ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಕಾಪಿ ಹೊಡೆಸಿದ ಆರೋಪ; ನಾಲ್ವರು ಶಿಕ್ಷಕರು ಅಮಾನತು
ಎಸ್‌ಎಸ್‌ಎಲ್‌ಸಿ ವಿಜ್ಞಾನ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ನಕಲು (ಕಾಪಿ ಹೊಡೆಯುವುದು) ಮಾಡುತ್ತಿದ್ದರೂ ಅದನ್ನು ತಡೆಯದೇ ಸಹಕಾರ ನೀಡಿದ ನಾಲ್ವರು ಶಿಕ್ಷಕರನ್ನು ಚಿತ್ರದುರ್ಗ ಡಿಡಿಪಿಐ ಅಮಾನತುಗೊಳಿಸಿ ಆದೇಶಿಸಿದ್ದಾರೆ.
ಚಿತ್ರದುರ್ಗ (ಮಾ.30): ರಾಜ್ಯಾದ್ಯಂತ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ನಡೆಯುತ್ತಿದ್ದು, ಎಲ್ಲ ಪರೀಕ್ಷಾ ಕೇಂದ್ರಗಳು ಹಾಗೂ ಪರೀಕ್ಷಾ ಕೊಠಡಿಯೊಳಗೆ ಸಿಸಿಟಿವಿ ಕ್ಯಾಮರಾಗಳನ್ನು ಅಳವಡಿಕೆ ಮಾಡಲಾಗಿದೆ. ಆದರೆ, ಚಿತ್ರದುರ್ಗ ಜಿಲ್ಲೆಯ ವಿವಿಧೆಡೆ ಪರೀಕ್ಷಾ ಕೊಠಡಿಗಳಲ್ಲಿ ವಿದ್ಯಾರ್ಥಿಗಳು ಕಾಪಿ ಹೊಡೆಯುತ್ತಿದ್ದರೂ ಅದನ್ನು ತಡೆಯದೇ ಸಹಕರಿಸಿದ್ದಕ್ಕಾಗಿ ನಾಲ್ವರು ಶಿಕ್ಷಕರನ್ನು ಜಿಲ್ಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.
ಎಲ್ಲ ಶಿಕ್ಷಕರನ್ನು ಕರ್ತವ್ಯ ಲೋಪದ ಆಧಾರದಲ್ಲಿ ಅಮಾನತ್ತು ಮಾಡಲಾಗಿದೆ. ಚಿತ್ರದುರ್ಗ ಜಿಲ್ಲಾ ಶಿಕ್ಷಣ ಉಪ ನಿರ್ದೇಶಕರು (ಡಿಡಿಪಿಐ) ರವಿಶಂಕರರೆಡ್ಡಿ ಅವರು ಅಮಾನತ್ತು ಆದೇಶ ಹೊರಡಿಸಿದ್ದಾರೆ. ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆಯ ಮಂಜರಿ ಹಿರಿಯ ಪ್ರಾಥಮಿಕ ಶಾಲೆ ಶಿಕ್ಷಕ ರೇವಣ್ಣ, ಚಳ್ಳಕೆರೆ ತಾಲೂಕಿನ ಗೋಸಿಕೆರೆ ಗ್ರಾಮದ ಪ್ರೌಢ ಶಾಲೆ ಶಿಕ್ಷಕ ರಾಘವೇಂದ್ರ, ಪಿ.ಓಬನಹಳ್ಳಿ ಹಿರಿಯ ಪ್ರಾಥಮಿಕ ಶಾಲೆಯ ಚಂದ್ರಶೇಖರ್ ಹಾಗೂ ಕೊರ್ಲಕುಂಟೆ ಹಿರಿಯ ಪ್ರಾಥಮಿಕ ಶಾಲಾ ಶಿಕ್ಷಕ ಪ್ರಕಾಶ್ ಅಮಾನತ್ತು ಆದವರಾಗಿದ್ದಾರೆ.
ಎಸ್‌ಎಸ್‌ಎಲ್‌ಸಿ ಪರೀಕ್ಷಾ ಕೊಠಡಿಯಲ್ಲಿ ಕುಸಿದು ಬಿದ್ದ ವಿದ್ಯಾರ್ಥಿ; ಆಸ್ಪತ್ರೆಗೆ ಸಾಗಿಸುವ ಮುನ್ನವೇ ಸಾವು
ಎಸ್‌ಎಸಲ್‌ಎಲ್‌ಸಿ ಪರೀಕ್ಷಾ ಕೊಠಡಿ ಮೇಲ್ವಿಚಾರಕರಾಗಿ ಕರ್ತವ್ಯಕ್ಕೆ ಹಾಜರಾಗಿದ್ದ ಶಿಕ್ಷಕರು ತಮ್ಮ ಕರ್ತವ್ಯವನ್ನು ಸರಿಯಾಗಿ ನಿರ್ವಹಿಸದೇ ಲೋಪ ಎಸಗಿದ್ದಾರೆ. ವಿದ್ಯಾರ್ಥಿಗಳು ನಕಲು ಮಾಡುವುದನ್ನು ತಡೆಯದೆ ಎಲ್ಲ ವಿದ್ಯಾರ್ಥಿಗಳಿಗೆ ಸಹಕಾರ ನೀಡಿದ್ದಾರೆ ಎಂದು ತಿಳಿದುಬಂದಿತ್ತು. ಕರ್ತವ್ಯ ಲೋಪ, ಬೇಜವಾಬ್ದಾರಿ, ನಿರ್ಲಕ್ಷತನ ಹಿನ್ನೆಲೆ ಅಮಾನತ್ತು ಮಾಡಿ ಆದೇಶ ಹೊರಡಿಸಲಾಗಿದೆ.
ಎಸ್ಸೆಸ್ಸೆಲ್ಸಿ: ಒಬ್ಬ ಡಿಬಾರ್, ಇಬ್ಬರು ಶಿಕ್ಷಕರು ಸಸ್ಪೆಂಡ್..!
ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ನಕಲು ಮಾಡುವುದನ್ನು ಮಾಡುವುದನ್ನು ತಡೆಯುವ ನಿಟ್ಟಿನಲ್ಲಿ ಶಿಕ್ಷಣ ಇಲಾಖೆಯಿಂದ ಕಠಿಣ ಕ್ರಮವನ್ನು ಕೈಗೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಹಾಗೂ ಎಲ್ಲ ಪರೀಕ್ಷಾ ಕೊಠಡಿಗಳಲ್ಲಿ ಸಿಸಿ ಕ್ಯಾಮರಾಗಳನ್ನು ಅಳವಡಿಕೆ ಮಾಡಿಸಲಾಗಿದೆ. ಇನ್ನು ಎಲ್ಲ ಪರೀಕ್ಷಾ ಕೊಠಡಿಗಳಲ್ಲಿ ನಡೆಯುವ ದೃಶ್ಯವನ್ನು ಮುಖ್ಯ ಶಿಕ್ಷಕರು ಅಥವಾ ಪ್ರಿನ್ಸಿಪಾಲರ ಕೊಠಡಿಯಲ್ಲಿ ಕುಳಿತು ವೀಕ್ಷಣೆ ಮಾಡುವುದಕ್ಕೆ ವ್ಯವಸ್ಥೆ ಮಾಡಿರಲಾಗುತ್ತದೆ. ಹೀಗೆ, ಪರೀಕ್ಷಾ ಕೊಠಡಿಯಲ್ಲಿ ನಕಲು ನಡೆಯುತ್ತಿದ್ದರೂ ಸುಮ್ಮನಿದ್ದ ಶಿಕ್ಷಕರ ವಿರುದ್ಧ ಕ್ರಮ ಕೈಗೊಳ್ಳಾಗಿದೆ ಎಂದು ಡಿಡಿಪಿಐ ರವಿ ಶಂಕರ ರೆಡ್ಡಿ ಅವರು ತಿಳಿಸಿದ್ದಾರೆ.