Asianet Suvarna News Asianet Suvarna News

ಶಾಲೆ ಪ್ರಾರಂಭಕ್ಕೆ ಕೇಂದ್ರ ಗೈಡ್‌ಲೈನ್ಸ್‌: ಮಹತ್ವ ಮಾಹಿತಿ ನೀಡಿದ ರಾಜ್ಯ ಹಿರಿಯ ಶಿಕ್ಷಣ ಅಧಿಕಾರಿ

ಲಾಕ್‌ಡೌನ್ ಬಳಿಕ ಮತ್ತೆ ಶಾಲೆ ಪುನರಾರಂಭ ಮಾಡಲು ಕೇಂದ್ರ ಸರ್ಕಾರ ಕೆಲ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಇದರ ಬೆನ್ನಲ್ಲೆ ಕರ್ನಾಟಕ ಶಿಕ್ಷಣ ಇಲಾಖೆ ಅಧಿಕಾರಿಗಳು ಸುವರ್ಣನ್ಯೂಸ್‌ಗೆ ಮಹತ್ವದ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.

Karnataka Senior Education Dept officer Reacts about centre guidelines for school reopening
Author
Bengaluru, First Published Sep 11, 2020, 2:43 PM IST

ಬೆಂಗಳೂರು, (ಸೆ.11): ಕೊರೋನಾ ಹಿನ್ನೆಲೆಯಲ್ಲಿ ಕಳೆದ ಮೂರ್ನಾಲ್ಕು ತಿಂಗಳಿನಿಂದ ಸ್ಥಗಿತಗೊಂಡಿದ್ದ ಕಾರ್ಯ ಚಟುವಟಿಕೆಗಳು ಹಂತ-ಹಂತವಾಗಿ ಆರಂಭವಾಗುತ್ತಿವೆ.

ಅದರಲ್ಲೂ ಪ್ರಮುಖವಾಗಿ ಶಿಕ್ಷಣ ಕ್ಷೇತ್ರವನ್ನು ಸ್ಟೆಪ್ ಬೈ ಸ್ಟೆಪ್‌ ಪ್ರಾರಂಭಿಸಲು ಕೇಂದ್ರ ಸರ್ಕಾರ ಕೇಂದ್ರ ಸರ್ಕಾರ ಕೆಲ ಗೈಡ್‌ಲೈನ್ಸ್‌ ಪ್ರಕಟಿಸಿದ್ದು,  ಬಾಗಿಲು ಹಾಕಿದ್ದ ಶಾಲೆಗಳನ್ನು ಪ್ರಾರಂಭಿಸಲು ಮುಂದಾಗಿದೆ. ಇದಕ್ಕೆ ಬೇಕಾದ ಎಲ್ಲಾ ರೀತಿಯ ಸಿದ್ಧತೆಗಳನ್ನ ಮಾಡಿಕೊಳ್ಳುವಂತೆ ಕೇಂದ್ರ, ಆಯಾ ರಾಜ್ಯಗಳಿಗೆ ಸೂಚಿಸಿದೆ. 

ಕೊನೆಗೂ ಶಾಲೆ ಪ್ರಾರಂಭಕ್ಕೆ ಮುಹೂರ್ತ ಫಿಕ್ಸ್: ಮಾರ್ಗಸೂಚಿ ಪ್ರಕಟ

ಈ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಹಂತ-ಹಂತವಾಗಿ ಶಾಲೆಗಳನ್ನು ಪ್ರಾರಂಭಿಸಲು ಬಿಎಸ್‌ವೈ ಸರ್ಕಾರ ಎಲ್ಲಾ ತಯಾರಿ ಮಾಡಿಕೊಳ್ಳುತ್ತಿದ್ದು, ಇದೇ ಸೆಪ್ಟೆಂಬರ್ 21ರಿಂದ 9ನೇ ತರಗತಿಯಿಂದ 12ನೇ ಕ್ಲಾಸ್ ಪುನರಾರಂಭಿಸಲು ನಿರ್ಧರಿಸಿದೆ. ಇನ್ನು ಈ ಬಗ್ಗೆ ರಾಜ್ಯ ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ಸುವರ್ಣ ನ್ಯೂಸ್‌ಗೆ ಮಹತ್ವದ ಮಾಹಿತಿ ಹಂಚಿಕೊಂಡಿದ್ದರು, ಅದು ಈ ಕೆಳಗಿನಂತಿದೆ.

21ರಿಂದ ಶಾಲಾ ಕಾಲೇಜುಗಳು ಪ್ರಾರಂಭ
Karnataka Senior Education Dept officer Reacts about centre guidelines for school reopening

ಇದೇ ಸೆಪ್ಟೆಂಬರ್ 21 ರಾಜ್ಯದಲ್ಲಿ ಶಾಲಾ ಕಾಲೇಜು ಪ್ರಾರಂಭಿಸಲು ತೀರ್ಮಾನಿಸಲಾಗಿದೆ. ಆದ್ರೆ ತರಗತಿಗಳಿಗೆ ವಿದ್ಯಾರ್ಥಿಗಳು ಯಾವಾಗ ಬರಬೇಕು ಅಂತ ಶಿಕ್ಷಣ ಸುತ್ತೋಲೆ ಹೊರಡಿಸಲಿದೆ ಎಂದು ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿ ಸುವರ್ಣ ನ್ಯೂಸ್ ಗೆ ಸ್ಪಷ್ಟನೆ ನೀಡಿದರು.

ಈಗಾಗಲೇ ಶಾಲಾ ಕಾಲೇಜು ಪ್ರಾರಂಭದ ಬಗ್ಗೆ ಕೇಂದ್ರ ಮಾರ್ಗಸೂಚಿ ಬಿಡುಗಡೆ ‌ಮಾಡಿದೆ. ಶಾಲಾ ಕಾಲೇಜುಗಳು 21 ರಿಂದ ಓಪನ್ ಆಗಲಿವೆ ಎಂದು ಹೇಳಿದರು.

ತಜ್ಞರ ವರದಿ: ಶಾಲಾ-ಕಾಲೇಜುಗಳನ್ನ ಪ್ರಾರಂಭಿಸುತ್ತಾ ಕೇಂದ್ರ ಸರ್ಕಾರ...?

ಶಾಲಾ ಕಾಲೇಜುಗಳು 21 ರಿಂದ ಓಪನ್ ಆಗಲಿದ್ದು, ಈ ಬಗ್ಗೆ ಬಗ್ಗೆ ರಾಜ್ಯ ಸರ್ಕಾರ ಅಧಿಕೃತವಾಗಿ ಮಾರ್ಗ ಸೂಚಿ ಬಿಡುಗಡೆ ಮಾಡಲಿದೆ. ಮಾರ್ಗ ಸೂಚಿ ಬಂದ ನಂತರ ಹಂತ ಹಂತವಾಗಿ ಶಾಲಾ ಕಾಲೇಜುಗಳನ್ನ ಪ್ರಾರಂಭಿಸುವುದಾಗಿ ಮಾಹಿತಿ ನೀಡಿದರು.

Follow Us:
Download App:
  • android
  • ios