II PUC 2022 exam: ದ್ವಿತೀಯ ಪಿಯುಸಿ ಅಂತಿಮ ಪರೀಕ್ಷಾ ವೇಳಾಪಟ್ಟಿ ಬದಲಾವಣೆ

ವಿದ್ಯಾರ್ಥಿಗಳೇ ಗಮನಿಸಿ, ದ್ವಿತೀಯ ಪಿಯುಸಿ ಅಂತಿಮ ಪರೀಕ್ಷಾ ವೇಳಾಪಟ್ಟಿ ಬದಲಾವಣೆ ಮಾಡಲಾಗಿದೆ. 

Karnataka second PUC 2022 exam final time table changed  gow

ವರದಿ: ನಂದೀಶ್ ಮಲ್ಲೇನಹಳ್ಳಿ, ಏಷ್ಯಾನೆಟ್ ಸುವರ್ಣ ನ್ಯೂಸ್ 

ಬೆಂಗಳೂರು (ಎ.7): 2021-22ನೇ ಸಾಲಿನ ದ್ವಿತೀಯ ಪಿಯುಸಿ ಮುಖ್ಯ ಪರೀಕ್ಷೆಯ (PUC Exmas) ಅಂತಿಮ ವೇಳಾಪಟ್ಟಿ (2nd PUC Final Time Table)ಯಲ್ಲಿ ಕೆಲ ಬದಲಾವಣೆ ಮಾಡಲಾಗಿದೆ. ಈ ಬಗ್ಗೆ  ಪದವಿ ಪೂರ್ವ ಶಿಕ್ಷಣ ಇಲಾಖೆ (Department Of Pre-University Education) ಪ್ರಕಟಣೆ ಹೊರಡಿಸಿದೆ. ಕೆಲ‌ ತಾಂತ್ರಿಕ ಕಾರಣಗಳಿಂದ ವಿವಿಧ ವಿಷಯಗಳ ಪರೀಕ್ಷೆ ದಿನಾಂಕ ಮಾತ್ರ ಅದಲು ಬದಲು ಮಾಡಲಾಗಿದೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಮಾಹಿತಿ ನೀಡಿದೆ. ಬದಲಾವಣೆ ಮಾಡಿರುವ ವಿಷಯಗಳ ಅಂತಿಮ ವೇಳಾಪಟ್ಟಿ ಪದವಿಪೂರ್ವ ಶಿಕ್ಷಣ ಇಲಾಖೆ ಬಿಡುಗಡೆ ಮಾಡಿದೆ.

 

ಈ ಮೊದಲು ತಿಳಿಸಿದಂತೆ ಏ. 22ರಿಂದ‌ ಮೇ 18ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದೆ ಹೊರತು, ಪರೀಕ್ಷೆಯ ದಿನಾಂಕವನ್ನು ಮುಂದೂಡಿಲ್ಲ.  ವಿಷಯಗಳ ಪರೀಕ್ಷಾ ದಿನಾಂಕದಲ್ಲಿ ಅದಲು ಬದಲಾಗಿದೆ.

ಬದಲಾವಣೆಯಾದ ವೇಳಾಪಟ್ಟಿ ಇಂತಿದೆ.
ಏ. 22 - ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ
ಏ. 23 - ಗಣಿತ ಶಾಸ್ತ್ರ, ಶಿಕ್ಷಣ ಶಾಸ್ತ್ರ
ಏ. 25 - ಅರ್ಥಶಾಸ್ತ್ರ
ಏ. 26 - ಮನಶ್ಶಾಸ್ತ್ರ, ರಸಾಯನ ಶಾಸ್ತ್ರ, ಹಿಂದೂಸ್ಥಾನಿ ಸಂಗೀತ
ಏ.27, ತಮಿಳು, ತೆಲುಗು,ಮಲಾಯಳಂ, ಮರಾಠಿ,ಉರ್ದು, ಸಂಸ್ಕೃತ, ಪ್ರೆಂಚ್
ಏ. 28 - ಕನ್ನಡ
ಮೇ  4 - ಭೂಗೋಳಶಾಸ್ತ್ರ, ಜೀವಶಾಸ್ತ್ರ
ಮೇ 5 - ಮಾಹಿತಿ ತಂತ್ರಜ್ಞಾನ, ರಿಟೈಲ್ ಆಟೋಮೊಬೈಲ್, ಹೆಲ್ತ್ ಕೇರ್ ಬ್ಯೂಟಿ ಅಂಡ್ ವೆಲ್ ನೆಸ್
ಮೇ. 6 - ಇಂಗ್ಲಿಷ್
ಮೇ 10 - ಇತಿಹಾಸ, ಭೌತಶಾಸ್ತ್ರ
ಮೇ 12 - ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ
ಮೇ 14 - ಸಮಾಜಶಾಸ್ತ್ರ, ಗಣಕ ವಿಜ್ಞಾನ, ವಿದ್ಯುನ್ಮಾನ ಶಾಸ್ತ್ರ
ಮೇ 17 - ಐಚ್ಚಿಕ ಕನ್ನಡ, ಲೆಕ್ಕ ಶಾಸ್ತ್ರ, ಭೂಗರ್ಭ ಶಾಸ್ತ್ರ, ಗೃಹವಿಜ್ಞಾನ
ಮೇ 18 - ಹಿಂದಿ

Tamil Nadu ಸರಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶೇ.7.5 ವೈದ್ಯಕೀಯ ಕೋಟಾ: ಮದ್ರಾಸ್ ಹೈಕೋರ್ಟ್

ಈ ಹಿಂದೆ ಏಪ್ರಿಲ್ 16 ರಿಂದ ಮೇ 6ರ ವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿರುವ ಬಗ್ಗೆ ಪದವಿಪೂರ್ವ ಶಿಕ್ಷಣ ಮಂಡಳಿ ಘೋಷಣೆ ಮಾಡಿತ್ತು. ಆದ್ರೆ ದ್ವಿತೀಯ PU ಪರೀಕ್ಷೆ ಸಂದರ್ಭದಲ್ಲಿ JEE ಮುಖ್ಯ ಪರೀಕ್ಷೆ ಹಿನ್ನೆಲೆಯಲ್ಲಿ ಇದೀಗ ಆಕ್ಷೇಪಣೆಗಳನ್ನು ಸರಿ ಪಡಿಸಿದ ಬಳಿಕ, ಅಂತಿಮ ವೇಳಾಪಟ್ಟಿಯನ್ನು ಪ್ರಕಟಿಸಿದೆ.

2021-22ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿಯನ್ನು ದಿನಾಂಕ 22-04-2022ರಿಂದ 11-05-2022ರವರೆಗೆ ನಿಗದಿಪಡಿಸಲಾಗಿದ್ದು, ಆಕ್ಷೇಪಣೆಗಳನ್ನು ಸಲ್ಲಿಸಲು ದಿನಾಂಕ 05-03-2022ರ ಸಂಜೆ 5 ಗಂಟೆಯವರೆಗೆ ಸಮಯ ನೀಡಲಾಗಿತ್ತು. ಸದ್ಯ ಯಾವುದೇ ಅಕ್ಷೇಪಣೆಗಳಿಲ್ಲದ ಕಾರಣ ದ್ವಿತೀಯ ಪಿಯು ಮುಖ್ಯ ಪರೀಕ್ಷೆಯ ವೇಳಾಪಟ್ಟಿಯನ್ನು ಅಂತಿಮ ಮಾಡಿ ಪ್ರಕಟ ಮಾಡಲಾಗಿದೆ.

Latest Videos
Follow Us:
Download App:
  • android
  • ios