PUC Exams ದ್ವಿತೀಯ ಪಿಯುಸಿ ಮಾದರಿ ಪ್ರಶ್ನೆ ಪತ್ರಿಕೆ ಬಿಡುಗಡೆ

*  ದ್ವಿತೀಯ ಪಿಯುಸಿ ಮಾದರಿ ಪ್ರಶ್ನೆ ಪತ್ರಿಕೆ ಬಿಡುಗಡೆ
* ಒಟ್ಟು 42 ವಿಷಯಗಳ ಮಾದರಿ ಪ್ರಶ್ನೆ ಪತ್ರಿಕೆ ರಿಲೀಸ್
* ಮಾಹಿತಿ ನೀಡಿದ ಶಿಕ್ಷಣ ಸಚಿವ ನಾಗೇಶ್

karnataka second puc model question paper released Says minister bc nagesh Twitter rbj

ಬೆಂಗಳೂರು. (ಫೆ.02):  2021-22ನೇ ಸಾಲಿನ ದ್ವಿತೀಯ ಪಿಯುಸಿ ಮಾದರಿ ಪ್ರಶ್ನೆ ಪತ್ರಿಕೆ(Second PUC Model Question Paper) ಬಿಡುಗಡೆ ಮಾಡಲಾಗಿದೆ. ಒಟ್ಟು 42 ವಿಷಯಗಳ ಮಾದರಿ ಪ್ರಶ್ನೆ ಪತ್ರಿಕೆಯನ್ನು ಬುಧವಾರ ಬಿಡುಗಡೆ ಮಾಡಲಾಗಿದೆ 

2021- 22 ನೇ ಸಾಲಿನ ದ್ವಿತೀಯ ಪಿಯು ಪರೀಕ್ಷೆಯ9Second PUC Exams) ಮಾದರಿ ಪ್ರಶ್ನೆ ಪತ್ರಿಕೆಗಳನ್ನು ಪ್ರಕಟಿಸಲಾಗಿದೆ. ವಿದ್ಯಾರ್ಥಿಗಳು ಪ್ರಯೋಜನ ಪಡೆದುಕೊಳ್ಳಲು ಕೋರಲಾಗಿದೆ ಎಂದು ಶಿಕ್ಷಣ ಇಲಾಖೆ ಸಚಿವ ಬಿ.ಸಿ ನಾಗೇಶ್ ಟ್ವೀಟ್ ಮೂಲಕ ತಿಳಿಸಿದ್ದು, pue.kar.nic.in ವೆಬ್​​ಸೈಟ್​ನಲ್ಲಿ ಪ್ರಶ್ನೆ ಪತ್ರಿಕೆ ಲಭ್ಯವಿದೆ.

PUC Exam Time Table: 2021-22ನೇ ಸಾಲಿನ ದ್ವೀತಿಯ ಪಿಯುಸಿ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ

ಈಗಾಗಲೇ  ದ್ವೀತಿಯ ಪಿಯುಸಿ ಪರೀಕ್ಷೆಯ(PUC Exams) ತಾತ್ಕಾಲಿಕ ವೇಳಾಪಟ್ಟಿ(Provisional Time Table) ಬಿಡುಗಡೆ ಮಾಡಲಾಗಿದೆ.

ಪದವಿ ಪೂರ್ವ ಶಿಕ್ಷಣ ಇಲಾಖೆ (PUC Board) 2021-22ನೇ ಸಾಲಿನ ದ್ವೀತಿಯ ಪಿಯುಸಿಯ (Second PUC) ತಾತ್ಕಾಲಿಕ ವೇಳಾಪಟ್ಟಿ (Exam Timetable) ಬಿಡುಗಡೆ ಮಾಡಿದ್ದು, ಏಪ್ರಿಲ್ 16ರಿಂದ ಮೇ 4ರವರೆಗೆ ಪಿಯು ವಾರ್ಷಿಕ ಪರೀಕ್ಷೆ ನಡೆಯಲಿವೆ.

ಪಿಯುಸಿ ವೇಳಾಪಟ್ಟಿ ಇಂತಿದೆ
ಏಪ್ರಿಲ್​ 14- ಗಣಿತ
ಏಪ್ರಿಲ್​ 18- ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ
ಏ.20- ಇತಿಹಾಸ, ಭೌತಶಾಸ್ತ್ರ
ಏಪ್ರಿಲ್ 22- ತರ್ಕಶಾಸ್ತ್ರ
ಏ.23- ಮನಃಶಾಸ್ತ್ರ, ರಸಾಯನಶಾಸ್ತ್ರ, 
ಏ.25- ಅರ್ಥಶಾಸ್ತ್ರ
ಏ.26- ಹಿಂದಿ, 
ಏಪ್ರಿಲ್​​ 28- ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ
 ಏ.29- ಕನ್ನಡ
 ಏ.30- ಸಮಾಜಶಾಸ್ತ್ರ, ಕಂಪ್ಯೂಟರ್​​ ಸೈನ್ಸ್​
 ಮೇ 2- ಭೂಗೋಳ ಶಾಸ್ತ್ರ ಹಾಗೂ ಜೀವಶಾಸ್ತ್ರ
 ಮೇ 4- ಇಂಗ್ಲಿಷ್​​ ಪರೀಕ್ಷೆ ನಡೆಯಲಿದೆ.

ಎಸ್‌ಎಸ್‌ಎಲ್‌ಸಿ ವೇಳಾಪಟ್ಟಿ
ಕಳೆದ ವಾರ ಅಷ್ಟೇ ಎಸ್‌ಎಸ್ಎಲ್‌ಸಿ(SSLC) ಪೂರ್ವ ಸಿದ್ಧತಾ ಹಾಗೂ  ಮುಖ್ಯ ಪರೀಕ್ಷೆಯ ತಾತ್ಕಾಕಲಿಕ ವೇಳಾಪಟ್ಟಿ ಪ್ರಕಟಿಸಲಾಗಿತ್ತು,ಇದೀಗ ಇಂದು(ಮಂಗಳವಾರ) ಅಂತಿಮ ವೇಳಾಪಟ್ಟಿಯಲ್ಲಿ (SSLC Final Time Table) ಪ್ರಕಟಿಸಲಾಗಿದೆ. ಈ ವೇಳಾಪಟ್ಟಿಯಂತೆ ಪರೀಕ್ಷೆಗಳು ನಡೆಯಲಿವೆ.

ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಎಸ್ಎಸ್ಎಲ್ಸಿ ಮುಖ್ಯಪರೀಕ್ಷೆಯ ವೇಳಾಪಟ್ಟಿಯನ್ನು ಪ್ರಕಟಿಸಿದ್ದು, ಮಾರ್ಚ್ 28ರಿಂದ ಏಪ್ರಿಲ್ 11ರವರೆಗೆ ಪರೀಕ್ಷೆಗಳು ನಡೆಯಲಿವೆ. 

ಪರೀಕ್ಷಾ ಸಮಯ ಬೆಳಗ್ಗೆ 10.30ರಿಂದ ಮಧ್ಯಾಹ್ನ 1.45. ಪ್ರತಿ ವಿಷಯಕ್ಕೂ ಪ್ರಶ್ನೆ ಪತ್ರಿಕೆ ಓದಲು 15 ನಿಮಿಷ ಕಾಲಾವಕಾಶ ನೀಡಲಾಗಿದೆ.
 
ಅಂತಿಮ ವೇಳಾಪಟ್ಟಿ ಇಂತಿದೆ
ಮಾರ್ಚ್ 28- ಪ್ರಥಮ ಭಾಷೆ, 
ಮಾರ್ಚ್ 30-  ದ್ವಿತೀಯ ಭಾಷೆ ಇಂಗ್ಲೀಷ್, ಕನ್ನಡ
ಏಪ್ರಿಲ್ 1- ಅರ್ಥ ಶಾಸ್ತ್ರ, ಕೋರ್ ಸಬ್ಜೆಕ್ಟ್, 
ಏಪ್ರಿಲ್ 4- ಗಣಿತ, ಸಮಾಜಶಾಸ್ತ್ರ
ಏಪ್ರಿಲ್ 6- ಸಮಾಜ ವಿಜ್ಞಾನ
ಏ.8- ತೃತೀಯ ಭಾಷೆ
ಏ.11- ವಿಜ್ಞಾನ, ರಾಜ್ಯಶಾಸ್ತ್ರ, ಕರ್ನಾಟಕ/ ಹಿಂದೂಸ್ತಾನಿ ಸಂಗೀತ ಪರೀಕ್ಷೆ ನಡೆಸಲು ತೀರ್ಮಾನಿಸಿದೆ. 

ಪೂರ್ವ ಸಿದ್ಧತಾ ಪರೀಕ್ಷೆ ವೇಳಾಪಟ್ಟಿ
2021-22ನೇ ಸಾಲಿನ ಕರ್ನಾಟಕ ಎಸ್‌ಎಸ್‌ಎಲ್‌ಸಿ( SSLC) ಪೂರ್ವ ಸಿದ್ಧತಾ ಪರೀಕ್ಷೆ ವೇಳಾಪಟ್ಟಿ(SSLC Preparatory Exam Time Table) ಪ್ರಕಟವಾಗಿದ್ದು, ಫೆಬ್ರವರಿ 21 ರಿಂದ 26 ರವರೆಗೆ SSLC ಪೂರ್ವ ಸಿದ್ಧತಾ ಪರೀಕ್ಷೆ ನಡೆಯಲಿವೆ. ಬೆಳಗ್ಗೆ 1.30ರಿಂದ ಮಧ್ಯಾಹ್ನ 1.45ರ ವರಗೆ ಪರೀಕ್ಷೆಗಳು ನಡೆಯಲಿವೆ.

ಪೂರ್ವ ಸಿದ್ಧತಾ ಪರೀಕ್ಷೆ ವೇಳಾಪಟ್ಟಿ ಇಂತಿದೆ,
* 21-2-2022(ಪ್ರಥಮ ಭಾಷೆ: ಕನ್ನಡ, ತೆಲಗು, ತಮಿಳು, ಮರಾಠಿ, ಉರ್ದು, ಇಂಗ್ಲೀಷ್, ಸಂಸ್ಖ್ರತ, 
* 22-2-2022: ಸಮಾಜ ವಿಜ್ಞಾನ
*23-2-2022 (ದ್ವಿತೀಯ ಭಾಷೆ): ಇಂಗ್ಲೀಷ್, ಕನ್ನಡ 
* 24-2-2022: ಗಣಿತ
* 25-2-2022(ತೃತೀಯ ಭಾಷೆ): ಹಿಂದಿ, ಕನ್ನಡ, ಇಂಗ್ಲೀಷ್, ಅರೇಬಿಕ್, ಉರ್ದು, ಪರ್ಷಿಯನ್
*26-2-2022 (ಕೋರ್ ಸಬ್ಜೆಕ್ಟ್): ವಿಜ್ಞಾನ

Latest Videos
Follow Us:
Download App:
  • android
  • ios