Asianet Suvarna News Asianet Suvarna News

ರಾಜ್ಯ ಸರ್ಕಾರಿ ಶಾಲಾ ಮಕ್ಕಳಿಗೆ ಶೀಘ್ರವೇ ದೊರೆಯಲಿದೆ ಸಾರಿಗೆ ಸೌಲಭ್ಯ

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಸಾರಿಗೆ ಸೌಲಭ್ಯ ದೊರೆಯಲಿದೆ ಎಂದು ಬುಧವಾರ ಮಾಹಿತಿ ನೀಡಿದ್ದಾರೆ.

Karnataka govt school students to get transport says education Minister BC Nagesh gow
Author
Bengaluru, First Published Mar 31, 2022, 5:26 PM IST

ಬೆಂಗಳೂರು(ಮಾ.31):  ರಾಜ್ಯದ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಸಾರಿಗೆ ಸೌಲಭ್ಯ ಒದಗಿಸಲು ಹಲವು ಖಾಸಗಿ ಕಂಪನಿಗಳೊಂದಿಗೆ ಒಪ್ಪಂದಕ್ಕೆ ಸಹಿ ಹಾಕಲಾಗುತ್ತಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ( Primary and secondary education minister BC Nagesh) ಅವರು ಬುಧವಾರ ಹೇಳಿದ್ದಾರೆ.

ಕೆನರಾ ಬ್ಯಾಂಕ್ (Canara Bank) ವತಿಯಿಂದ ಕಾರ್ಪೊರೇಟ್ ಸಾಮಾಜಿಕ ಜವಾಬ್ದಾರಿ (ಸಿಎಸ್ಆರ್) ಅಡಿ ಒದಗಿಸಲಾಗಿರುವ 2 ಮಾರುತಿ ಇಕೋ ವಾಹನಗಳನ್ನು ಗೃಹ ಕಚೇರಿ ಕೃಷ್ಣದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM basavaraj bommai) ಅವರ ಸಮ್ಮುಖದಲ್ಲಿ ಮಂಗಳವಾರ (ಮಾ.29) ಕೆನರಾ ಬ್ಯಾಂಕ್ ಅಧಿಕಾರಿಗಳು ಶಿಕ್ಷಣ ಇಲಾಖೆಗೆ ಹಸ್ತಾಂತರಿಸಿದರು.

ಯೋಜನೆ ಕುರಿತು ಮಾತನಾಡಿದ ಸಚಿವ ನಾಗೇಶ್ ಅವರು, ರಾಜ್ಯದ ವಿವಿಧ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅಗತ್ಯ ಕಟ್ಟಡ ಮತ್ತು ಕೊಠಡಿ, ಆಟದ ಮೈದಾನ, ಕಂಪ್ಯೂಟರ್ ಲ್ಯಾಬ್ ಸೇರಿದಂತೆ ಇನ್ನಿತರ ಸೌಲಭ್ಯಗಳನ್ನು ಹೊಂದಿರುವ ಸರ್ಕಾರಿ ಶಾಲೆಗಳನ್ನು ಆಯ್ಕೆ ಮಾಡಲಾಗುತ್ತದೆ. ಆ ಶಾಲೆಗಳಲ್ಲಿ ತರಗತಿಗೊಬ್ಬ ಶಿಕ್ಷಕರನ್ನು ನೇಮಿಸಲಾಗುತ್ತದೆ. ಇದರಿಂದ ಆ ಶಾಲೆಗಳಲ್ಲಿ ಶಿಕ್ಷಣದ ಗುಣಮಟ್ಟ ಹೆಚ್ಚಳವಾಗುತ್ತದೆ. ಅಂತಹ ಶಾಲೆಗಳಿಗೆ ಮಕ್ಕಳನ್ನು ಆಕರ್ಷಿಸಿ ಶಾಲೆಗೆ ಕರೆ ತರಲು ವಾಹನಗಳ ವ್ಯವಸ್ಥೆ ಮಾಡಲಾಗುತ್ತದೆ.

Vijayapura: 81ರ ಇಳಿವಯಸ್ಸಲು ಸ್ನಾತ್ತಕೋತ್ತರ ಪರೀಕ್ಷೆ ಬರೆದ ಅಜ್ಜ!

ಕಾರ್ಪೊರೇಟ್ ಕಂಪನಿಗಳು, ಬ್ಯಾಂಕ್‌ಗಳು, ಕಂಪನಿಗಳು, ಕೈಗಾರಿಕೆಗಳು, ಶೈಕ್ಷಣಿಕ ಕ್ಷೇತ್ರದ ಅಭಿವೃದ್ಧಿಗೆ ಆಸಕ್ತಿ ಹೊಂದಿರುವ ಸಂಸ್ಥೆಗಳು, ವ್ಯಕ್ತಿಗಳ ಮೂಲಕ ಮಾದರಿ ಶಾಲೆಗಳಿಗೆ ವಾಹನಗಳ ವ್ಯವಸ್ಥೆ ಮಾಡಲಾಗುತ್ತದೆ. ನಿರ್ದಿಷ್ಟ ಅವಧಿಗೆ ವಾಹನಕ್ಕೆ ಚಾಲಕರು, ಇಂಧನ ಮತ್ತು ನಿರ್ವಹಣೆಯನ್ನು ಆಯಾ ಸಂಸ್ಥೆಗಳೆ ನಿರ್ವಹಿಸುವ ಕುರಿತು ಒಪ್ಪಂದ ಮಾಡಿಕೊಳ್ಳಲಾಗುತ್ತದೆ ಎಂದು ಹೇಳಿದರು.

ರಾಜ್ಯದ ಕೆಲವು ಭಾಗಗಳಲ್ಲಿರುವ ಸರ್ಕಾರಿ ಶಾಲೆಗಳಿಗೆ ಮಕ್ಕಳನ್ನು ಕರೆತರಲು ಖಾಸಗಿ ಸಹಭಾಗಿತ್ವದಲ್ಲಿ ವಾಹನಗಳ ವ್ಯವಸ್ಥೆ ಇದೆ. ಸಾಕಷ್ಟು ಮಕ್ಕಳು ವಾಹನಗಳ ಪ್ರಯೋಜನ ಪಡೆದು ಶಾಲೆಗೆ ಆಗಮಿಸುತ್ತಿದ್ದಾರೆ. ಶಾಲೆ ಅಭಿವೃದ್ಧಿ ಮೇಲುಸ್ತುವಾರಿ ಸಮಿತಿ (ಎಸ್‌ಡಿಎಂಸಿ), ಗ್ರಾಮಸ್ಥರು, ಶಿಕ್ಷಣ ಇಲಾಖೆಯ ಆಸಕ್ತಿಯಿಂದ ಇಂತಹ ಪ್ರಯತ್ನಗಳು ಯಶಸ್ವಿಯಾಗಿವೆ. ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಣದ ಗುಣಮಟ್ಟ ಹೆಚ್ಚಳ, ಎಲ್ಲ ಭಾಷೆ ಮತ್ತು ವಿಷಯಗಳಿಗೆ ಶಿಕ್ಷಕರ ಲಭ್ಯತೆ, ಮಕ್ಕಳ ನಡುವೆ ಸ್ಪರ್ಧಾತ್ಮಕ ಮನೋಭಾವ ಮೂಡಿಸುವುದು ಮತ್ತು ಮೂಲಸೌಕರ್ಯಗಳ ಸಂಪೂರ್ಣ ಸದುಪಯೋಗ ಮಾಡಿಕೊಳ್ಳುವ ಗುರಿಯನ್ನು ಹೊಂದಲಾಗಿದೆ ಎಂದು ತಿಳಿಸಿದರು.

ಶಿಕ್ಷಣದ ಅಭಿವೃದ್ಧಿ, ಸಮಾಜ ಸೇವೆಯ ಮನೋಭಾವದಿಂದ ಆಸಕ್ತಿ ಇರುವ ಯಾವುದೇ ಕಂಪನಿ, ಸಂಘ-ಸಂಸ್ಥೆಗಳು ಸರ್ಕಾರಿ ಶಾಲೆಗಳಿಗೆ ವಾಹನ ಒದಗಿಸಲು ಮುಂದೆ ಬರಬಹುದು. ಹಂತ ಹಂತವಾಗಿ ಸರ್ಕಾರಿ ಶಾಲೆಗಳನ್ನು ಮಾದರಿ ಶಾಲೆಗಳಾಗಿ ಅಭಿವೃದ್ಧಿಪಡಿಸಲಾಗುತ್ತದೆ ಎಂದು ಹೇಳಿದರು.

Kalaburagi SSLC Exam ವಿದ್ಯಾರ್ಥಿಗಳಿಗೆ ಚೀಟಿ ಕೊಡಲು ಗೋಡೆ ಹತ್ತಿ ಸರ್ಕಸ್!

ಹಲಾಲ್ ವಿಷಯದಲ್ಲಿ ಸರ್ಕಾರ ಮೂಗು ತೂರಿಸುವುದಿಲ್ಲ: ಹಲಾಲ್ ಕಟ್ ಮಾಂಸವನ್ನು ಸ್ವೀಕರಿಸುವುದು, ಬಿಡುವುದು ಜನರಿಚ್ಛೆ. ಸರ್ಕಾರ ಈ ವಿಷಯದಲ್ಲಿ ಮೂಗು ತೂರಿಸುವುದಿಲ್ಲ ಎಂದು ಶಿಕ್ಷಣ ಸಚಿವ ಬಿ ಸಿ ನಾಗೇಶ್ ಹೇಳಿದ್ದಾರೆ.

ಮಡಿಕೇರಿಯಲ್ಲಿಂದು ಮಾತನಾಡಿದ ಅವರು, ಹಲಾಲ್ ಎನ್ನುವುದು ಮುಸ್ಲಿಮರ ಧಾರ್ಮಿಕ ಪದ್ಧತಿ, ಅದು ಸರ್ಕಾರದ ನಿಯಮದೊಳಗೆ ಬರುವುದಿಲ್ಲ. ಹಲಾಲ್ ಎಂದರೇನೆಂದು ಮಾಧ್ಯಮಗಳಲ್ಲಿ ನಿನ್ನೆ-ಮೊನ್ನೆ ಬಂದ ನಂತರವಷ್ಟೇ ಸಾಮಾನ್ಯ ಜನತೆಗೆ ಗೊತ್ತಾಗಿರುವುದು. ಅಷ್ಟರವರೆಗೆ ಗೊತ್ತಿರಲಿಲ್ಲ. ಸರ್ಕಾರದ ನಿಯಂತ್ರಣದೊಳಗೆ ಇಲ್ಲದಿರುವ ವಿಷಯದಲ್ಲಿ ಮೂಗು ತೂರಿಸುವ ಅವಶ್ಯಕತೆಯಿಲ್ಲ ಎಂದರು.

ಹಲಾಲ್‍ ಇಷ್ಟವಿದ್ದವರು ಅಂಗಡಿಗಳಲ್ಲಿ ಸ್ವೀಕರಿಸುತ್ತಾರೆ. ಇಷ್ಟವಿಲ್ಲದವರು ಬೇರೆ ಅಂಗಡಿಗಳಲ್ಲಿ ಕೊಳ್ಳುತ್ತಾರೆ. ಇದನ್ನು ಜನರೇ ಮಾಡಿಕೊಂಡಿದ್ದಾರೆ ವಿನಃ ನಾವು ಮಾಡಿದ್ದಲ್ಲ. ಈ ವಿಷಯವನ್ನು ಜನರು ಎತ್ತಿದ್ದಾರೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನರು ತಮಗೆ ಬೇಕಾದ ವಿಷಯವನ್ನು ಎತ್ತುವ ಅಧಿಕಾರವಿದೆ. ಈ ವಿಷಯವನ್ನು ಸರ್ಕಾರವಾಗಲೀ, ಯಾವುದೇ ರಾಜಕೀಯ ಪಕ್ಷವಾಗಲೀ ಎತ್ತಿಲ್ಲ ಎಂದರು.

Follow Us:
Download App:
  • android
  • ios