ಟಫ್ ರೂಲ್ಸ್ ಮಧ್ಯೆ ಪರೀಕ್ಷೆ ನಡೆಸಲು ವಿಟಿಯುಗೆ ಗ್ರೀನ್ ಸಿಗ್ನಲ್!
ಕೊರೋನಾ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಟಫ್ ರೂಲ್ಸ್ ಜಾರಿಗೆ ತಂದಿದೆ. ಇದರ ಮಧ್ಯೆ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವ ವಿದ್ಯಾಲಯ (ವಿಟಿಯು) ಪರೀಕ್ಷೆಗಳನ್ನು ನಡೆಸಲು ಸರ್ಕಾರ ಗ್ರೀನ್ ಸಿಗ್ನಲ್ ಕೊಟ್ಟಿದೆ.
ಬೆಂಗಳೂರು, (ಏ.20): ರಾಜ್ಯದಲ್ಲಿ ಕೊರೋನಾ ಎರಡನೇ ಅಲೆ ತಾಂಡವವಾಡುತ್ತಿದೆ. ಈ ಹಿನ್ನೆಲೆಯಲ್ಲಿ ಸರ್ಕಾರ ಕೊರೊನಾ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಹೊಸ ಮಾರ್ಗಸೂಚಿಯನ್ನು ಪ್ರಕಟಿಸಿದೆ.
ಏಪ್ರಿಲ್ 21ರಿಂದ ಮೇ 14ರವರೆಗೆ ರಾಜ್ಯದಲ್ಲಿ ಈ ಹೊಸ ನಿಯಮಗಳು ಜಾರಿಯಲ್ಲಿರಲಿದ್ದು, ಶಾಲಾ-ಕಾಲೇಜು ಸೇರಿ ಎಲ್ಲ ಶಿಕ್ಷಣಸಂಸ್ಥೆಗಳು ಬಂದ್ ಮಾಡುವಂತೆ ರಾಜ್ಯ ಸರ್ಕಾರ ಮಾರ್ಗಸೂಚಿಯಲ್ಲಿ ಉಲ್ಲೇಖಿಸಿದೆ. ಆದ್ರೆ, ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವ ವಿದ್ಯಾಲಯ (ವಿಟಿಯು) ಪರೀಕ್ಷೆಗಳನ್ನು ನಡೆಸಲು ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ.
UGC NET, UPSC ಪರೀಕ್ಷೆ ಮುಂದೂಡಿಕೆ
ಏಪ್ರಿಲ್ 19 ರಿಂದ ಪ್ರಾರಂಭವಾಗಿರುವ ವಿಶ್ವೇಶ್ವರಯ್ಯ ತಾಂತ್ರಿಕ ಮಹಾವಿದ್ಯಾಲಯ ( ವಿಟಿಯು) ಇಂಜಿನಿಯರಿಂಗ್ ಪರೀಕ್ಷೆ ಶನಿವಾರ ಹಾಗೂ ಭಾನುವಾರ ಪರೀಕ್ಷೆ ಇರೋದಿಲ್ಲ. ಉಳಿದ ದಿನಗಳಲ್ಲಿ ಪರೀಕ್ಷೆ ನಡೆಯಲಿದೆ ಎಂದು ವಿಟಿಯು ಕುಲಪತಿ ಡಾ.ಕರಿಸಿದ್ದಪ್ಪ ಏಷ್ಯಾನೆಟ್ ಸುವರ್ಣ ನ್ಯೂಸ್ ಗೆ ಮಾಹಿತಿ ನೀಡಿದ್ದಾರೆ.
ಈಗಾಗಲೇ ರಾಜ್ಯದ ಹಲವು ವಿಶ್ವವಿದ್ಯಾಲಯಗಳು ಪರೀಕ್ಷೆಗಳನ್ನು ಮುಂದೂಡಿವೆ. ಯುಜಿಸಿ ನೆಟ್, ಯುಪಿಎಸ್ ಪರೀಕ್ಷೆಗಳನ್ನು ಸಹ ಮುಂದೂಡಲಾಗಿದೆ. ಆದ್ರೆ, ವಿಟಿಯು ಪರೀಕ್ಷೆ ನಡೆಸಲು ಅನುಮತಿ ಕೊಟ್ಟಿರುವುದು ಚರ್ಚೆಗೆ ಗ್ರಾಸವಾಗಿದೆ.