Covid School SOP: ಖಾಸಗಿ ಶಾಲೆಗಳಿಗೆ ಪ್ರತೇಕ ಮಾರ್ಗಸೂಚಿ ನೀಡುವಂತೆ ಸಚಿವರಿಗೆ ಮನವಿ
* ಹೊಸ ಪ್ರತ್ಯೇಕ SOP ನೀಡುವಂತೆ ಖಾಸಗಿ ಶಾಲೆಗಳ ಒಕ್ಕೂಟ ಆಗ್ರಹ
* ಶಿಕ್ಷಣ ಸಚಿವ ಬಿಸಿ ನಾಗೇಶ್ ಗೆ ಮನವಿ ಮಾಡಿದ ಖಾಸಗಿ ಶಾಲೆಗಳ ಒಕ್ಕೂಟ
* ಶಿಕ್ಷಣ ಇಲಾಖೆಯಿಂದ ಪ್ರತೇಕ ಮಾರ್ಗಸೂಚಿ ನೀಡುವಂತೆ ಕ್ಯಾಮ್ಸ್ ಪ್ರಧಾನ ಕಾರ್ಯದರ್ಶಿ ಶಶಿಕುಮಾರ್ ಮನವಿ
ಬೆಂಗಳೂರು, (ಡಿ.06): ರಾಜ್ಯದಲ್ಲಿ ಕೊರೋನಾ(Coronavrius) ಹಾಗೂ ಒಮಿಕ್ರಾನ್ (Omicron) ಆತಂಕ ಶುರುವಾಗಿದೆ. ಅದರಲ್ಲೂ ಕೊರೋನಾ ವೈರಸ್ ಶಿಕ್ಷಣ9Education) ಸಂಸ್ಥೆಗಳಲ್ಲಿ ಸ್ಫೋಟಗೊಳ್ಳುತ್ತಿದ್ದು ಪೋಷಕರಲ್ಲಿ ಆತಂಕ ಮನೆಮಾಡಿದೆ.
ಇದರ ಮಧ್ಯೆ ತಮಗೆ ಪ್ರತ್ಯೇಕ ಕೊರೋನಾ ಮಾರ್ಗಸೂಚಿ(Coronavirus Guidelines) ಪ್ರಕಟಿಸುವಂತೆ ಖಾಸಗಿ ಶಾಲೆಗಳ ಒಕ್ಕೂಟ (Private School Organization) ಒತ್ತಾಯಿಸುತ್ತಿದೆ. ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಖಾತೆ ಸಚಿವ ಬಿ.ಸಿ. ನಾಗೇಶ್ಗೆ (BC Nagesh) ಖಾಸಗಿ ಶಾಲೆಗಳ ಒಕ್ಕೂಟ ಮನವಿ ಮಾಡಿದೆ.
School Fee: ಶಾಲಾ ಶುಲ್ಕ ಕಟ್ಟದ ಫೋಷಕರಿಗೆ ಬಿಗ್ ಶಾಕ್
ಶಾಲೆಗಳಲ್ಲಿ ಸರ್ಕಾರದ ಮಾರ್ಗಸೂಚಿ ಪಾಲನೆ ಆಗುತ್ತಿಲ್ಲ. ವಿದ್ಯಾರ್ಥಿಗಳು, ಶಿಕ್ಷಕರು, ಸಿಬ್ಬಂದಿ ಮಾರ್ಗಸೂಚಿ ಪಾಲಿಸ್ತಿಲ್ಲ. ಕೋಚಿಂಗ್ ಸೆಂಟರ್, ಟ್ಯುಟೋರಿಯಲ್ಗಳು ಪಾಲಿಸುತ್ತಿಲ್ಲ. ಹೀಗಾಗಿ ಶಿಕ್ಷಣ ಸಂಸ್ಥೆಗಳಿಗೆ ಪ್ರತ್ಯೇಕ ಮಾರ್ಗಸೂಚಿ ಪ್ರಕಟಿಸಿ. ಶಿಕ್ಷಣ ಇಲಾಖೆಯಿಂದ ಪ್ರತ್ಯೇಕ ಮಾರ್ಗಸೂಚಿ ಪ್ರಕಟಿಸಿ ಎಂದು ಕ್ಯಾಮ್ಸ್ ಪ್ರಧಾನ ಕಾರ್ಯದರ್ಶಿ ಶಶಿಕುಮಾರ್ ಮನವಿ ಮಾಡಿದ್ದಾರೆ.
ಕರ್ನಾಟಕ ರಾಜ್ಯದಲ್ಲಿ ಕೊರೋನಾ (Coronavirus) ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಮೂರನೇ ಅಲೆ ಆತಂಕ ಶುರುವಾಗಿದೆ. ತಜ್ಞರು ಹೇಳಿದಂತೆ ಮೂರನೇ ಅಲೆಯಲ್ಲಿ ಮಕ್ಕಳ ಮೇಲೆ ಹೆಚ್ಚು ಪರಿಣಾಮ ಬೀಳುತ್ತಾ ಎಂಬ ಭೀತಿ ಹೆಚ್ಚಾಗಿದೆ. ಕೊರೋನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾದರೆ ಶಾಲೆ, ಕಾಲೇಜುಗಳನ್ನು ಬಂದ್ ಮಾಡಲು ಸರ್ಕಾರ ಕೂಡಾ ಸಿದ್ಧವಾಗಿದೆ ಎಂದು ಸ್ವತಃ ಸಚಿವ ಬಿ ನಾಗೇಶ್ ಸ್ಪಷ್ಟಪಡಿಸಿದ್ದಾರೆ.
Covid Outbreak in School : ವಸತಿಗೆ ಶಾಲೆಗೆ ವಕ್ಕರಿಸಿದ ಕೊರೋನಾ - 400 ಮಂದಿ ಕ್ವಾರಂಟೈನ್
ಎರಡು ಖಾಸಗಿ ನರ್ಸಿಂಗ್ ಕಾಲೇಜಿನ 72 ವಿದ್ಯಾರ್ಥಿಗಳಿಗೆ ಸೋಂಕು ದೃಢಪಟ್ಟಿದೆ. ಕೊಡಗಿನಲ್ಲಿ ಕಳೆದ 10 ದಿನಗಳಲ್ಲಿ 54 ಮಂದಿಗೆ ಕೊರೋನಾ ಸೋಂಕು ತಗುಲಿದೆ. ಮಡಿಕೇರಿ ನಗರದ ಕೊಡಗು ವಿದ್ಯಾಲಯ ಶಾಲೆಯ 9 ಮಕ್ಕಳಿಗೆ ಪಾಸಿಟಿವ್ ದೃಢಪಟ್ಟಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಟ್ಟು 159 ಪಾಸಿಟಿವ್ ಕೇಸ್ಗಳಿವೆ. ಈ ಪೈಕಿ 21 ಜನ ವಿದ್ಯಾರ್ಥಿಗಳಿಗೆ ಕೊರೋನಾ ತಗುಲಿರುವುದು ದೃಢಪಟ್ಟಿದೆ. ಒಂದೇ ಕಾಲೇಜಿನ 15 ಜನ ವಿದ್ಯಾರ್ಥಿಗಳಿಗೆ ಸೋಂಕು ಕಾಣಿಸಿಕೊಂಡಿದೆ.
ಶಾಲೆ ಬಂದ್ ಸುಳಿವು ಕೊಟ್ಟ ನಾಗೇಶ್
ಕರ್ನಾಟಕದ ಚಿಕ್ಕಮಗಳೂರು ಜಿಲ್ಲೆಯ ಶಾಲೆಯೊಂದರ 59 ವಿದ್ಯಾರ್ಥಿಗಳು ಸೇರಿದಂತೆ ಈ ಭಾಗದಲ್ಲಿ ಕನಿಷ್ಠ 69 ಜನರು ಕೋವಿಡ್ -19 ಸೋಂಕಿಗೆ ಒಳಗಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಗಳು ದೃಢಪಡಿಸಿದ್ದಾರೆ. ರಾಜ್ಯದಲ್ಲಿ ಇಲ್ಲಿಯವರೆಗೆ 2 ಓಮೈಕ್ರಾನ್ ರೂಪಾಂತರ ಕೊರೊನಾ ಸೋಂಕಿನ ವರದಿಗಳಾಗಿವೆ.
ಸೋಮವಾರ ಸುದ್ದಿಗಾರರ ಜೊತೆ ಮಾತನಾಡಿದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್, “ವಿವಿಧ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳಲ್ಲಿ ಕೋವಿಡ್-19 ಪ್ರಕರಣಗಳು ಹೆಚ್ಚುತ್ತಿದ್ದು, ಪ್ರಕರಣಗಳು ಹೆಚ್ಚಾದರೆ ಪರೀಕ್ಷೆ ಮತ್ತು ಶಾಲೆಗಳನ್ನು ನಿಲ್ಲಿಸುವುದರಿಂದ ಸರ್ಕಾರ ಹಿಂದೆ ಸರಿಯುವುದಿಲ್ಲ” ಎಂದು ತಿಳಿಸಿದ್ದಾರೆ. “ಆದರೆ, ನಿಯಮಿತವಾಗಿ ಆಫ್ ಲೈನ್ ತರಗತಿಗಳನ್ನು ನಡೆಸಲು ಯಾವುದೇ ತೊಂದರೆ ಇಲ್ಲ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ” ಎಂದು ಅವರು ಹೇಳಿದ್ದಾರೆ.
ಕೋವಿಡ್-19 ಪರಿಸ್ಥಿತಿಯನ್ನು ಸರ್ಕಾರವು ಗಂಟೆಗೊಮ್ಮೆ ಸೂಕ್ಷ್ಮವಾಗಿ ಗಮನಿಸುತ್ತಿದೆ ಎಂದಿರುವ ಸಚಿವರು, ಯಾವುದೇ ಸಮಸ್ಯೆಯಾಗದಂತೆ ಸರ್ಕಾರ ಪರ್ಯಾಯ ವ್ಯವಸ್ಥೆ ಮಾಡಲಿದೆ ಎಂದು ಭರವಸೆ ನೀಡಿದ್ದಾರೆ.