Second PUC Exam 3 Result: ದ್ವಿತೀಯ ಪಿಯು ಪರೀಕ್ಷೆ 3: ಶೇ.23.73 ಫಲಿತಾಂಶ
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ದ್ವಿತೀಯ ಪಿಯುಸಿ ಪರೀಕ್ಷೆ-3ರ ಫಲಿತಾಂಶವನ್ನು ಪ್ರಕಟಿಸಿದ್ದು, ಶೇ.23.73 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ.
ಬೆಂಗಳೂರು (ಜು.17): ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ದ್ವಿತೀಯ ಪಿಯುಸಿ ಪರೀಕ್ಷೆ-3ರ ಫಲಿತಾಂಶವನ್ನು ಪ್ರಕಟಿಸಿದ್ದು, ಶೇ.23.73 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ. ಪರೀಕ್ಷೆ-3ಕ್ಕೆ ನೋಂದಣಿ ಮಾಡಿಕೊಂಡಿದ್ದ 76,005 ಮಂದಿಯಲ್ಲಿ 25,466 ಮಂದಿ ಹಾಜರಾಗಿದ್ದು, 17,901 (ಶೇ.23.73) ಮಂದಿ ಉತ್ತೀರ್ಣರಾಗಿದ್ದಾರೆ. ಕಲಾ ವಿಭಾಗದಲ್ಲಿ ಶೇ.21.71 ವಾಣಿಜ್ಯ ವಿಭಾಗದಲ್ಲಿ ಶೇ.23.58 ಮತ್ತು ವಿಜ್ಞಾನದಲ್ಲಿ ಶೇ.27.06 ಮಂದಿ ಪಾಸ್ ಆಗಿದ್ದಾರೆ.
ಜೂ.28ರಿಂದ ಜು.5ರ ವರೆಗೆ ಒಟ್ಟು 248 ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲಾಗಿತ್ತು. ಮಂಗಳವಾರ ಮಧ್ಯಾಹ್ನ 3 ಗಂಟೆಗೆ ಮಂಡಳಿ ಜಾಲತಾಣ http://karresults.nic.in ನಲ್ಲಿ ಫಲಿತಾಂಶ ಪ್ರಕಟಿಸಲಾಗಿದೆ. ವಿದ್ಯಾರ್ಥಿಗಳು ತಮ್ಮ ಜನ್ಮ ದಿನಾಂಕ ಮತ್ತು ನೋಂದಣಿ ಸಂಖ್ಯೆಯನ್ನು ನಮೂದಿಸಿ ಫಲಿತಾಂಶ ವೀಕ್ಷಿಸಬಹುದು. ಪರೀಕ್ಷೆ-1, 2 ಮತ್ತು 3ರಲ್ಲಿ ವಿಷಯವಾರು ಗಳಿಸಿದ ಅತಿ ಹೆಚ್ಚು ಅಂಕಗಳನ್ನು ಪರಿಗಣಿಸಿ ಅಂತಿಮ ಫಲಿತಾಂಶವನ್ನು ನಂತರದಲ್ಲಿ ಮಂಡಳಿಯಲ್ಲಿ ಪ್ರಕಟಿಸಲಾಗುತ್ತದೆ ಎಂದು ಮಂಡಳಿ ಅಧ್ಯಕ್ಷರಾದ ಮಂಜುಶ್ರೀ ತಿಳಿಸಿದ್ದಾರೆ.
ತಮಿಳುನಾಡಿಗೆ ನಿತ್ಯ 1.5 ಟಿಎಂಸಿ ಕಾವೇರಿ ನೀರು: ಡಿ.ಕೆ.ಶಿವಕುಮಾರ್
ಛಾಯಾ ಪ್ರತಿಗೆ ಜು.21 ಕೊನೆ ದಿನ: ಪರೀಕ್ಷೆ 3ರ ಉತ್ತರ ಪತ್ರಿಕೆಗಳ ಛಾಯಾಪ್ರತಿಗೆ ಅರ್ಜಿ ಸಲ್ಲಿಸಲು ಜು.21 ಕೊನೆಯ ದಿನವಾಗಿದೆ. ಉತ್ತರ ಪತ್ರಿಕೆಗಳ ಛಾಯಾಪ್ರತಿ ಪಡೆದವರು ಜು.18ರಿಂದ 24ರವರೆಗೆ ಮರು ಮೌಲ್ಯಮಾಪನ ಹಾಗೂ ಮರು ಎಣಿಕೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಛಾಯಾ ಪ್ರತಿ ಪಡೆಯಲು ಪ್ರತಿ ವಿಷಯಕ್ಕೆ 530 ರು. ಮತ್ತು ಮರು ಮೌಲ್ಯಮಾಪನಕ್ಕೆ ಪ್ರತಿ ವಿಷಯಕ್ಕೆ 1,670 ರು. ಗಳನ್ನು ನಿಗದಿ ಮಾಡಲಾಗಿದೆ ಎಂದು ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.