Asianet Suvarna News Asianet Suvarna News

ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ಕೊಟ್ಟ ರಾಜ್ಯ ಸರ್ಕಾರ

ಕೊರೋನಾ ಆರ್ಥಿಕ ಸಂಕಷ್ಟದಲ್ಲಿರುವ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದೆ. 

Karnataka Govt invites scholarship applications for OBC Students rbj
Author
Bengaluru, First Published Feb 6, 2021, 8:04 PM IST

ಬೆಂಗಳೂರು, (ಫೆ.06): ಹಿಂದುಳಿದ ವರ್ಗಕ್ಕೆ ಸೇರಿದ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದ್ದು, 2020-21 ನೇ ಸಾಲಿನ ವಿದ್ಯಾರ್ಥಿ ವೇತನಕ್ಕಾಗಿ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.

ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳು ಹಾಗೂ ಅಲೆಮಾರಿ/ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ 2020-21 ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ, ಶುಲ್ಕ ವಿನಾಯಿತಿ. 

ಶಾಲಾ-ಕಾಲೇಜು ದಾಖಲಾತಿ ದಿನಾಂಕ ವಿಸ್ತರಣೆ: ಎಲ್ಲಿಯವರೆಗೆ..?

ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ, ನರ್ಸಿಂಗ್ ವಿದ್ಯಾರ್ಥಿಗಳಿಗೆ ಶಿಷ್ಯ ವೇತನ ಸೌಲಭ್ಯಕ್ಕಾಗಿ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಹ ವಿದ್ಯಾರ್ಥಿಗಳು ದಿನಾಂಕ 05:03:2021 ರೊಳಗಾಗಿ ಅರ್ಜಿ ಸಲ್ಲಿಸಲು ಹಿಂದುಳಿದ ವರ್ಗಗಳ ಇಲಾಖೆ ಪ್ರಕಟಣೆ ಹೊರಡಿಸಿದೆ. 

ವಿದ್ಯಾರ್ಥಿಗಳು www.ssp.postmatric.karnataka.gov.in ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ವಿದ್ಯಾರ್ಥಿಗಳು ಆಯಾ ತಾಲೂಕಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಕಛೇರಿಯನ್ನು ಸಂಪರ್ಕಿಸಬಹುದಾಗಿದೆ.

Follow Us:
Download App:
  • android
  • ios