ಮಕ್ಕಳಿಗೆ ಅಪೌಷ್ಟಿಕತೆ ಸಮಸ್ಯೆ ಕಂಡುಬಂದಿದೆ. 14 ಲಕ್ಷಕ್ಕೂ ಹೆಚ್ಚು ಮಕ್ಕಳು ರಕ್ತಹೀನತೆಯಿಂದ ಬಳಲುತ್ತಿದ್ದಾರೆ. ಅಪೌಷ್ಟಿಕತೆ ಹಿನ್ನೆಲೆ ಮೊಟ್ಟೆ, ಬಾಳೆಹಣ್ಣು ವಿತರಣೆಗೆ ತೀರ್ಮಾನ ಮಾಡಲಾಗಿದೆ.

ಯಾದಗಿರಿ (Yadgir) ಜಿಲ್ಲೆಯಲ್ಲಿ ಶೇಕಡಾ 74, ಕಲಬುರಗಿ ಜಿಲ್ಲೆಯಲ್ಲಿ ಶೇಕಡಾ 72.4, ಬಳ್ಳಾರಿ(BellarY) ಜಿಲ್ಲೆಯಲ್ಲಿ ಶೇಕಡಾ 72.3, ಕೊಪ್ಪಳ(Koppal) ಜಿಲ್ಲೆಯಲ್ಲಿ ಶೇಕಡಾ 70.7, ರಾಯಚೂರು(Raichur) ಜಿಲ್ಲೆಯಲ್ಲಿ ಶೇಕಡಾ 70.6, ಬೀದರ್(Bidar) ಜಿಲ್ಲೆಯಲ್ಲಿ ಶೇಕಡಾ 69.1, ವಿಜಯಪುರ ಜಿಲ್ಲೆಯಲ್ಲಿ ಶೇಕಡಾ 68 ಮಕ್ಕಳಿಗೆ ಅಪೌಷ್ಟಿಕತೆ ಸಮಸ್ಯೆ ಕಂಡುಬಂದಿದೆ.

ಏಳು ಜಿಲ್ಲೆಗಳ 14 ಲಕ್ಷಕ್ಕೂ ಹೆಚ್ಚು ಮಕ್ಕಳು ರಕ್ತಹೀನತೆಯಿಂದಲೂ ಬಳಲುತ್ತಿರುವ ಬಗ್ಗೆ ತಿಳಿದುಬಂದಿದೆ. ಅಪೌಷ್ಟಿಕತೆ ರಕ್ತಹೀನತೆ ಬಳಲುವಿಕೆ ಹಿನ್ನೆಲೆಯಲ್ಲಿ ಡಿಸೆಂಬರ್ ನಿಂದ ಮೊಟ್ಟೆ ಬಾಳೆಹಣ್ಣು ವಿತರಿಸಲು ಸರ್ಕಾರದ ನಿರ್ಧಾರ ಕೈಗೊಳ್ಳಲಾಗಿದೆ.

6 ರಿಂದ 15ನೇ ವಯೋಮಾನವರೆಗಿನ ಒಟ್ಟು 14,44,322 ಶಾಲಾ ಮಕ್ಕಳಿಗೆ ಮಧ್ಯಾಹ್ನ ಬಿಸಿಯೂಟದೊಂದಿಗೆ ಪ್ರತಿ ಮಾಹೆಗೆ 12 ಮೊಟ್ಟೆ ಹಾಗೂ ಬಾಳೆಹಣ್ಣು ವಿತರಿಸಲು ಸುತ್ತೋಲೆ ಹೊರಡಿಸಿದ್ದು, ಒಂದು ಮೊಟ್ಟೆ ಸೇವಿಸದ ವಿದ್ಯಾರ್ಥಿಗಳಿಗೆ ಬಾಳೆಹಣ್ಣು ವಿತರಿಸಲು ಕ್ರಮಕೈಗೊಳ್ಳುವಂತೆ ಸರ್ಕಾರ ತಿಳಿಸಿದೆ. 

ರಾಜ್ಯದಲ್ಲಿ ನ.8ರಿಂದ ಎಲ್ಲ ಅಂಗನವಾಡಿ ಕೇಂದ್ರಗಳು (Anganwadi) ಹಾಗೂ ಪೂರ್ವ ಪ್ರಾಥಮಿಕ ತರಗತಿಗಳು (ಎಲ್‌ಕೆಜಿ-ಯುಕೆಜಿ) ಆರಂಭವಾಗಿವೆ. ಈಗಾಗಲೇ ಕಳೆದ ಆಗಸ್ಟ್‌ನಿಂದ ಹಂತ ಹಂತವಾಗಿ 1ರಿಂದ 12ನೇ ತರಗತಿ ಮಕ್ಕಳಿಗೆ ಭೌತಿಕ ತರಗತಿಗಳು ಆರಂಭಗೊಂಡಿವೆ. ಈಗ ಸರ್ಕಾರದ ಅನುಮತಿಯೊಂದಿಗೆ 18 ತಿಂಗಳ ಬಳಿಕ ಎಲ್‌ಕೆಜಿ, ಯುಕೆಜಿ ಅಂಗನವಾಡಿ ಕೇಂದ್ರಗಳು ಶುರುವಾಗಿವೆ.