5ಮತ್ತು 8ನೇ ತರಗತಿ ಬೋರ್ಡ್ ಪರೀಕ್ಷೆ ಮುಂದೂಡಲು ನಿರಾಕರಣೆ, ಸುಪ್ರೀಂ ವಿಚಾರಣೆಯಲ್ಲಿ ನಾನಿಲ್ಲವೆಂದ ಹೈಕೋರ್ಟ್
ಐದು ಮತ್ತು ಎಂಟನೇ ತರಗತಿ ಮಕ್ಕಳಿಗೆ ಬೋರ್ಡ್ ಪರೀಕ್ಷೆಯನ್ನು ಮಾ.27ರಂದು ನಡೆಸದೆ ಒಂದು ವಾರಗಳ ಕಾಲ ಮುಂದೂಡಬೇಕು ಎಂದು ಕುಸ್ಮಾ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ನಿರಾಕರಿಸಿದೆ. ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಿಚಾರಣೆ ಬಾಕಿ ಇರುವ ಹಿನ್ನೆಲೆಯಲ್ಲಿ ಮಧ್ಯ ಪ್ರವೇಶಿಸುವುದಿಲ್ಲ ಎಂದಿದೆ.
ಬೆಂಗಳೂರು (ಮಾ.24): ರಾಜ್ಯ ಪಠ್ಯಕ್ರಮವಿರುವ ಶಾಲೆಗಳ ಐದು ಮತ್ತು ಎಂಟನೇ ತರಗತಿ ಮಕ್ಕಳಿಗೆ ಬೋರ್ಡ್ ಪರೀಕ್ಷೆಯನ್ನು ಮಾ.27ರಿಂದ ನಡೆಸುವಂತೆ ಹೈಕೋರ್ಟ್ ವಿಭಾಗೀಯ ಪೀಠ ಆದೇಶ ನೀಡಿತ್ತು. ಸುಪ್ರೀಂ ಕೋರ್ಟ್ ನಲ್ಲಿ ಮಾ.27ಕ್ಕೆ ವಿಚಾರಣೆ ನಿಗದಿಯಾಗಿರುವ ಹಿನ್ನೆಲೆಯಲ್ಲಿ ಪರೀಕ್ಷೆಯನ್ನು ಒಂದು ವಾರಗಳ ಕಾಲ ಮುಂದೂಡುವಂತೆ ಕುಸ್ಮಾ ಅರ್ಜಿ ಸಲ್ಲಿಸಿತ್ತು. ಇದೀಗ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಿಚಾರಣೆ ಬಾಕಿ ಇರುವ ಹಿನ್ನೆಲೆಯಲ್ಲಿ ಮಧ್ಯ ಪ್ರವೇಶಿಸುವುದಿಲ್ಲ ಎಂದು ನಿರಾಕರಿಸಿದೆ. ಜೊತೆಗೆ ಪರೀಕ್ಷೆ ದಿನಾಂಕ ಮುಂದೂಡಲು ಹೈಕೋರ್ಟ್ ಒಪ್ಪಿಗೆ ಸೂಚಿಸಿಲ್ಲ.
5 ಮತ್ತು 8ನೇ ತರಗತಿ ಮಕ್ಕಳಿಗೆ ಬೋರ್ಡ್ ಪರೀಕ್ಷೆಯ ವಿಚಾರಣೆ ಸುಪ್ರೀಂ ಕೋರ್ಟ್ ನಲ್ಲಿ ಮಾ.27ಕ್ಕೆ ನಿಗದಿಯಾಗಿದೆ. ಮಾ.27ರಿಂದ ಪರೀಕ್ಷೆ ನಡೆಸುವಂತೆ ಹೈಕೋರ್ಟ್ ಆದೇಶ ಹಿನ್ನೆಲೆ ಒಂದು ವಾರ ಪರೀಕ್ಷೆ ದಿನಾಂಕ ಮುಂಡೂಡಿಕೆಗೆ ಕುಸ್ಮಾ( ಖಾಸಗಿ ಶಾಲೆಗಳ ಸಂಘ) ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ನ್ಯಾ.ನರೇಂದರ್ ಹಾಗೂ ಅಶೋಕ್ ಕಿಣಗಿ ಅವರ ವಿಭಾಗೀಯ ಪೀಠದಿಂದ ಈ ಆದೇಶ ಹೊರಬಿದ್ದಿದೆ.
5 ಮತ್ತು 8ನೇ ತರಗತಿಗೆ ಬೋರ್ಡ್ ಪರೀಕ್ಷೆ ಮುಂದೂಡುವಂತೆ ಹೈಕೋರ್ಟ್ ಗೆ ಮತ್ತೆ ಅರ್ಜಿ!
ರಾಜ್ಯ ಪಠ್ಯಕ್ರಮವಿರುವ ಶಾಲೆಗಳ ಐದು ಮತ್ತು ಎಂಟನೇ ತರಗತಿ ಮಕ್ಕಳಿಗೆ ರಾಜ್ಯ ಮಟ್ಟದ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಹಸಿರು ನಿಶಾನೆ ತೋರಿತ್ತು. ಮಾ.27ರಿಂದ ಪರೀಕ್ಷೆ ನಡೆಸುವಂತೆ ಸರ್ಕಾರಕ್ಕೆ ನಿರ್ದೇಶಿಸಿತ್ತು. ಇದಕ್ಕೂ ಮುನ್ನ ರಾಜ್ಯ ಪಠ್ಯಕ್ರಮದ ಶಾಲೆಗಳ 5 ಮತ್ತು 8ನೇ ತರಗತಿಗಳ ವಿದ್ಯಾರ್ಥಿಗಳಿಗೆ ಶಾಲಾ ಮಟ್ಟದ ಮೌಲ್ಯಮಾಪನದ ಬದಲಾಗಿ ರಾಜ್ಯ ಮಟ್ಟದ ಮಂಡಳಿ (ಬೋರ್ಡ್) ಪರೀಕ್ಷೆ ನಡೆಸಲು ತೀರ್ಮಾನಿಸಿ ಹೊರಡಿಸಲಾಗಿದ್ದ ಸುತ್ತೋಲೆಯನ್ನು ಹೈಕೋರ್ಟ್ ಏಕ ಸದಸ್ಯ ನ್ಯಾಯಪೀಠ ರದ್ದುಪಡಿಸಿತ್ತು.
SSLC ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್, ಪರೀಕ್ಷೆ ವೇಳೆ ಕೆಎಸ್‌ಆರ್‌ಟಿಸಿಯಲ್ಲಿ ಉಚಿತ
ಈ ತೀರ್ಪು ಪ್ರಶ್ನಿಸಿ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಜಿ.ನರೇಂದರ್ ಅವರ ನೇತೃತ್ವದ ವಿಭಾಗೀಯ ಪೀಠ ಮಧ್ಯಂತರ ಆದೇಶ ಹೊರಡಿಸಿ ಪರೀಕ್ಷೆ ನಡೆಸಲು ಅನುಮತಿ ನೀಡಿತ್ತು. ಅದರಂತೆ ಸರ್ಕಾರವು ಮಾ.27ರಿಂದ ಪರೀಕ್ಷೆ ನಡೆಸಲು ತಿಳಿಸಿತ್ತು. ಪ್ರಶ್ನೆ ಪತ್ರಿಕೆಯಲ್ಲಿ ಪಠ್ಯೇತರವಾದ ಯಾವುದೇ ಪ್ರಶ್ನೆಗಳು ಇರದಂತೆ ಸರ್ಕಾರ ನೋಡಿಕೊಳ್ಳಬೇಕು. ಪರೀಕ್ಷೆಯಲ್ಲಿ ಯಾವ ವಿದ್ಯಾರ್ಥಿಯನ್ನೂ ಅನುತ್ತೀರ್ಣಗೊಳಿಸುವಂತಿಲ್ಲ ಎಂದು ನ್ಯಾಯಪೀಠ ಆದೇಶದಲ್ಲಿ ಸೂಚಿಸಿತ್ತು.