Hijab Karnataka Breaking ಹಿಜಾಬ್-ಕೇಸರಿ ವಿವಾದಕ್ಕೆ ತಾತ್ಕಾಲಿಕ ಬ್ರೇಕ್ ಹಾಕಿದ ಹೈಕೋರ್ಟ್

* ಮಧ್ಯಂತರ ಆದೇಶ ಹೊರಡಿಸಿದ ಕರ್ನಾಟಕ ಹೈಕೋರ್ಟ್
* ಹಿಜಾಬ್-ಕೇಸರಿ ವಿವಾದಕ್ಕೆ ತಾತ್ಕಾಲಿಕ ಬ್ರೇಕ್ ಹಾಕಿದ ಹೈಕೋರ್ಟ್
* ಅಂತಿಮ ಆದೇಶ ನೀಡುವವರೆಗೆ ಆದೇಶ ಪಾಲಿಸಲು ಕೋರ್ಟ್ ಸೂಚನೆ

Karnataka high Court interim ordered about Hijab Row rbj

ಬೆಂಗಳೂರು, (ಫೆ.10): ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಹಿಜಾಬ್ (Hijab Row) ಹಾಗೂ ಕೇಸರಿ ಜಟಾಪಟಿಗೆ ಕರ್ನಾಟಕ ಹೈಕೋರ್ಟ್(Karnataka high Court ) ಬ್ರೇಕ್ ಹಾಕಿದೆ.

ಹೌದು..ತೀವ್ರ ಕುತೂಹಲ ಮೂಡಿಸಿದ್ದ ಹಿಜಾಬ್ ಸಂಘರ್ಷ ಪ್ರಕರಣ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಇಂದು (ಗುರುವಾರ) ಮಧ್ಯಂತರ ಆದೇಶ ಹೊರಡಿಸಿದ್ದು,  ಅಂತಿಮ ಆದೇಶ ನೀಡುವವರೆಗೆ ಯಾವುದೇ ಧಾರ್ಮಿಕ ಉಡುಗೆಗೆ ಅವಕಾಶ ಇಲ್ಲ ಎಂದು ಆದೇಶ ನೀಡಿದೆ.ಅಲ್ಲದೇ ತಕ್ಷಣವೇ ಶಾಲೆ-ಕಾಲೇಜು ಪ್ರಾರಂಭಿಸಿ ಎಂದು ಸರ್ಕಾರಕ್ಕೆ ಕೋರ್ಟ್ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ಅವರ ನೇತೃತ್ವದ ವಿಸ್ತೃತ ಪೀಠ ಈ ಮಧ್ಯಂತರ ಆದೇಶ ನೀಡಿದೆ.

Hijab Row ಕೇಸರಿ ಶಾಲಿನ ಪ್ರತಿಭಟನೆಗೆ ಸ್ಪಷ್ಟನೆ ಕೊಟ್ಟ ಹಿಂದೂ ಜಾಗರಣ ವೇದಿಕೆ ನಾಯಕ

ರಾಜ್ಯದ ಎಲ್ಲ ಶಾಲಾ-ಕಾಲೇಜುಗಳು ಶೀಘ್ರ ಆರಂಭವಾಗಬೇಕು. ಮುಂದಿನ ಆದೇಶದವರೆಗೆ ಧಾರ್ಮಿಕ ಗುರುತುಗಳನ್ನು ಬಳಸುವಂತಿಲ್ಲ. ಕೇಸರಿ ಶಾಲು ಅಥವಾ ಹಿಜಾಬ್ ಧರಿಸಿ ಶಾಲೆಗಳಿಗೆ ಹೋಗುವಂತಿಲ್ಲ ಎಂದು ನ್ಯಾಯಾಲಯವು ಮೌಖಿಕ ಆದೇಶದಲ್ಲಿ ತಿಳಿಸಿ ಪ್ರಕರಣವನ್ನು ಸೋಮವಾರಕ್ಕೆ (ಫೆ.15) ಮುಂದೂಡಿದೆ.

ರಾಜ್ಯದಲ್ಲಿ ಶಾಂತಿ ನೆಮ್ಮದಿ ಮರಳಬೇಕು.ಕೆಲವು ದಿನಗಳ ಕಾಲ ನೀವು ನಿಮ್ಮ ನಂಬಿಕೆ ಬಿಡುವುದು ಒಳ್ಳೆಯದು. ಕೆಲವೇ ದಿನಗಳಲ್ಲಿ ಅಂತಿಮ ತೀರ್ಪು ಪ್ರಕಟಿಸುತ್ತೇವೆ. ಅಲ್ಲಿಯವರೆಗೆ ಧಾರ್ಮಿಕ ಗುರುತುಗಳನ್ನ ಬಳಸಬಾರದು ಎಂದು ಕೋರ್ಟ್ ಹೇಳಿದೆ.

ನ್ಯಾಯಪೀಠವು ನಾವು ತಡೆಯಾಜ್ಞೆ ನೀಡಲು ಬಯಸಿದ್ದೇವೆ ಎಂದು ಹೇಳಿದಾಗ ಅರ್ಜಿದಾರರ ಪರ ವಕೀಲರಾದ ದೇವದತ್ತ ಕಾಮತ್,  ಹಿಜಾಬ್ ಧರಿಸದೇ ಕಾಲೇಜಿಗೆ ಬರಲು ಆದೇಶಿಸುವುದು ತಾತ್ಕಾಲಿಕವಾಗಿ ಧಾರ್ಮಿಕ ಸ್ವಾತಂತ್ರ್ಯವನ್ನೇ ಅಮಾನತ್ತಿನಲ್ಲಿಟ್ಟಂತಾಗುತ್ತದೆ ಎಂದು ವಾದಿಸಿದರು.

ಕೆಲವು ದಿನಗಳಿಗೋಸ್ಕರ, ದಯವಿಟ್ಟು ಸಹಕರಿಸಿ ಎಂದು ನ್ಯಾಯಪೀಠವು ಹೇಳಿದಾಗ, ನ್ಯಾಯವಾದಿ ಕಾಮತ್, ಇವು ನಮ್ಮ‌ ಅವಶ್ಯಕ ಹಕ್ಕುಗಳು ನಮಗೆ ನೀರು ಅಥವಾ ಅನ್ನ ಎಂಬ ಆಯ್ಕೆ ನೀಡುವುದು ಸರಿಯಲ್ಲ, ಶಿಕ್ಷಣ ಮತ್ತು ಹಿಜಾಬ್ ಎರಡೂ ನಮಗೆ ಅವಶ್ಯಕ ಎಂದರು.

ಅರ್ಜಿದಾರರ ಪರವಾಗಿ ದೇವದತ್ತ ಕಾಮತ್, ಮೊಹಮ್ಮದ್ ತಾಹಿರ್ ವಾದ ಮಂಡಿಸಲಿದ್ದಾರೆ. ಹಿಜಾಬ್ ವಿವಾದದ ಕಾರಣಕ್ಕಾಗಿ ಶಾಲೆಗಳನ್ನು ಸ್ಥಗಿತಗೊಳಿಸಿದ್ದಕ್ಕೆ ಬೇಸರ ವ್ಯಕ್ತಪಡಿಸಿದ ಸಿಜೆ ರಿತುರಾಜ್ ಅವಸ್ಥಿ, ಶಿಕ್ಷಣ ಸ್ಥಗಿತ ಮಾಡುವುದು ಸರಿಯಲ್ಲ ಎಂದು ಅಭಿಪ್ರಾಯ ಪಟ್ಟಿದ್ದಾರೆ.

ಶಿಕ್ಷಣ ಸಂಸ್ಥೆಗಳು ಹಿಜಾಬ್‌ ಧರಿಸಿ ಕಾಲೇಜಿಗೆ ಬರದಂತೆ ನಿರ್ಬಂಧಿಸಿರುವ ಕ್ರಮ ಹಾಗೂ ಸಮವಸ್ತ್ರ ಸಂಹಿತೆ ಸಂಬಂಧ ರಾಜ್ಯ ಸರಕಾರ ಹೊರಡಿಸಿರುವ ಆದೇಶ ಪ್ರಶ್ನಿಸಿ ಉಡುಪಿಯ ಸರಕಾರಿ ಬಾಲಕಿಯರ ಪ.ಪೂ. ಕಾಲೇಜಿನ ವಿದ್ಯಾರ್ಥಿನಿಯರು ಹಾಗೂ ಇತರ ಕೆಲವು ವಿದ್ಯಾರ್ಥಿನಿಯರ ಪರ ಪೋಷಕರು ಸಲ್ಲಿಸಿರುವ 3 ಪ್ರತ್ಯೇಕ ಅರ್ಜಿಗಳ ವಿಚಾರಣೆಯನ್ನು ರಾಜ್ಯ ಹೈಕೋರ್ಟ್ ಮುಖ್ಯ ನ್ಯಾ.ರಿತುರಾಜ್ ಅವಸ್ಥಿ, ನ್ಯಾ.ಕೃಷ್ಣ ಎಸ್.ದೀಕ್ಷಿತ್ ಮತ್ತು ನ್ಯಾ.ಜೈಬುನ್ನಿಸಾ ಎಂ.ಖಾಜಿ ಅವರನ್ನೊಳಗೊಂಡ ತ್ರಿಸದಸ್ಯ ಪೀಠ ಇಂದು (ಫೆ.10) ಮಧ್ಯಾಹ್ನ 2.30ಕ್ಕೆ ಆರಂಭಿಸಿತ್ತು

ಅರ್ಜಿದಾರರ ಪರ ವಕೀಲರಾದ ಸಂಜಯ ಹೆಗ್ಡೆ, ದೇವದತ್ ಕಾಮತ್ ವಾದ ಆರಂಭಿಸಿದ್ದರು. ಪ್ರಾರಂಭದಲ್ಲಿ ಮುಖ್ಯ ನ್ಯಾ.ರಿತುರಾಜ್ ಅವಸ್ಥಿ ಅವರು ಪ್ರಕರಣದ ಹಿನ್ನೆಲೆಯನ್ನು ವಿವರಿಸುವಂತೆ ಸೂಚಿಸಿದ್ದರು. ಅರ್ಜಿದಾರರ ಪರ ವಕೀಲ ಸಂಜಯ್ ಹೆಗ್ಡೆ ಅವರು ಘಟನೆಯನ್ನು ಕೋರ್ಟ್ ಗೆ ವಿವರಿಸಿದರು.

Latest Videos
Follow Us:
Download App:
  • android
  • ios