Asianet Suvarna News Asianet Suvarna News

Karnataka Sign MoU With NSE Academy: ಹಣಕಾಸು ಶಿಕ್ಷಣಕ್ಕೆ ಹೊಸ ಕಿಂಡಿ

* ಕಾಲೇಜು ವಿದ್ಯಾರ್ಥಿಗಳಿಗೆ ಹಣಕಾಸು‌ ಜಾಗೃತಿ ಕಾರ್ಯಕ್ರಮ
* ಎನ್ಎಸ್ಇ ಅಕಾಡೆಮಿ ಜತೆ ಒಡಂಬಡಿಕೆಗೆ ರಾಜ್ಯದ ಒಲವು 
* ಆರ್ಥಿಕ ಜಾಗೃತಿ ಕಾರ್ಯಕ್ರಮದ ಭಾಗವಾಗಿ ವಿವಿಧ ತರಬೇತಿ
* ಫಿನ್-ಟೆಕ್, ಬಂಡವಾಳ ಮಾರುಕಟ್ಟೆ, ಜಾಗತಿಕ ಮತ್ತು ಸ್ಥಳೀಯ ವಾಣಿಜ್ಯ ಸಂಸ್ಕೃತಿಯ ಜ್ಞಾನ

Karnataka Higher Education Council to sign MoU with NSE Academy mah
Author
Bengaluru, First Published Dec 9, 2021, 4:14 AM IST | Last Updated Dec 9, 2021, 4:14 AM IST

ಬೆಂಗಳೂರು(ಡಿ. 09) ರಾಜ್ಯದ (Karnataka)ಕಾಲೇಜು ವಿದ್ಯಾರ್ಥಿಗಳ (Students) ಸಮಗ್ರ ಬೆಳವಣಿಗೆಯನ್ನು ಸಾಧ್ಯವಾಗಿಸುವ ಗುರಿಯುಳ್ಳ ಹಣಕಾಸು ವಿಚಾವಾರಗಳ ಜಾಗೃತಿ ಕಾರ್ಯಕ್ರಮವನ್ನು ಜಾರಿ ಮಾಡುವ ಸಂಬಂಧ ನ್ಯಾಷನಲ್ ಸ್ಟಾಕ್ ಎಕ್ಸ್ ಚೇಂಜ್ (NSE) ಮತ್ತು ಉನ್ನತ ಶಿಕ್ಷಣ ಇಲಾಖೆಯ ಭಾಗವಾಗಿರುವ ರಾಜ್ಯ ಉನ್ನತ ಶಿಕ್ಷಣ ಪರಿಷತ್ ಒಡಂಬಡಿಕೆ ಮಾಡಿಕೊಳ್ಳಲು ತೀರ್ಮಾನಿಸಿವೆ. 

ಈ ಸಂಬಂಧ ಬುಧವಾರ ನಡೆದ ವರ್ಚುಯಲ್ ಸಮಾಲೋಚನಾ ಸಭೆಯಲ್ಲಿ ಮಾತನಾಡಿದ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ (Dr. CN Ashwath Narayan)`ಎನ್ಎಸ್ಇ ರೂಪಿಸಿರುವ ಈ ಕಾರ್ಯಕ್ರಮದ ಬಗ್ಗೆ ರಾಜ್ಯ (Karnataka Govt)ಸರಕಾರವು ಮುಕ್ತವಾಗಿದೆ. ಇಂತಹ ಕಾರ್ಯಕ್ರಮಗಳನ್ನು ವಿದ್ಯಾರ್ಥಿಗಳಿಗೆ ಪರಿಚಯಿಸುವುದರಿಂದ ಅವರಿಗೆಲ್ಲ ಆರ್ಥಿಕ ತಿಳಿವಳಿಕೆ, ಉದ್ಯಮಶೀಲತೆ ಕುರಿತು ವೈಜ್ಞಾನಿಕ ತಿಳಿವಳಿಕೆ ಮತ್ತು ಆರ್ಥಿಕ ನಿರ್ವಹಣೆ ಕೌಶಲ್ಯಗಳು ಸುಲಭವಾಗಿ ಸಿಗಲಿವೆ ಎಂದರು. 

ನೂತನ ಶಿಕ್ಷಣ ನೀತಿಯಿಂದ ಉದ್ಯೋಗದಾತರ ಸೃಷ್ಟಿ: ಮೋದಿ

ಆರ್ಥಿಕ ಜಾಗೃತಿ ಕಾರ್ಯಕ್ರಮದ ಭಾಗವಾಗಿ ಎನ್ಎಸ್ಇ ಅಕಾಡೆಮಿ ಮತ್ತು ರಾಜ್ಯದ ಕಾಲೇಜುಗಳ ನಡುವೆ ಬೋಧಕ ವೃಂದ ಮತ್ತು ವಿದ್ಯಾರ್ಥಿಗಳ ಪರಸ್ಪರ ವಿನಿಮಯ ನಡೆಯಲಿದೆ. ಇದರ ಜತೆಗೆ ಸಮಗ್ರ ತರಬೇತಿಯನ್ನೂ ನೀಡಲಾಗುವುದು. ಅಲ್ಲದೆ, ವಿದ್ಯಾರ್ಥಿಗಳಲ್ಲಿ ಆರ್ಥಿಕ ಜಾಗೃತಿ ಮತ್ತು ಸರ್ಟಿಫಿಕೇಶನ್ ಕೂಡ ಇರಲಿದೆ. ಇದರಲ್ಲಿ ಆರ್ಥಿಕ ನೀತಿಗಳು,  ಫಿನ್-ಟೆಕ್, ಬಂಡವಾಳ ಮಾರುಕಟ್ಟೆ, ಜಾಗತಿಕ ಮತ್ತು ಸ್ಥಳೀಯ ವಾಣಿಜ್ಯ ಸಂಸ್ಕೃತಿ, ಕೇಂದ್ರೀಯ ಬ್ಯಾಂಕುಗಳು, ಯೋಜನಾಬದ್ಧ ವೆಚ್ಚ ಮುಂತಾದವುಗಳ ಅರಿವು ಸಿಗಲಿದೆ ಎಂದು ಅವರು ಮಾಹಿತಿ ನೀಡಿದರು. 

ಎನ್ಎಸ್ಇ ಅಕಾಡೆಮಿಯು ದೇಶದ ಏಳು ರಾಜ್ಯಗಳಲ್ಲಿ ಈ ಕಾರ್ಯಕ್ರಮವನ್ನು ಜಾರಿಗೊಳಿಸಿದ್ದು, 70 ಲಕ್ಷ ವಿದ್ಯಾರ್ಥಿಗಳಿಗೆ ತರಬೇತಿ ನೀಡಿದೆ. ಇಂತಹ ಕಾರ್ಯಕ್ರಮವನ್ನು ರಾಜ್ಯದಲ್ಲೂ ಜಾರಿಗೆ ತಂದರೆ ಲಕ್ಷಾಂತರ ವಿದ್ಯಾರ್ಥಿಗಳಿಗೆ ಆರ್ಥಿಕ ಜಾಗೃತಿಯ ತರಬೇತಿ ಸುಲಭವಾಗಿ ಸಿಗಲಿದೆ ಎಂದು ಅವರು ತಿಳಿಸಿದರು. 

ಈ ವರ್ಚುಯಲ್ ಸಭೆಯಲ್ಲಿ ಎನ್ ಎಸ್ ಇ ಅಕಾಡೆಮಿ ಸಿಇಒ ಅಭಿಲಾಷ‌ ಮಿಶ್ರಾ, ಸಹ ಉಪಾಧ್ಯಕ್ಷ ಡಾ.ಅಗ್ನಾ ಫರ್ನಂಡೇಜ್, ಮುಖ್ಯ ವ್ಯವಸ್ಥಾಪಕ ಎಸ್. ರಂಗನಾಥನ್, ರಾಜ್ಯ ಉನ್ನತ ಶಿಕ್ಷಣ ಪರಿಷತ್ತಿನ ಉಪಾಧ್ಯಕ್ಷ ಡಾ.ತಿಮ್ಮೇಗೌಡ, ಕಾರ್ಯನಿರ್ವಾಹಕ ನಿರ್ದೇಶಕ ಗೋಪಾಲಕೃಷ್ಣ ಜೋಶಿ, ರಾಣಿಚೆನ್ನಮ್ಮ ವಿವಿ ಕುಲಪತಿ ಪ್ರೊ ರಾಮಚಂದ್ರಗೌಡ ವರ್ಚುವಲ್ ನಲ್ಲಿ ಭಾಗವಹಿಸಿದ್ದರು.

ಶಿಕ್ಷಣ ಕ್ಷೇತ್ರದಲ್ಲಿ ಕರ್ನಾಟಕದ ಮತ್ತೊಂದು ದಿಟ್ಟ ಹೆಜ್ಜೆ: 

ಭಾರತದಲ್ಲಿ ಫ್ರಾನ್ಸ್ ದೇಶದ ನೂತನ ಕಾನ್ಸುಲ್ ಜನರಲ್ ಆಗಿ ನೇಮಕಗೊಂಡಿರುವ ಥಿಯರಿ ಬರ್ತೆಲೋಟ್ ಅವರು ಬುಧವಾರ ತಮ್ಮನ್ನು ಭೇಟಿಯಾದಾಗ ಈ ಸಂಬಂಧ ಅವರು ಈ ಕುರಿತು ಮಾತುಕತೆ ನಡೆಸಿದರು. ಈ ಕ್ಯಾಂಪಸ್ ಆರಂಭಿಸಲು ಬೆಂಗಳೂರು ನಗರ ವಿಶ್ವವಿದ್ಯಾಲಯವು ಸೂಕ್ತವಾಗಿದೆ ಎಂದು ಫ್ರೆಂಚ್ ನಿಯೋಗಕ್ಕೆ ತಿಳಿಸಲಾಗಿದೆ ಎಂದು ಸಚಿವರು ಮಾಹಿತಿ ನೀಡಿದ್ದರು. 

ನಂತರ ಮಾತನಾಡಿದ ಅವರು, ಆರೋಗ್ಯ ಕ್ಷೇತ್ರದಲ್ಲಿ ಜೈವಿಕ ತಂತ್ರಜ್ಞಾನ, ಕೃತಕ ಬುದ್ಧಿಮತ್ತೆ, ಔಷಧಗಳು ಮತ್ತು ಆರೋಗ್ಯ ಉತ್ಪನ್ನಗಳು, ಔಷಧ ವಿಜ್ಞಾನ ನಿರ್ವಹಣೆ, ಸುಧಾರಿತ ಫಾರ್ಮಸುಟಿಕಲ್ ಎಂಜಿನಿಯರಿಂಗ್ ಕ್ಷೇತ್ರಗಳಲ್ಲಿ, ಇಂಡಸ್ಟ್ರಿ 4.0 ಅಡಿಯಲ್ಲಿ ಸೈಬರ್ ಸೆಕ್ಯುರಿಟಿ, ಡೇಟಾ ಅನಲಿಟಿಕ್ಸ್, ಮಶೀನ್ ಲರ್ನಿಂಗ್ ಮುಂತಾದ ವಿಭಾಗಗಳಲ್ಲಿ ಮತ್ತು ಪರಿಸರ ಶಾಸ್ತ್ರದಲ್ಲಿ ಜೀವವೈವಿಧ್ಯ, ಹವಾಮಾನ ಬದಲಾವಣೆ, ಪರಿಸರಸ್ನೇಹಿ ಆರ್ಥಿಕತೆ ವಿಭಾಗಗಳಲ್ಲಿ ಉದ್ದೇಶಿತ ಕ್ಯಾಂಪಸ್ಸಿನಲ್ಲಿ ಅವಳಿ ಪದವಿ (ಇಂಡೋ-ಫ್ರೆಂಚ್ ಡಿಗ್ರಿ)ಗಳನ್ನು ನೀಡಲಾಗುವುದು.

ನೂತನ ರಾಷ್ಟ್ರೀಯ ಶಿಕ್ಷಣ ನೀತಿಗೆ ಪೂರಕವಾಗಿ ಶಿಕ್ಷಣದಲ್ಲಿ ಜಾಗತಿಕ ಗುಣಮಟ್ಟಕ್ಕೆ ಆದ್ಯತೆ ಕೊಡಲಾಗುತ್ತಿದೆ. ವಿದ್ಯಾರ್ಥಿಗಳು ಕೇವಲ ಪದವೀಧರರಾದರೆ ಸಾಲದು, ಅವರು ಸಮಕಾಲೀನ ವೃತ್ತಿಗಳಿಗೆ ಬೇಕಾದ ಅತ್ಯಾಧುನಿಕ ಕೌಶಲ್ಯಗಳನ್ನು ಕೂಡ ಕಲಿಸಲಾಗುವುದು. ಈ ಮೂಲಕ ನಿರುದ್ಯೋಗ ಸಮಸ್ಯೆಯನ್ನು ನಿವಾರಣೆ ಮಾಡುವತ್ತ ದಾಪುಗಾಲಿಡಲಾಗುತ್ತಿದೆ ಎಂದು ಅಶ್ವತ್ಥನಾರಾಯಣ ತಿಳಿಸಿದ್ದರು. 

 

Latest Videos
Follow Us:
Download App:
  • android
  • ios