ಪಿಜಿ-ಸಿಇಟಿ ಅರ್ಜಿ ಆಹ್ವಾನ; ಜುಲೈ 13 ಮತ್ತು 14ರಂದು ಪರೀಕ್ಷೆ
2024-25ನೇ ಸಾಲಿನ ಸ್ನಾತಕೋತ್ತರ ಕೋರ್ಸುಗಳ ಪ್ರವೇಶಕ್ಕೆ ಮೇ 27ರಿಂದ ಅರ್ಜಿ ಆಹ್ವಾನಿಸಲಾಗಿದೆ. ಜುಲೈ 13 ಮತ್ತು 14ರಂದು ಸ್ನಾತಕೋತ್ತರ ಸಾಮಾನ್ಯ ಪ್ರವೇಶ ಪರೀಕ್ಷೆ ನಡೆಸಲಾಗುತ್ತದೆ.
ಬೆಂಗಳೂರು (ಮೇ 23): 2024-25ನೇ ಸಾಲಿನ ಸ್ನಾತಕೋತ್ತರ ಕೋರ್ಸುಗಳ (ಎಂ.ಬಿ.ಎ., ಎಂ.ಸಿ.ಎ., ಎಂ.ಟೆಕ್, ಎಂ.ಇ., ಎಂ.ಆರ್ಕಿಟೆಕ್ಚರ್) ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ರಾಜ್ಯಾದ್ಯಂತ ಜುಲೈ 13 ಮತ್ತು 14ರಂದು ಸ್ನಾತಕೋತ್ತರ ಸಾಮಾನ್ಯ ಪ್ರವೇಶ ಪರೀಕ್ಷೆ ನಡೆಸಲು ದಿನಾಂಕ ನಿಗದಿಪಡಿಸಲಾಗಿದೆ.
ಈ ಕುರಿತು ಮಾಧ್ಯಮಗಳೊಂದಿಗೆ ಮಾಹಿತಿ ನೀಡಿದ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ಅವರು ರಾಜ್ಯದಾದ್ಯಂತ ಎಲ್ಲ ಕಾಲೇಜುಗಳಲ್ಲಿನ ಸ್ನಾತಕೋತ್ತರ ಕೋರ್ಸುಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಜುಲೈ 13 ರಂದು ಎಂಇ/ಎಂ.ಟೆಕ್/ ಎಂ.ಆರ್ಕಿಟೆಕ್ಚರ್ ಕೋರ್ಸ್ ಗಳ ಪ್ರವೇಶ ಪರೀಕ್ಷೆ ನಡೆಸಲಾಗುತ್ತದೆ. ಉಳಿದಂತೆ ಜುಲೈ 14ರಂದು ಎಂಸಿಎ ಮತ್ತು ಎಂಬಿಎ ಕೋರ್ಸ್ ಗಳ ಪ್ರವೇಶ ಪರೀಕ್ಷೆ ನಡೆಸಲಾಗುವುದು ಎಂದು ತಿಳಿಸಿದರು.
ಎಸ್ಸೆಸ್ಸೆಲ್ಸಿಯಲ್ಲಿ 623 ಅಂಕ ಪಡೆದು ಸರ್ಕಾರಿ ನೌಕರಿಗೆ ಆಯ್ಕೆಯಾದವನಿಗೆ ಓದು, ಬರಹವೇ ಬರೊಲ್ಲ!
ಪಿಜಿ-ಸಿಇಟಿ ಪರೀಕ್ಷೆಗೆ ಮೇ 27ರಿಂದ ಅರ್ಜಿ ಸಲ್ಲಿಕೆ ಆರಂಭಿಸಲಾಗುತ್ತದೆ. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆಗೆ ಜೂನ್ 17 ಕೊನೆಯ ದಿನವಾಗಿರುತ್ತದೆ. ಜೂನ್ 18ರೊಳಗೆ ಶುಲ್ಕ ಪಾವತಿಸಬೇಕು. ರಾಷ್ಟ್ರೀಯ ಮಟ್ಟದಲ್ಲಿ ನಡೆಯುವ ಗೇಟ್ (GATE) ಪರೀಕ್ಷೆಯಲ್ಲಿ ಅರ್ಹತೆ ಪಡೆದಿರುವ ಅಭ್ಯರ್ಥಿಗಳು ಪಿಜಿ-ಸಿಇಟಿ 2024ಕ್ಕೆ ಹಾಜರಾಗುವ ಅಗತ್ಯ ಇಲ್ಲ. ಆದರೆ, ಅಂತಹ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಿ, ಪ್ರವೇಶಕ್ಕೆ ಅರ್ಹರಾಗಬೇಕಾಗುತ್ತದೆ. ಗೇಟ್ ಪರೀಕ್ಷೆಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆಯೇ ಸ್ನಾತಕೋತ್ತರ ಕೋರ್ಸ್ ಗಳಿಗೆ ಪ್ರವೇಶ ನೀಡಲಾಗುತ್ತದೆ ಎಂದು ಮಾಹಿತಿ ನೀಡಿದರು.
ಕರ್ನಾಟಕೇತರ ಅಭ್ಯರ್ಥಿಗಳು ಎಂಬಿಎ ಮತ್ತು ಎಂಸಿಎ ಪ್ರವೇಶಕ್ಕೆ ಆಡಳಿತ ಮಂಡಳಿಯವರು ಸರ್ಕಾರಕ್ಕೆ ಬಿಟ್ಟುಕೊಡುವ ಸೀಟುಗಳನ್ನು ಮಾತ್ರ ಆಯ್ಕೆ ಮಾಡಲು ಅರ್ಹತೆ ಪಡೆಯುತ್ತಾರೆ. ಕರ್ನಾಟಕೇತರ ಅಭ್ಯರ್ಥಿಗಳಿಗೆ ಯಾವುದೇ ಮೀಸಲಾತಿಯ ಸವಲತ್ತುಗಳು ಅನ್ವಯಿಸುವುದಿಲ್ಲ. ಆದ್ದರಿಂದ ಸಾಮಾನ್ಯ ವರ್ಗಕ್ಕೆ ನಿಗದಿಪಡಿಸಿರುವ ಕನಿಷ್ಠ ಅಂಕಗಳನ್ನು ಪಡೆದಿದ್ದಲ್ಲಿ ಮಾತ್ರ (50%) ಅರ್ಹತೆಯನ್ನು ಪಡೆಯಬಹುದಾಗಿದೆ. ಜೊತೆಗೆ, ಪ್ರವೇಶಕ್ಕಾಗಿ ನೊಂದಣಿಯನ್ನು ಮಾಡಿ ಕೊಳ್ಳಬಹುದಾಗಿದೆ. SC/ST/OBC ಅರ್ಹತಾ ಮಾನದಂಡಗಳು ಕರ್ನಾಟಕದ SC/ST/OBC ಅಭ್ಯರ್ಥಿಗಳಿಗೆ ಮಾತ್ರ ಅನ್ವಯಿಸುತ್ತದೆ.
1ನೇ ತರಗತಿ ಪ್ರವೇಶಕ್ಕೆ 6 ವರ್ಷ ವಯೋಮಿತಿ: ಪೋಷಕರು ಕಿಡಿ
ರಾಜ್ಯದ ಎಲ್ಲ ಎಂಬಿಎ / ಎಂಸಿಎ /ಎಂಇ /ಎಂ.ಟೆಕ್ /ಎಂ.ಆರ್ಕಿಟೆಕ್ಟರ್ ಕೋರ್ಸುಗಳ ಪ್ರವೇಶಕ್ಕೆ, ಅಭ್ಯರ್ಥಿಗಳು ಅರ್ಹತಾ ಪರೀಕ್ಷೆಯಲ್ಲಿ ಒಟ್ಟು ಕನಿಷ್ಟ ಶೇ.50%, ಹಾಗೂ ಕರ್ನಾಟಕದ ಎಸ್.ಸಿ., ಎಸ್.ಟಿ., ಪ್ರವರ್ಗ-1 ರ ಅಭ್ಯರ್ಥಿಗಳು ಕನಿಷ್ಟ ಶೇ.45% ಅಂಕಗಳನ್ನು ಪಡೆದಿರಬೇಕು. CGPA / SGPA ಗ್ರೇಡ್‌ಗಳ ಮಾದರಿಯಲ್ಲಿ ನಿಗದಿಪಡಿಸಿರುವ ಅರ್ಹತಾ ಪರೀಕ್ಷೆಯ ಅಂಕಗಳು, ಅಗತ್ಯವಿರುವ ಕನಿಷ್ಟ ಅರ್ಹತಾ ಅಂಕಗಳನ್ನು ಅಥವಾ ಅದಕ್ಕಿಂತ ಹೆಚ್ಚು ಅಂಕಗಳನ್ನು ಗ್ರೇಡ್‌ಗಳ ಅಂಕಗಳು ಸೂಚಿಸುತ್ತಿರುವ ಬಗ್ಗೆ ಖಾತರಿ ಪಡಿಸಿಕೊಳ್ಳಿ. SC/ST/OBC ಅರ್ಹತಾ ಮಾನದಂಡಗಳು ಕರ್ನಾಟಕದ SC/ST/OBC ಅಭ್ಯರ್ಥಿಗಳಿಗೆ ಮಾತ್ರ ಅನ್ವಯಿಸುತ್ತದೆ.