ಶಾಲೆ ಪ್ರಾರಂಭದ ಬೆನ್ನಲ್ಲೇ ವಿದ್ಯಾರ್ಥಿಗಳಿಗೊಂದು ಸಿಹಿ ಸುದ್ದಿ
* ರಾಜ್ಯದಲ್ಲಿ ಆಗಸ್ಟ್ 23ರಿಂದ 9 ರಿಂದ 12 ನೇ ತರಗತಿಗಳು ಪ್ರಾರಂಭ
* ಈಗಾಗಲೇ ಶಾಲಾ-ಕಾಲೇಜು ಪ್ರಾರಂಭಕ್ಕೆ ಮಾರ್ಗಸೂಚಿ ಪ್ರಕಟ
* ಇದರ ಬೆನ್ನಲ್ಲೇ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ
ಬೆಂಗಳೂರು, (ಆ.21): ಇದೇ ಆಗಸ್ಟ್ 23ರಿಂದ 9 ರಿಂದ 12 ನೇ ತರಗತಿಗಳು ಪ್ರಾರಂಭವಾಗಲಿದ್ದು, ಈಗಾಗಲೇ ಮಾರ್ಗಸೂಚಿಯನ್ನು ಸಹ ಬಿಡುಗಡೆ ಮಾಡಿದೆ. ಇದರ ಬೆನ್ನಲ್ಲೇ ವಿದ್ಯರ್ಥಿಗಳಿಗೊಂದು ಸಿಹಿ ಸುದ್ದಿ ಇಲ್ಲಿದೆ.
ಹೌದು... ಬಿಎಂಟಿಸಿ ಬಸ್ಗಳಲ್ಲಿ ವಿದ್ಯಾರ್ಥಿಗಳು ವಾಸಸ್ಥಳದಿಂದ ಶಾಲಾ- ಕಾಲೇಜಿಗೆ ಉಚಿತವಾಗಿ ಪ್ರಯಾಣಿಸಲು ಅವಕಾಶ ಮಾಡಿಕೊಡಲಾಗಿದೆ.
ಆ.23ರಿಂದ ಶಾಲೆ, ಕಾಲೇಜು ಆರಂಭಕ್ಕೆ ಸಿದ್ಧತೆ
2020-21 ಸಾಲಿನಲ್ಲಿ ವಿತರಣೆ ಮಾಡಿರುವ ಸ್ಮಾರ್ಟ್ ಕಾರ್ಡ್ ವಿದ್ಯಾರ್ಥಿ ಪಾಸ್ ಮತ್ತು ಈ ವರ್ಷದ ಶೈಕ್ಷಣಿಕ ದಾಖಲಾತಿ ಶುಲ್ಕ ಕಟ್ಟಿರುವ ರಶೀದಿ ತೋರಿಸಿ ವಿದ್ಯಾರ್ಥಿಗಳು ಬಿಎಂಟಿಸಿ ವ್ಯಾಪ್ತಿಯ ಬಸ್ಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದಾಗಿದೆ.
ಅಥವಾ ಶಾಲಾ ಕಾಲೇಜಿನ ಐಡಿ ಕಾರ್ಡ್ ತೋರಿಸಿಯೂ ಉಚಿತ ಪ್ರಯಾಣ ಮಾಡಬಹುದಾಗಿದೆ. ಬಿಎಂಟಿಸಿಯ ಮುಂದಿನ ಆದೇಶದವರೆಗೆ ವಿದ್ಯಾರ್ಥಿಗಳಿಗೆ ಫ್ರೀ ಪ್ರಯಾಣಕ್ಕೆ ಅವಕಾಶ ಒದಗಿಸಲಾಗಿದೆ.
ಶಾಲೆ ಪ್ರಾರಂಭಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಆದ್ರೆ, 1ರಿಂದ8ನೇ ತರಗತಿ ಆರಂಭದ ಬಗ್ಗೆ ರಾಜ್ಯ ಸರ್ಕಾರ ಇನ್ನೂ ಯಾವುದೇ ತೀರ್ಮಾನ ತೆಗೆದುಕೊಂಡಿಲ್ಲ.