Asianet Suvarna News Asianet Suvarna News

ಎಸ್‌ಎಸ್‌ಎಲ್‌ಸಿ, ಪಿಯುಸಿ ಪರೀಕ್ಷೆ ಸಂಭವನೀಯ ವೇಳಪಟ್ಟಿ ಬಿಡುಗಡೆ: ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್‌ ಕೊಟ್ಟ ಸರ್ಕಾರ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಪೂರಕ ಪರೀಕ್ಷೆ ರದ್ದುಗೊಳಿಸಿರುವ ಶಿಕ್ಷಣ ಇಲಾಖೆಯು ವಾರ್ಷಿಕ 3 ಬಾರಿ ನಡೆಸುವ ಸಂಭಾವ್ಯ ಪರೀಕ್ಷಾ ವೇಳಾಪಟ್ಟಿ ಪ್ರಕಟಿಸಿದೆ.

Karnataka SSLC and PUC probable exam time table released Govt gives good news to students sat
Author
First Published Sep 5, 2023, 1:19 PM IST

ಬೆಂಗಳೂರು (ಸೆ.05): ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆಗಳಲ್ಲಿ ಅಮೂಲಾಗ್ರ ಬದಲಾವಣೆ ಮಾಡಿರುವ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ವಾರ್ಷಿಕ 3 ಪರೀಕ್ಷೆಗಳನ್ನು ನಡೆಸಲು ತೀರ್ಮಾನಿಸಿದೆ. ಪ್ರಸ್ತುತ ಸಂಭವನೀಯ ಪರೀಕ್ಷಾ ವೇಳಾಪಟ್ಟಿಯನ್ನು ಪ್ರಕಟ ಮಾಡಿದ್ದು, ಮೂರು ಪರೀಕ್ಷೆಗಳಲ್ಲಿ ವಿಷಯವಾಗಿ ಅತಿಹೆಚ್ಚು ಗಳಿಸಿದ ಅಂಕಗಳನ್ನು ಆಯ್ಕೆ ಮಾಡಿಕೊಳ್ಳಲು ಅವಕಾಶವನ್ನು ನೀಡಲಾಗಿದೆ. ಈ ಮೂಲಕ ವಿದ್ಯಾರ್ಥಿಗಳಿಗೆ ಸರ್ಕಾರ ಗುಡ್‌ ನ್ಯೂಸ್‌ ನೀಡಿದೆ.

ಪ್ರಸ್ತುತ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಯು ಗಳಿಸಿದ ಅಂಕಗಳನ್ನು ತಿರಸ್ಕರಿಸಲು ಅವಕಾಶವಿದೆ. ಆದರೆ, ವಿದ್ಯಾರ್ಥಿ ಹಿಂದಿನ ಪರೀಕ್ಷೆಯಲ್ಲಿ ಪಡೆದ ಅಂಕಗಳು ಹೆಚ್ಚಾಗಿದ್ದರೂ, ಪೂರಕ ಪರೀಕ್ಷೆಯಲ್ಲಿ ಪಡೆದ ಅಂಕಗಳನ್ನೇ ವಿದ್ಯಾರ್ಥಿಯ ನೈಜ ಅಂಕಗಳೆಂದು ಪರಿಗಣಿಸಲಾಗುತ್ತಿದೆ. ಹೀಗಾಗಿ, ಎರಡು ಪರೀಕ್ಷೆಗಳಲ್ಲಿ ತನ್ನ ಅತ್ಯುತ್ತಮ ಅಂಕವನ್ನು ಉಳಿಸಿಕೊಳ್ಳಲು ವಿದ್ಯಾರ್ಥಿಗೆ ಆಯ್ಕೆಯಿರುವುದಿಲ್ಲ. ಹೀಗಾಗಿ, ಪ್ರಸ್ತುತ 2023-24ನೇ ಶೈಕ್ಷಣಿಕ ಸಾಲಿನಿಂದ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ವಾರ್ಷಿಕ 3 ಪರೀಕ್ಷೆಗಳನ್ನು ನಡೆಸಲು ತೀರ್ಮಾನಿಸಲಾಗಿದೆ.

ಎಸ್‌ಎಸ್‌ಎಲ್‌ಸಿ, ಪಿಯುಸಿ ಸಪ್ಲಿಮೆಂಟರಿ ಪರೀಕ್ಷೆ ರದ್ದು: ವಾರ್ಷಿಕ 3 ಹಂತದಲ್ಲಿ ಪರೀಕ್ಷೆ ಆಯೋಜನೆ

ಹೊಸ ಮಾದರಿಯ 'ವಾರ್ಷಿಕ 1,2 ಮತ್ತು 3' ಪರೀಕ್ಷೆಗಳಲ್ಲಿ ವಿದ್ಯಾರ್ಥಿಗಳು ಗಳಿಸುವ ಅಂಕಗಳ ಆಧಾರದಲ್ಲಿ ಉತ್ತೀರ್ಣ, ಅನುತ್ತೀರ್ಣ ನಿರ್ಧಾರ ಮಾಡಲಾಗುತ್ತದೆ. ಒಂದು ವೇಳೆ ಉತ್ತೀರ್ಣರಾದ ವಿದ್ಯಾರ್ಥಿಗಳು ಯಾವುದಾದರೂ ವಿಷಯದಲ್ಲಿ ಕಡಿಮೆ ಅಂಕ ಗಳಿಸಿದಾಗ ಮತ್ತೊಮ್ಮೆ ಪರೀಕ್ಷೆಯನ್ನು ಬರೆಯಬಹುದು. ಆಗ ಯಾವ ಪರೀಕ್ಷೆಗಳಲ್ಲಿ ಹೆಚ್ಚಿನ ಅಂಕಗಳನ್ನು ಪಡೆದಿರುತ್ತಾರೋ, ಆ ಹೆಚ್ಚಿನ ಅಂಕಗಳನ್ನು ಆಯ್ಕೆ ಮಾಡಿಕೊಳ್ಳುವುದಕ್ಕೆ ವಿದ್ಯಾರ್ಥಿಗೆ ಸಂಪೂರ್ಣ ಸ್ವಾತಂತ್ರ್ಯ ನೀಡಲಾಗುತ್ತದೆ. ಈ ಮೂಲಕ ವಾರ್ಷಿಕ ಮೂರು ಪರೀಕ್ಷೆಗಳನ್ನು ಬರೆದರೂ, ಅನುತ್ತೀರ್ಣದ ಭಯವಿಲ್ಲದೇ ಹೆಚ್ಚಿನ ಅಂಕಗಳನ್ನು ಪಡೆಯಲು ಅವಕಾಶ ನೀಡಲಾಗಿದೆ.

SSLC  ಸಂಭವನೀಯ ಪರೀಕ್ಷಾ ವೇಳಾಪಟ್ಟಿ
ಪರೀಕ್ಷೆಗಳು      ದಿನಾಂಕ               ಫಲಿತಾಂಶ 
ಪರೀಕ್ಷೆ 1:         ಮಾ​ 1- ಮಾ.25         ಏ. 22
ಪರೀಕ್ಷೆ 2          ಮೇ15-ಜೂ.5           ಜೂನ್​ 21
ಪರೀಕ್ಷೆ 3           ಜು.12 -ಜು.30          ಆಗಸ್ಟ್​16

ಪಿಯುಸಿ ಸಂಭವನೀಯ  ಪರೀಕ್ಷಾ ವೇಳಾಪಟ್ಟಿ
ಪರೀಕ್ಷೆ 1        ಮಾ​ 30- ಏ15          ಮೇ 8
ಪರೀಕ್ಷೆ 2        ಜೂ.​ 12-ಜೂ.19      ಜೂನ್​ 29
ಪರೀಕ್ಷೆ 3        ಜು.29 -ಆ.5             ಆಗಸ್ಟ್​ 19

ಮಳೆ ಬಾರದಿದ್ರೂ ಲೋಡ್‌ ಶೆಡ್ಡಿಂಗ್‌ ಮಾಡೊಲ್ಲ: ಪ್ರತಿನಿತ್ಯ 40 ಕೋಟಿ ರೂ. ವಿದ್ಯುತ್‌ ಖರೀದಿ ಮಾಡಲಾಗ್ತಿದೆ

ವಾರ್ಷಿಕ 3 ಪರೀಕ್ಷೆಗಳನ್ನು ನಡೆಸಲು ಸರ್ಕಾರ ಕೊಟ್ಟ ಸ್ಪಷ್ಟನೆ ಹೀಗಿದೆ ನೋಡಿ
1. ಈ ಸುಧಾರಣಾ ವ್ಯವಸ್ಥೆಯಲ್ಲಿ ವಿದ್ಯಾರ್ಥಿಗಳಿಗೆ ಸ್ಪಷ್ಟ ಮಾರ್ಗಸೂಚಿಯನ್ನು ಸುತ್ತೋಲೆಯ ಮೂಲಕ ಮಂಡಲಿಯಿಂದ ನೀಡಲಾಗುವುದು. 
2 ಈ ಮೂರು ಪರೀಕ್ಷೆಗಳಲ್ಲಿ, ವಿಷಯ ಮತ್ತು ಕಠಿಣತೆಯ ಮಟ್ಟದಲ್ಲಿ ಏಕರೂಪತೆಯನ್ನು ಕಾಯ್ದುಕೊಳ್ಳಲಾಗುವುದು.
3. ಈ ಮೂರು ಪ್ರಯತ್ನಗಳಲ್ಲಿ ಗಳಿಸಿದ ಅಂಕಗಳಲ್ಲಿ, ವಿಷಯವಾರು ಅತ್ಯುತ್ತಮವಾದುದನ್ನು ಆಯ್ಕೆಮಾಡಿಕೊಳ್ಳಲು ಅವಕಾಶ ನೀಡಲಾಗುವುದು.
4. ಮುಂದಿನ ಶೈಕ್ಷಣಿಕ ವರ್ಷದಲ್ಲಿ ತಡವಾಗಿ ದಾಖಲಾಗುವ ಪ್ರಥಮ ಪಿ.ಯು.ಸಿ. ಅಥವಾ ಪದವಿ ವಿದ್ಯಾರ್ಥಿಗಳಿಗೆ ಸೇತುಬಂಧ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುವುದು.

Follow Us:
Download App:
  • android
  • ios