Karnataka Guest Lecturers ಅತಿಥಿ ಉಪನ್ಯಾಸಕರಿಗೆ ಸಿಹಿಸುದ್ದಿ

* ಅತಿಥಿ ಉಪನ್ಯಾಸಕರಿಗೆ ಒಂದೆರಡು ದಿನದಲ್ಲಿ ಸಿಹಿಸುದ್ದಿ
* ಭರವಸೆ ನೀಡಿದ ಉನ್ನತ ಶಿಕ್ಷಣ ಸಚಿವ ಡಾ ಸಿಎನ್ ಅಶ್ವತ್ಥ್ ನಾರಾಯಣ
* ಇಂದು(ಜ.11) ನಡದದ ಸಭೆಯ ನಂತರ ಸಚಿವರಿಂದ ಭರವಸೆ 

Karnataka guest lecturers Problems CM solve In Two Days Says Minister Ashwath Narayan rbj

ಬೆಂಗಳೂರು, (ಜ.11): ಕರ್ನಾಟಕದಲ್ಲಿರುವ(Karnataka)  14 ಸಾವಿರ ಅತಿಥಿ ಉಪನ್ಯಾಸಕರು (Guest Lecturers) ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಹರಿಸುವ ಸಂಬಂಧ ಈಗಾಗಲೇ ಮುಖ್ಯಮಂತ್ರಿಗಳೊಂದಿಗೆ ಸಾಕಷ್ಟು ಚರ್ಚಿಸಿದ್ದು, ಒಂದೆರಡು ದಿನಗಳಲ್ಲಿ ಫಲಿತಾಂಶ ಹೊರಬೀಳಲಿದೆ. ಆದ್ದರಿಂದ ಅತಿಥಿ ಉಪನ್ಯಾಸಕರು ಮುಷ್ಕರ ಕೈಬಿಟ್ಟು, ಬೋಧನೆಗೆ ಹಿಂದಿರುಗಬೇಕು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ(Dr CN Ashwath Narayan) ಮನವಿ ಮಾಡಿದ್ದಾರೆ.

ಅತಿಥಿ ಉಪನ್ಯಾಸಕರ ಬೇಡಿಕೆಗಳ ಈಡೇರಿಕೆ ಮತ್ತು ಸಮಸ್ಯೆಗಳನ್ನು ಕುರಿತು ರಾಜ್ಯ ಉನ್ನತ ಶಿಕ್ಷಣ ಪರಿಷತ್ತಿನ ಕಚೇರಿಯಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ (Basavaraj Horatti) ಮತ್ತು ತಮ್ಮ ನೇತೃತ್ವದಲ್ಲಿ ಮಂಗಳವಾರ ನಡೆದ ಮೂರು ಗಂಟೆಗಳ ಸಭೆಯ ನಂತರ ಅವರು ಈ ಭರವಸೆ ನೀಡಿದರು. ಸಭೆಯಲ್ಲಿ ಉಪನ್ಯಾಸಕರಿಗೆ ಸಂಬಂಧಿಸಿದ ನಾಲ್ಕೈದು ಸಂಘಗಳ ಪ್ರತಿನಿಧಿಗಳೂ ಭಾಗವಹಿಸಿದ್ದರು. 

Guest Lecturers ಅತಿಥಿ ಉಪನ್ಯಾಸಕರಿಗೆ ಭರವಸೆ ನೀಡಿದ ಸಚಿವ ಅಶ್ವತ್ಥನಾರಾಯಣ

ಸಭೆಯಲ್ಲಿ ಪಾಲ್ಗೊಂಡಿದ್ದ ವಿಧಾನ ಪರಿಷತ್ತಿನ ಹಲವು ಸದಸ್ಯರೊಂದಿಗೆ ವಿಷಯವನ್ನು ಕುರಿತು ಚರ್ಚಿಸಲಾಯಿತು. ಜೊತೆಗೆ ಅತಿಥಿ ಉಪನ್ಯಾಸಕರ ಸಂಘಗಳ ಪರವಾಗಿ ಸಲ್ಲಿಸಿದ ಅಹವಾಲುಗಳನ್ನು ಕೂಡ ಪರಿಶೀಲಿಸಲಾಯಿತು. 

ನಂತರ ಮಾತನಾಡಿದ ಸಚಿವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಜತೆ ಚರ್ಚೆ ನಡೆಸಿ ಅಂತಿಮ ತೀರ್ಮಾನ ಪ್ರಕಟಿಸಲಾಗುವುದು. ಸಿಎಂ ಅವರಿಗೆ ಕೊರೋನಾ ಸೋಂಕು ಕಾಣಿಸಿಕೊಂಡು ಚಿಕಿತ್ಸೆ ಪಡೆಯುತ್ತಿರುವ ಕಾರಣ ಒಂದೆರಡು ದಿನಗಳಲ್ಲಿ ಸೂಕ್ತ ತೀರ್ಮಾನ ಪ್ರಕಟಿಸಲಾಗುವುದು ಎಂದು ಸ್ಪಷ್ಟಪಡಿಸಿದರು.

 ಅತಿಥಿ ಉಪನ್ಯಾಸಕರ ಸಮಸ್ಯೆ ಇತ್ಯರ್ಥದಲ್ಲಿ ಆರ್ಥಿಕ ಹೊರೆ ಮುಂತಾದ ಅಂಶಗಳಿವೆ. ಒಟ್ಟಿನಲ್ಲಿ ವಿಚಾರವನ್ನು ಸಹಾನುಭೂತಿಯಿಂದ ಪರಿಶೀಲಿಸಲಾಗುತ್ತಿದೆ ಎಂದರು. 

ಸಭೆಯಲ್ಲಿ ಎಂಎಲ್ಸಿಗಳಾದ ಆಯನೂರು ಮಂಜುನಾಥ್, ಶಶಿಲ್ ನಮೋಶಿ, ಪುಟ್ಟಣ್ಣ, ಚಿದಾನಂದಗೌಡ, ಎಸ್.ವಿ.ಸುಂಕನೂರು, ಅರುಣ್ ಶಹಾಪುರ, ವೈ.ಎ. ನಾರಾಯಣಸ್ವಾಮಿ, ಕೆ.ಟಿ.ಶ್ರೀಕಂಠೇಗೌಡ, ಭೋಜೇಗೌಡ ಮತ್ತು ಹನುಮಂತ ನಿರಾಣಿ, ಉನ್ನತ ಶಿಕ್ಷಣ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಕುಮಾರ ನಾಯಕ್ ಮತ್ತು ಕಾಲೇಜು ಶಿಕ್ಷಣ ಇಲಾಖೆ ಆಯುಕ್ತ ಪಿ.ಪ್ರದೀಪ್ ಉಪಸ್ಥಿತರಿದ್ದರು.

ಇತ್ತೀಚೆಗೆ ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕ ಸಂಘದ ನಿಯೋಗವು  ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ(Dr CN Ashwath Narayan) ಅವರನ್ನು ಭೇಟಿ ಮಾಡಿತ್ತು.

ಅತಿಥಿ ಉಪನ್ಯಾಸಕರು(Guest Lecturer) ಎದುರಿಸುತ್ತಿರುವ ಸಮಸ್ಯೆಗಳನ್ನು ತಿಳಿಸಿದರು. ಜೊತೆಗೆ, ಈ ಸಮಸ್ಯೆಯನ್ನು ಆದಷ್ಟು ಬೇಗ ಪರಿಹರಿಸುವಂತೆ ನಿಯೋಗವು ಮನವಿ ಸಲ್ಲಿಸಿತು. ಈ ಸಂದರ್ಭದಲ್ಲಿ ಕಾಲೇಜು ಶಿಕ್ಷಣ ಇಲಾಖೆ ಆಯುಕ್ತ ಪಿ.ಪ್ರದೀಪ್ ಕೂಡ ಇದ್ದರು. 

ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, `ಅತಿಥಿ ಉಪನ್ಯಾಸಕರ ಸಮಸ್ಯೆಗಳ ಬಗ್ಗೆ ವಿಧಾನ ಪರಿಷತ್ ಸದಸ್ಯರು, ಅತಿಥಿ ಉಪನ್ಯಾಸಕರ ಸಂಘಟನೆಗಳು ಮತ್ತು ಸಂಬಂಧಿಸಿದ ಎಲ್ಲರೊಂದಿಗೂ ಚರ್ಚಿಸಿ, ಶೀಘ್ರದಲ್ಲೇ ಪರಿಹಾರ ಕಂಡುಹಿಡಿಯಲಾಗುವುದು ಎಂದು ಭರವಸೆ ನೀಡಿದ್ದರು.
 
ನಿಯೋಗದಲ್ಲಿ ಸಂಘಟನೆಯ ಅಧ್ಯಕ್ಷ ಡಾ. ರಘು ಅಕಮಂಚಿ, ವಿಧಾನ ಪರಿಷತ್ ಸದಸ್ಯ ಅರುಣ್ ಶಹಾಪುರ, ಎಬಿವಿಪಿ ಮುಖಂಡರಾದ ಸ್ವಾಮಿ ಮೊದಲಾದವರು ಇದ್ದರು. 

ಈ ಹಿಂದೆ ನಡೆದ ಸಭೆ
ಸೇವಾ ಭದ್ರತೆ, ವೇತನ ಹೆಚ್ಚಳ ಸೇರಿದಂತೆ ಪದವಿ ಕಾಲೇಜುಗಳ 14 ಸಾವಿರ ಅತಿಥಿ ಉಪನ್ಯಾಸಕರ (Guest Lecturers) ಬೇಡಿಕೆಗಳಿಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ರಚಿಸಿರುವ ಉನ್ನತ ಮಟ್ಟದ ಸಮಿತಿಗೆ ಒಂದು ತಿಂಗಳಲ್ಲಿ ವರದಿ ಸಲ್ಲಿಸುವಂತೆ ಸಭಾಪತಿ ಬಸವರಾಜ ಹೊರಟ್ಟಿ (Basavaraj Horatti) ಹಾಗೂ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್‌.ಅಶ್ವತ್ಥ ನಾರಾಯಣ (C. N. Ashwath Narayan) ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸೂಚನೆ ನೀಡಲಾಗಿದೆ.

ಸಮಿತಿ ನೀಡಿದ ವರದಿ ಆಧರಿಸಿ ಅತಿಥಿ ಉಪನ್ಯಾಸಕರ ಬೇಡಿಕೆ ಹಾಗೂ ಸಮಸ್ಯೆಗಳಿಗೆ ನ್ಯಾಯಯುತ ಪರಿಹಾರ ಕಲ್ಪಿಸಲು ಸೂಕ ಕ್ರಮ ವಹಿಸಲು ಸಭೆಯಲ್ಲಿ ತೀರ್ಮಾನಿಸಲಾಗಿದೆ. ಸಭೆ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವ ಅಶ್ವತ್ಥ ನಾರಾಯಣ, ಧಾರವಾಡ ಸೇರಿದಂತೆ ವಿವಿಧೆಡೆ ಕರ್ತವ್ಯ ಬಹಿಷ್ಕರಿಸಿ ಮುಷ್ಕರ ನಿರತರಾಗಿರುವ ಅತಿಥಿ ಉಪನ್ಯಾಸಕರು ಮುಷ್ಕರ ಕೈಬಿಟ್ಟು ಕರ್ತವ್ಯಕ್ಕೆ ಹಾಜರಾಗಬೇಕು. ಇಲ್ಲದಿದ್ದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆಯನ್ನೂ ನೀಡಿದ್ದರು.

Latest Videos
Follow Us:
Download App:
  • android
  • ios