Asianet Suvarna News Asianet Suvarna News

ಜೂನ್ ಮೂರನೇ ವಾರದಲ್ಲಿ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ

ಜೂನ್ ಮೂರನೇ ವಾರದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸಲಾಗುವುದು ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ ಸಿ ನಾಗೇಶ್ ಹೇಳಿದ್ದಾರೆ

Karnataka second puc result 2022 will be announce in third week of june says minister bc nagesh gow
Author
Bengaluru, First Published May 20, 2022, 10:30 AM IST

ಬೆಂಗಳೂರು (ಮೇ.20):  ಜೂನ್ ಮೂರನೇ ವಾರದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವನ್ನು (second puc result 2022) ಪದವಿ ಪೂರ್ವ ಶಿಕ್ಷಣ ಇಲಾಖೆ ಪ್ರಕಟಿಸಲಿದೆ.  ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ  ಬಿ.ಸಿ. ನಾಗೇಶ್ (Minister of Primary and SecondEducation BC Nagesh)ನಿನ್ನೆ ಹತ್ತನೇ ತರಗತಿ ಫಲಿತಾಂಶ ಪ್ರಕಟಿಸಿದ ನಂತರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ್ದಾರೆ.  ಜೊತೆಗೆ ಇಂದು ಟ್ವೀಟ್ ಮಾಡಿ ಕೂಡ ಮಾಹಿತಿ ನೀಡಿದ್ದಾರೆ

 

ಇದೇ 24ರಿಂದ ದ್ವಿತೀಯ ಪಿಯುಸಿ ಪರೀಕ್ಷೆ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಆರಂಭವಾಗಲಿದ್ದು, ಜೂನ್ 16ರೊಳಗೆ ಮೌಲ್ಯಮಾಪನ ಮುಗಿಯಲಿದೆ. ಮೂರನೇ ವಾರದಲ್ಲಿ ಫಲಿತಾಂಶ ಪ್ರಕಟಿಸಲಾಗುವುದು ಎಂದು ಹೇಳಿದರು. ಮೌಲ್ಯಮಾಪಕರ ಸಂಭಾವನೆ ಹೆಚ್ಚಿಸುವ ಪ್ರಸ್ತಾವನೆಯನ್ನು ಹಣಕಾಸು ಇಲಾಖೆಗೆ ಕಳುಹಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ. 

SSLC Supplementary Exam 2022 ಜೂನ್ 27 ರಿಂದ ಪೂರಕ ಪರೀಕ್ಷೆ ಆರಂಭ

ಹಿಜಾಬ್ ಗದ್ದಲ, ಪರೀಕ್ಷೆ ಗೈರು ಸೇರಿದಂತೆ ಹಲವು ಕಾರಣಗಳಿಂದ ಭಾರಿ ಸದ್ದು ಮಾಡಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಭಾರಿ ಸದ್ದು ಮಾಡಿತ್ತು. ಇದೀಗ ಇಡೀ ರಾಜ್ಯವೇ ಪರೀಕ್ಷಾ ಫಲಿತಾಂಶದ ಮೇಲೆ ಕಣ್ಣಿಟ್ಟಿದೆ. ಕಳೆದ ತಿಂಗಳು ಎಪ್ರಿಲ್ 22 ರಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭಗೊಂಡಿತ್ತು. ಈ ಬಾರಿ ಪರೀಕ್ಷೆಗೆ ಗೈರಾದವರ ಸಂಖ್ಯೆ ಕೂಡ ಹೆಚ್ಚಿದೆ.

ದ್ವಿತೀಯ ಪಿಯುಸಿ ಪರೀಕ್ಷೆಗಳ ಪೈಕಿ ಗರಿಷ್ಠ ವಿದ್ಯಾರ್ಥಿಗಳು ಗೈರಾದ ವಿಷಯ ಎಂದರೆ ಅರ್ಥಶಾಸ್ತ್ರ. ಅರ್ಥಶಾಸ್ತ್ರ ವಿಷಯದ ಪರೀಕ್ಷೆಗೆ 28,000 ಕ್ಕೂ ಹೆಚ್ಚು ಅಭ್ಯರ್ಥಿಗಳು ಹಾಜರಾಗಿಲ್ಲ. ಇದರಲ್ಲಿ ನಿತ್ಯ ಕಾಲೇಜಿಗೆ ಬಂದು ತರಗತಿ ಬೋಧನೆಯಲ್ಲಿ ಪಾಲ್ಗೊಂಡ ಮಕ್ಕಳ ಸಂಖ್ಯೆಯೇ 20 ಸಾವಿರಕ್ಕೂ ಹೆಚ್ಚಿದೆ. ಉಳಿದವರು ಖಾಸಗಿ ಹಾಗೂ ಪುನರಾವರ್ತಿತ ಅಭ್ಯರ್ಥಿಗಳು. ತರಗತಿ ಮಕ್ಕಳೇ ಇಷ್ಟುದೊಡ್ಡ ಸಂಖ್ಯೆಯಲ್ಲಿ ಗೈರು ಹಾಜರಾಗಲು ಕಾರಣವೇನು ಎಂಬುದಕ್ಕೆ ಪಿಯು ಇಲಾಖೆಯಲ್ಲಿ ಉತ್ತರ ಇಲ್ಲ. ಇನ್ನು, ಕಳೆದ ವರ್ಷ ಕೋವಿಡ್‌ನಿಂದಾಗಿ ದ್ವಿತೀಯ ಪಿಯುಸಿ ಪರೀಕ್ಷೆಗಳು ನಡೆದಿರಲಿಲ್ಲ.

ಮೀನು ಹೆಕ್ಕುವ ಹುಡುಗನಿಗೆ DCಯಾಗೋ ಆಸೆ, ಗಾರೆ ಕೆಲಸದವನ ಮಗಳಿಗೆ

2020ರ ಪರೀಕ್ಷೆಯಲ್ಲಿ ಅರ್ಥಶಾಸ್ತ್ರ ವಿಷಯಕ್ಕೆ ಮಕ್ಕಳ ಗೈರು ಹಾಜರಾತಿ ಗಮನಿಸಿದರೆ ಈ ಬಾರಿ 8,000 ದಷ್ಟುಹೆಚ್ಚಳವಾಗಿದೆ. 2020ರ ಪಿಯು ಪರೀಕ್ಷೆಗಳಲ್ಲಿ 3,87,975 ನೋಂದಾಯಿತ ಅಭ್ಯರ್ಥಿಗಳಲ್ಲಿ 20,230 ಗೈರು ಹಾಜರಾಗಿದ್ದರು. ಈ ವರ್ಷ ಒಟ್ಟು 4,12,593 ನೋಂದಾಯಿತ ಅಭ್ಯರ್ಥಿಗಳಲ್ಲಿ 28 ಸಾವಿರ ಮಂದಿ ಗೈರು ಹಾಜರಾಗಿದ್ದಾರೆ. ಹೊಸಬರ ಪೈಕಿ ತುಮಕೂರು ಜಿಲ್ಲೆಯಲ್ಲಿ 1642, ಮೈಸೂರು 1115, ಚಿತ್ರದುರ್ಗ 1076 ಮತ್ತು ಬೆಂಗಳೂರು ದಕ್ಷಿಣ 1001 ಗೈರುಹಾಜರಾದವರು ಹೆಚ್ಚು ದಾಖಲಾಗಿದ್ದಾರೆ.

ಸಮವಸ್ತ್ರ ಕಡ್ಡಾಯಗೊಳಿಸಿದ ಕಾರಣ ಹಿಜಾಬ್ ಹೋರಾಟ ಮಾಡಿದ್ದ ಹಲವು ವಿದ್ಯಾರ್ಥಿನಿಯರು ಪರೀಕ್ಷೆಗೆ ಗೈರಾಗಿದ್ದರು. ಇತ್ತ ಕೆಲ ವಿದ್ಯಾರ್ಥಿಗಳಿಗೆ ಕೊರೋನಾ ಕೂಡ ತೀವ್ರ ಹಿನ್ನಡೆ ತಂದಿತ್ತು. ಈ ಬಾರಿ ದ್ವಿತೀಯ ಪಿಯುಸಿ ಪರೀಕ್ಷೆಗೆ 6.84 ಲಕ್ಷ ವಿದ್ಯಾರ್ಥಿಗಳು ನೋಂದಣಿ ಮಾಡಿದ್ದರು. ಕರ್ನಾಟಕದ 1,000ಕ್ಕೂ ಹೆಚ್ಚು ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲಾಗಿದೆ.

 ದ್ವಿತೀಯ ಪಿಯುಸಿ ಪರೀಕ್ಷೆಗಳ ವೇಳೆ ಪರೀಕ್ಷಾ ಕೇಂದ್ರಗಳ ಸುತ್ತ ನಿಷೇದಾಜ್ಞೆ ಜಾರಿ ಮಾಡಲಾಗಿತ್ತು. ಪರೀಕ್ಷಾ ಕೇಂದ್ರಗಳ 200 ಮೀಟರ್‌ ವ್ಯಾಪ್ತಿಯಲ್ಲಿನ ಝರಾಕ್ಸ್‌್ಸ ಅಂಗಡಿಗಳು, ಕಂಪ್ಯೂಟರ್‌ ಸೆಂಟರ್‌, ಸೈಬರ್‌ ಕೆಫೆಗಳು, ಕೋಚಿಂಗ್‌ ಕೇಂದ್ರಗಳು ಬೆಳಗ್ಗೆ 8 ಗಂಟೆಯಿಂದ ಪರೀಕ್ಷೆ ಮುಕ್ತಾಯವಾಗುವ ಅವಧಿಯವರೆಗೆ ತೆರೆಯದಂತೆ ಆದೇಶಿಸಲಾಗಿತ್ತು. ಪರೀಕ್ಷಾ ಕೇಂದ್ರದಲ್ಲಿ ಮೊಬೈಲ್‌ ಫೋನ್‌ ತರುವುದನ್ನು ಹಾಗೂ ಬಳಸುವುದನ್ನು ನಿಷೇಧಿಸಲಾಗಿದೆ. ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕರು ಮಾತ್ರ ಬೇಸಿಕ್‌ ಮೊಬೈಲ್‌ ಸೆಟ್‌ ಬಳಸಬಹುದಾಗಿದೆ ಎಂದು ಆದೇಶ ಹೊರಡಿಸಲಾಗಿತ್ತು.

Follow Us:
Download App:
  • android
  • ios