Karnataka School Reopen : ಮಕ್ಕಳಿಗೆ ಬೊಮ್ಮಾಯಿ ಶುಭಾಶಯ

ಬಹಳ ದಿನಗಳ ನಂತರ ಶಾಲೆ ಆರಂಭವಾಗ್ತಿದೆ. ಶಿಕ್ಷಣ ಇಲಾಖೆ ಎಲ್ಲಾ ರೀತಿಯ ಸಿದ್ದತೆ ಮಾಡಿಕೊಂಡಿದೆ. ಎಲ್ಲಾ ಮಕ್ಕಳಿಗೂ ಶಾಲೆಗೆಗಳಿಗೆ ಪ್ರೀತಿಯಿಂದ ಸ್ವಾಗತ ಕೊರುತ್ತೇನೆ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.

Karnataka School Reopen  basavaraj bommai welcome to all students

ಬೆಂಗಳೂರು (ಮೇ.16): ರಾಜ್ಯದಲ್ಲಿ ಸೋಮವಾರದಿಂದ ಎಲ್ಲಾ ಮಾದರಿಯ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಆರಂಭವಾಗಲಿವೆ. ಈ ಮೂಲಕ 2 ವರ್ಷಗಳ ಬಳಿಕ ನಿಗದಿತ ಸಮಯಕ್ಕೆ ಶೈಕ್ಷಣಿಕ ವರ್ಷ (academic year) ಆರಂಭವಾಗುತ್ತಿದ್ದು ಕೋವಿಡ್‌ (Covid) ಪೂರ್ವ ಮಾದರಿಯ ಮಕ್ಕಳ ಕಲರವಕ್ಕೆ ಶಾಲೆಗಳು (School) ಸಾಕ್ಷಿಯಾಗಲಿವೆ.

ಇನ್ನು ಶಾಲೆ ಪ್ರಾರಂಭದ ಬಗ್ಗೆ ಮಾತನಾಡಿರುವ ಸಿಎಂ, ಬಹಳ ದಿನಗಳ ನಂತರ ಶಾಲೆ ಆರಂಭವಾಗ್ತಿದೆ. ಶಿಕ್ಷಣ ಇಲಾಖೆ (Education Department) ಎಲ್ಲಾ ರೀತಿಯ ಸಿದ್ದತೆ ಮಾಡಿಕೊಂಡಿದೆ. ಎಲ್ಲಾ ಮಕ್ಕಳಿಗೂ ಶಾಲೆಗೆಗಳಿಗೆ ಪ್ರೀತಿಯಿಂದ ಸ್ವಾಗತ ಕೊರುತ್ತೇನೆ. ಮಕ್ಕಳಿಗೆ ಶಿಕ್ಷಣ ಬಹಳ ಮುಖ್ಯ. ಒಳ್ಳೆಯ ವಾತವಾರಣದ ಶಾಲೆಯಲ್ಲಿ ಕಲಿತಾಗ ಮಕ್ಕಳಿಗೆ ಒಳ್ಳೆಯ ಪರಿಣಾಮ ಆಗುತ್ತೆ. ಪುಸ್ತಕ,ಬಟ್ಟೆ, ಸೈಕಲ್ ಬೇಕಾದ ಎಲ್ಲವನ್ನು ಕೊಡುವ ಕೆಲಸ ಮಾಡ್ತೀವಿ. ಎರಡು ವರ್ಷ ಶಾಲೆ ಆರಂಭವಾಗುವುದೇ ಅನಿಶ್ಚಿತೆ ಇತ್ತು, ಸರಿಯಾಗಿ ಶಾಲೆಗಳು ನಡೆದಿರಲಿಲ್ಲ.  ಈಗ ಶಾಲೆಗಳು ಆರಂಭವಾಗ್ತಿದೆ ಮುಂಬರುವ ದಿನಗಳಲ್ಲಿ ಎಲ್ಲವನ್ನೂ ನೀಡಿ ಒಳ್ಳೆಯ ವಾತವಾರಣ ನಿರ್ಮಾಣ ಮಾಡ್ತೀವಿ ಎಂದು ಹೇಳಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರು ತುಮಕೂರಿನ ಎಂಪ್ರೆಸ್‌ ಕರ್ನಾಟಕ ಪಬ್ಲಿಕ್‌ ಶಾಲೆಯಲ್ಲಿ ಮಧ್ಯಾಹ್ನ 12.30ಕ್ಕೆ ಕಲಿಕಾ ಚೇತರಿಕೆ ಕಾರ್ಯಕ್ರಮಕ್ಕೆ ಚಾಲನೆ ನೀಡುವ ಮೂಲಕ 2022-23ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ಹಸಿರು ನಿಶಾನೆ ತೋರಲಿದ್ದಾರೆ.

ಮಕ್ಕಳಿಂದ ದೂರ ಉಳಿದ ಸೈಕಲ್ ಭಾಗ್ಯ!

ಈ ಹಿನ್ನೆಲೆಯಲ್ಲಿ ಮಂಡ್ಯ, ತುಮಕೂರು ಪ್ರವಾಸಕ್ಕೆ ತೆರಳಿದ ಸಿಎಂ ಬೊಮ್ಮಯಿ ಹೆಚ್ ಎ ಎಲ್ ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ ಮೂಲಕ ಆದಿಚುಂಚನಗಿರಿಗೆ ತೆರಳಿದರು. ಆದಿಚುಂಚನಗಿರಿ ವೈದ್ಯಕೀಯ ಮಹಾವಿದ್ಯಾಲಯದ ಪದವಿ ಪ್ರದಾನ ಸಮಾರಂಭದಲ್ಲಿ ಅವರು ಭಾಗಿಯಾಗಲಿದ್ದಾರೆ. ಸಿಎಂ ಜೊತೆಗೆ ಆರೋಗ್ಯ ಸಚಿವ ಸುಧಾಕರ್ ಕೂಡ  ತೆರಳಿದ್ದಾರೆ.

ಭಾನುವಾರ ರಜಾ ದಿನವಾದರೂ ಶಿಕ್ಷಕರು ತಮ್ಮ ಶಾಲೆಗಳಿಗೆ ಆಗಮಿಸಿ ಶಿಕ್ಷಣ ಇಲಾಖೆಯ ಸೂಚನೆಯಂತೆ ಎಸ್‌ಡಿಎಂಸಿ ಸದಸ್ಯರು, ಹಳೇ ವಿದ್ಯಾರ್ಥಿಗಳು ಹಾಗೂ ಸ್ಥಳೀಯ ಗ್ರಾಮಸ್ಥರ ನೆರವಿನೊಂದಿಗೆ ಶಾಲಾ ಪ್ರಾರಂಭೋತ್ಸವಕ್ಕೆ ತರಗತಿಗಳನ್ನು ಸಜ್ಜುಗೊಳಿಸಿದ್ದಾರೆ.

ಶ್ರಮದಾನ ಕಾರ್ಯಕ್ರಮದಡಿ ಬೆಳಗ್ಗೆಯಿಂದಲೇ ಪ್ರತಿಯೊಂದು ಕೊಠಡಿ, ಬಿಸಿಯೂಟದ ಅಡುಗೆ ಮನೆ, ಶಾಲಾ ಆವರಣ ಸ್ವಚ್ಛತಾ ಕಾರ್ಯ ನಂತರ ಬಾಳೆಕಂದು, ಮಾವಿನ ಪತ್ರೆ ಕಟ್ಟಿ, ರಂಗೋಲಿ ಬಿಡಿಸುವುದು ಸೇರಿದಂತೆ ತಳಿರು ತೋರಣಗಳಿಂದ ಶಾಲೆಗಳನ್ನು ಸಿಂಗರಿಸಲಾಗಿದ್ದು, ಮಕ್ಕಳನ್ನು ಬರಮಾಡಿಕೊಳ್ಳಲು ಎಲ್ಲೆಡೆ ಸರ್ವ ಸಿದ್ಧತೆ ಮಾಡಿಕೊಳ್ಳಲಾಗಿದೆ.

ಕಳೆದ ಎರಡು ವರ್ಷಗಳಲ್ಲಿ ಮಹಾಮಾರಿ ಕೋವಿಡ್‌ನಿಂದಾಗಿ ನಿಗದಿತ ಅವಧಿಗೆ ಶಾಲೆಗಳು ಆರಂಭವಾಗದೆ, ಸಮರ್ಪಕ ರೀತಿಯಲ್ಲಿ ಭೌತಿಕ ತರಗತಿಗಳು ನಡೆಯದೆ ಮಕ್ಕಳು ಕಲಿಕೆಯಲ್ಲಿ ತೀವ್ರವಾಗಿ ಹಿಂದುಳಿದಿದ್ದಾರೆ. ಹೀಗಾಗಿ ಕಲಿಕಾ ಕೊರತೆ ಸರಿದೂಗಿಸಲು 2022-23ನೇ ಶೈಕ್ಷಣಿಕ ಸಾಲನ್ನು ‘ಕಲಿಕಾ ಚೇತರಿಕೆ ವರ್ಷ’ ಎಂದು ಘೋಷಿಸಲಾಗಿದೆ. 

NEET PG-22 Exam ಮುಂದೂಡಲು ನಿರಾಕರಿಸಿದ ಸುಪ್ರೀಂ

ಆದ್ದರಿಂದ, 2 ವರ್ಷ ಕಲಿಕಾ ಕೊರತೆ ಎದುರಿಸಿರುವ ಮಕ್ಕಳಿಗೆ ಕಲಿಕಾ ಚೇತರಿಕೆ ಕಾರ್ಯಕ್ರಮದ ಮೂಲಕ ತರಗತಿಗಳು ಆರಂಭವಾಗಲಿವೆ. ಮೇ 16ರಿಂದ 30ವರೆಗೆ ಸಂಪೂರ್ಣವಾಗಿ 1ರಿಂದ 10ನೇ ತರಗತಿ ಮಕ್ಕಳಿಗೆ ಹಿಂದಿನ ವರ್ಷಗಳಲ್ಲಿ ಕಲಿಯಲಾಗದ ಪಠ್ಯಬೋಧನೆ ಮಾಡಲಾಗುತ್ತದೆ. ಬಳಿಕ ಜೂ.1ರಿಂದ ಕಲಿಕಾ ಚೇತರಿಕೆ ಕಾರ್ಯಕ್ರಮಗಳ ಜೊತೆ ಜೊತೆಗೇ ಪ್ರಸಕ್ತ ಸಾಲಿನ ಪಠ್ಯ ಬೋಧನಾ ತರಗತಿಗಳು ಆರಂಭವಾಗಲಿವೆ.

ಸೋಮವಾರದಿಂದಲೇ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ಯೋಜನೆಯು ಆರಂಭವಾಗಲಿದೆ. ಬಿಸಿಯೂಟದಲ್ಲಿ ಮೊದಲ ದಿನ ಸಿಹಿ ಊಟ ತಯಾರಿಸಿ ಬಡಿಸಬೇಕು. ಇದಕ್ಕೆ ಎಲ್ಲಾ ಅಗತ್ಯ ಕ್ರಮಗಳನ್ನು ಆಯಾ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಉಪ ನಿರ್ದೇಶಕರು ಕೈಗೊಳ್ಳಬೇಕು ಎಂದು ಸೂಚಿಸಲಾಗಿದೆ.

Latest Videos
Follow Us:
Download App:
  • android
  • ios