Karnataka SSLC Result 2024 : ಮೇ.9ರಂದೇ 10ನೇ ತರಗತಿ ಫಲಿತಾಂಶ, ಬೆಳಗ್ಗೆ10.30ಕ್ಕೆ ಪ್ರಕಟ
ಎಂಟೂವರೆ ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಕಾಯುತ್ತಿರುವ ರಾಜ್ಯ ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ ಮೇ 9ರಂದು ಹೊರಬೀಳಲಿದೆ.
ಬೆಂಗಳೂರು (ಮೇ.8): ಎಂಟೂವರೆ ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಕಾಯುತ್ತಿರುವ ರಾಜ್ಯ ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ ಮೇ 9ರಂದು ಹೊರಬೀಳಲಿದೆ. ಫಲಿತಾಂಶ ಪ್ರಕಟಿಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ನಾಳೆ ಬೆಳಗ್ಗೆ 10.30ಕ್ಕೆ ಪತ್ರಿಕಾಗೋಷ್ಠಿ ಕರೆದಿದೆ. ಈ ಬಗ್ಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧ್ಯಕ್ಷೆ ಎನ್ ಮಂಜುಶ್ರೀ ಮಾಹಿತಿ ನೀಡಿದ್ದಾರೆ.
ಪರೀಕ್ಷೆ ಕಟ್ಟುನಿಟ್ಟು: ಈ ಬಾರಿ ಎಸ್ಸೆಸ್ಸೆಲ್ಸಿ ಫಲಿತಾಂಶ ಕುಸಿತ?
ಎಸ್ಸೆಸ್ಸೆಲ್ಸಿ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಪೂರ್ಣಗೊಂಡು, ವಿದ್ಯಾರ್ಥಿಗಳು ಪಡೆದಿರುವ ಅಂಕಗಳ ಗಣಕೀಕರಣ ಪ್ರಕ್ರಿಯೆ ಕೂಡ ಮುಕ್ತಾಯವಾಗಿದೆ. ಈ ಬಾರಿಯ ಎಸ್ಸೆಸ್ಸೆಲ್ಸಿ ಪರೀಕ್ಷೆಯು ಮಾ.25ರಿಂದ ಏ.6ರವರೆಗೆ 2750 ಕೇಂದ್ರಗಳಲ್ಲಿ ನಡೆದಿತ್ತು. ಸುಮಾರು 8.69 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು.
NEET ಪರೀಕ್ಷೆ ವೇಳೆ ಅಗತ್ಯ ವಿದ್ಯಾರ್ಥಿಗಳಿಗೆ ಡೈಪರ್ ಧರಿಸಲು, ಬದಲಿಸಲು ಕೋರ್ಟ್ ಅನುಮತಿ!
ಪರೀಕ್ಷೆ ಬರೆದ ಅಭ್ಯರ್ಥಿಗಳು http://karresults.nic.in ವೆಬ್ಸೈಟ್ನಲ್ಲಿ ಬೆಳಗ್ಗೆ 10:30ರ ನಂತರ ಫಲಿತಾಂಶವನ್ನು ವೀಕ್ಷಣೆ ಮಾಡಬಹುದಾಗಿದೆ. ಈ ಬಾರಿ ಎಸ್ ಎಸ್ ಎಲ್ಸಿ ಪರೀಕ್ಷೆಗೆ 8.69 ಲಕ್ಷ ವಿದ್ಯಾರ್ಥಿಗಳು ಹಾಜರಾಗಿದ್ದರು. ಇದರಲ್ಲಿ 4,41,910 ವಿದ್ಯಾರ್ಥಿ ಮತ್ತು 4,28,058 ವಿದ್ಯಾರ್ಥಿನಿಯರು ಆಗಿದ್ದಾರೆ.