Asianet Suvarna News Asianet Suvarna News

SSLC ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟ

ಕರ್ನಾಟಕದ SSLC ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟವಾಗಿದ್ದು, ಪರೀಕ್ಷಾ ಅಂತಿಮ ವೇಳಾಪಟ್ಟಿ ವಿವರ ಈ ಕೆಳಗಿನಂತಿದೆ ನೋಡಿ.

Karnataka sslc exam time table announced By Minister Suresh Kumar rbj
Author
Bengaluru, First Published Mar 1, 2021, 7:43 PM IST

ಬೆಂಗಳೂರು, (ಮಾ.01): ಕರ್ನಾಟಕದ SSLC ಪರೀಕ್ಷೆಯ ಅಂತಿಮ ವೇಳಾಪಟ್ಟಿ ಇಂದು (ಸೋಮವಾರ) ಪ್ರಕಟವಾಗಿದೆ. ಜೂ.21 ರಿಂದ ಜುಲೈ 5 ರವರೆಗೆ ಎಸ್​ಎಸ್​ಎಲ್​ಸಿ ಪರೀಕ್ಷೆ ನಡೆಯಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ. 

'9, 10, 11ನೇ ತರಗತಿ ಪರೀಕ್ಷೆ ಕ್ಯಾನ್ಸಲ್, ಎಲ್ಲಾ ವಿದ್ಯಾರ್ಥಿಗಳು ಪಾಸ್'

ಈ ಮೊದಲು, ತಾತ್ಕಾಲಿಕ ವೇಳಾಪಟ್ಟಿ ಪ್ರಕಟಿಸಿ ಆಕ್ಷೇಪಣೆಗಳನ್ನು ಆಹ್ವಾನಿಸಲಾಗಿದ್ದು, ಸಲಹೆ, ಮನವಿಗಳನ್ನು ಪರಿಗಣಿಸಿ ಅಂತಿಮ ವೇಳಾಪಟ್ಟಿ ಪ್ರಕಟಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ. ಪರೀಕ್ಷಾ ಅಂತಿಮ ವೇಳಾಪಟ್ಟಿ ವಿವರ ಈ ಕೆಳಗಿನಂತಿದೆ ನೋಡಿ.

ಪರೀಕ್ಷಾ ವೇಳಾಪಟ್ಟಿ
1. ಜೂನ್ 21: ಪ್ರಥಮ ಭಾಷೆಗಳಾದ ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್, ಸಂಸ್ಕೃತ ಪರೀಕ್ಷೆ
2. ಜೂನ್​ 24: ಗಣಿತ
3. ಜೂನ್​ 28: ವಿಜ್ಞಾನ ಪರೀಕ್ಷೆ
4. ಜೂ.30: ತೃತೀಯ ಭಾಷೆಗಳಾದ ಹಿಂದಿ, ಕನ್ನಡ, ಇಂಗ್ಲಿಷ್, ಅರೆಬಿಕ್, ಪರ್ಷಿಯನ್, ಉರ್ದು, ಸಂಸ್ಕೃತ, ಕೊಂಕಣಿ, ತುಳು
5. ಜುಲೈ 2: ದ್ವಿತೀಯ ಭಾಷೆ ಇಂಗ್ಲಿಷ್/ ಕನ್ನಡ
6. ಜುಲೈ 5: ಸಮಾಜ ವಿಜ್ಞಾನ

Follow Us:
Download App:
  • android
  • ios