karresults.nic.in SSLC Result 2022 ಪ್ರಕಟ, ಶೇ.85.63 ಫಲಿತಾಂಶ, ಬಾಲಕಿಯರೇ ಮೇಲು ಗೈ
ಬಹುನಿರೀಕ್ಷಿತ ಎಸ್ಎಸ್ಎಲ್ಸಿ ಪರೀಕ್ಷೆ 2022ರ ಫಲಿತಾಂಶ ಪ್ರಕಟವಾಗಿದ್ದು, ಸಂಪೂರ್ಣ ಮಾಹಿತಿ ಇಲ್ಲಿದೆ. ಫಲಿತಾಂಶ ತಿಳಿಯಲು https://karresults.nic.in/ ಗೆ ಭೇಟಿ ನೀಡಿ
ಬೆಂಗಳೂರು (ಮೇ.19): 2021-22ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದೆ. ಶೇಖಡವಾರು 85.63 ಫಲಿತಾಂಶ ಬಂದಿದೆ. ಇದು ಕಳೆದ 10 ವರ್ಷಗಳಲ್ಲಿ ದಾಖಲೆಯ ಫಲಿತಾಂಶವಾಗಿದೆ. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಬಿ.ಸಿ. ನಾಗೇಶ್ (Minister of Primary and SecondEducation BC Nagesh) ಫಲಿತಾಂಶ ಪ್ರಕಟಿಸಿದ್ದಾರೆ. ಕೊರೋನಾ ಆತಂಕ, ಹಿಜಾಬ್ ವಿವಾದದ ನಡುವೆ ಪರೀಕ್ಷೆಗೆ ಹಾಜರಾಗಿದ್ದ, 8,73,884 ವಿದ್ಯಾರ್ಥಿಗಳ ಪೈಕಿ 8,53,436 ಅಭ್ಯರ್ಥಿಗಳು ಪರೀಕ್ಷೆ ಬರೆದಿದ್ದರು. ಇದರಲ್ಲಿ 7,30,881 ಮಂದಿ ಉತ್ತೀರ್ಣರಾಗಿದ್ದಾರೆ. ಇದರಲ್ಲಿ 40,061 ಮಂದಿ ಗ್ರೇಸ್ ಮಾರ್ಕ್ ಮೂಲಕ ಪಾಸ್ ಆಗಿದ್ದಾರೆ.
ಒಟ್ಟು 4,08,523 ಬಾಲಕರು ಪರೀಕ್ಷೆಗೆ ಹಾಜರಾಗಿ 3,52,752 ಮಂದಿ ಪಾಸ್ ಆಗುವ ಮೂಲಕ ಬಾಲಕರು ಶೇ. 86.34 ಮತ್ತು ಒಟ್ಟು 3,98,683 ಬಾಲಕಿಯರು ಪರೀಕ್ಷೆಗೆ ಹಾಜರಾಗಿ 3,68,579 ಮಂದಿ ಪಾಸ್ ಆಗಿ ಶೇ.92.44 ಫಲಿತಾಂಶದ ಮೂಲಕ ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ.
ಒಟ್ಟು 145 ಮಂದಿ ಈ ಬಾರಿ 625ಕ್ಕೆ 625 ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ. 309 ವಿದ್ಯಾರ್ಥಿಗಳು 624 ಅಂಕ ಪಡೆಯುವ ಮೂಲಕ ಎರಡನೇ ಸ್ಥಾನದಲ್ಲಿದ್ದಾರೆ. 472 ವಿದ್ಯಾರ್ಥಿಗಳು 623 ಅಂಕ ಪಡೆಯುವ ಮೂಲಕ ಮೂರನೇ ಸ್ಥಾನ ಪಡೆದಿದ್ದಾರೆ. ರಾಜ್ಯದ 3,920 ಶಾಲೆಗಳಿಗೆ ಶೇ.100 ಫಲಿತಾಂಶ ಬಂದಿದೆ. ಸರಕಾರಿ ಶಾಲೆಗೆ ಶೇ.88 ಫಲಿತಾಂಶ, ಅನುದಾನಿತ ಶಾಲೆಯಲ್ಲಿ ಶೇ.87.84 ಫಲಿತಾಂಶ ಅನುದಾನ ರಹಿತ ಶಾಲೆ ಶೇ.92.29 ಫಲಿತಾಂಶ ಬಂದಿರುತ್ತದೆ.
ಈ ಬಾರಿಯೂ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಶೇ.91.32 ರ ಮೂಲಕ ಮೇಲುಗೈ ಸಾಧಿಸಿದ್ದಾರೆ. ನಗರದ ವಿದ್ಯಾರ್ಥಿಗಳಿಗೆ ಶೇ.86.64 ಫಲಿತಾಂಶ ಬಂದಿದೆ. ಮೇ 27 ರಿಂದ ಜೂನ್ 4 ಪೂರಕ ಪರೀಕ್ಷೆ ನಡೆಯಲಿದೆ ಎಂದು ಇದೇ ವೇಳೆ ಶಿಕ್ಷಣ ಸಚಿವರು ತಿಳಿಸಿದ್ದಾರೆ.
Out of Out ಅಂಕ ಪಡೆದ ಮಕ್ಕಳ ಸಂಖ್ಯೆ:Out of Out ಅಂಕ ಪಡೆದ ಮಕ್ಕಳ ಸಂಖ್ಯೆ:
* ಪ್ರಥಮ ಭಾಷೆ ಕನ್ನಡ- 125ಕ್ಕೆ 125 ಅಂಕ ಪಡೆದ ವಿದ್ಯಾರ್ಥಿಗಳು 19,125
* ದ್ವಿತೀಯ ಭಾಷೆ 100ಕ್ಕೆ 100 ಮಾರ್ಕ್ಸ್ ಅನ್ನು- 13,425 ವಿದ್ಯಾರ್ಥಿಗಳು ಪಡೆದುಕೊಂಡಿದ್ದಾರೆ
* ತೃತೀಯ ಭಾಷೆ100ಕ್ಕೆ 100 ಅಂಕ ಪಡೆದವರು 43,126 ವಿದ್ಯಾರ್ಥಿಗಳು
* ಗಣಿತದಲ್ಲಿ 100ಕ್ಕೆ ನೂರು ಅಂಕವನ್ನು 13,683 ವಿದ್ಯಾರ್ಥಿಗಳು ಪಡೆದಿದ್ದಾರೆ
* ವಿಜ್ಞಾನ- 100ಕ್ಕೆ 100 ಅಂಕ ಪಡೆದ ವಿದ್ಯಾರ್ಥಿಗಳ ಸಂಖ್ಯೆ 6,592
* ಸಮಾಜ ವಿಜ್ಞಾನ100ಕ್ಕೆ 100 ಅಂಕ ಪಡೆದ ವಿದ್ಯಾರ್ಥಿಗಳ ಸಂಖ್ಯೆ 50,782
ಫಲಿತಾಂಶ ನೋಡಲು ಅಭ್ಯರ್ಥಿಗಳು https://karresults.nic.in/ ಗೆ ಭೇಟಿ ನೀಡಿ ಮೊದಲಿಗೆ ತಮ್ಮ ಪರೀಕ್ಷಾ ರಿಜಿಸ್ಟರ್ ನಂಬರ್ ಅನ್ನು ದಾಖಲಿಸಿ. ತದ ನಂತರ ಹಾಲ್ ಟಿಕೆಟ್ ನಲ್ಲಿ ನಮೂದಿಸಿರುವ ಹುಟ್ಟಿದ ದಿನಾಂಕ, ತಿಂಗಳು ಮತ್ತು ವರ್ಷವನ್ನು ನಮೂದಿಸಿ ಬಳಿಕ ಸಬ್‌ಮಿಟ್ ಬಟನ್ ಒತ್ತಿ. ಕೂಡಲೇ ನಿಮ್ಮ ಅಂಕಗಳ ಪಟ್ಟಿ ವಿಷಯಾವಾರು ಕಾಣಿಸಿಕೊಳ್ಳುತ್ತದೆ. ಮುಂದಿನ ದಾಖಲಾತಿಗೆ ಇದನ್ನು ಡೌನ್ ಲೋಡ್ ಮಾಡಿ ಇಟ್ಟುಕೊಳ್ಳಿ.
SSLC ಫಲಿತಾಂಶಕ್ಕೆ ಚೆಕ್ ಮಾಡುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ
ಮಾರ್ಚ್ 28 ರಿಂದ ಏಪ್ರಿಲ್ 11 ರವರಗೆ ನಡೆದಿದ್ದ ಪರೀಕ್ಷೆ: ಮಾರ್ಚ್ 28 ರಿಂದ ಏಪ್ರಿಲ್ 11 ರವರಗೆ 2022 ನೇ ಸಾಲಿನ ಎಸ್‌ಎಸ್‌ಎಲ್ಸಿ ವಾರ್ಷಿಕ ಪರೀಕ್ಷೆ ನಡೆದಿತ್ತು. ಈ ಬಾರಿ ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಮುಖ್ಯ ಪರೀಕ್ಷೆಗೆ 15,387 ಶಾಲೆಗಳಿಂದ 8,73,884 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. ಅದರಲ್ಲಿ 4,52,732 ವಿದ್ಯಾರ್ಥಿಗಳು, 4,21,110 ವಿದ್ಯಾರ್ಥಿನಿಯರು ಮತ್ತು 4 ತೃತೀಯ ಲಿಂಗಿ ವಿದ್ಯಾರ್ಥಿಗಳು. ಅಲ್ಲದೆ ವಿಭಿನ್ನ ಸಾಮರ್ಥ್ಯವುಳ್ಳ 5,307 ವಿದ್ಯಾರ್ಥಿಗಳು ಹೆಸರು ನೋಂದಾಯಿಸಿದ್ದರು. ಅದರಲ್ಲಿ ಒಟ್ಟು 8,53,436 ಅಭ್ಯರ್ಥಿಗಳು ಪರೀಕ್ಷೆ ಬರೆದಿದ್ದರು.
ಎಸ್‌ಎಸ್‌ಎಲ್‌ಸಿ ಫಲಿತಾಂಶ ಬಗ್ಗೆ ಒತ್ತಡವೇ: 08046110007 ಸಂಖ್ಯೆಗೆ ಕರೆ ಮಾಡಿ
2021ರಲ್ಲಿ ಶೇ. 99.9 ಫಲಿತಾಂಶ ಬಂದಿತ್ತು: ಕಳೆದ ವರ್ಷ (2021ರಲ್ಲಿ) ನಡೆದ ಎಸ್ಎಸ್ಎಲ್ಸಿ ಪರೀಕ್ಷೆ ರಾಜ್ಯದ ಇತಿಹಾಸದಲ್ಲಿಯೇ ವಿನೂತನವಾಗಿ ನಡೆದಿತ್ತು. ಕೋವಿಡ್ ಸವಾಲಿನ ಸಮಯದಲ್ಲಿ ಸರಳ ಮಾದರಿಯ ಪರೀಕ್ಷೆ ನಡೆದಿತ್ತು. ಪರೀಕ್ಷೆ ಬರೆದ ಎಲ್ಲರನ್ನೂ ಪಾಸ್ ಮಾಡುವುದಾಗಿ ಮೊದಲೇ ಸರಕಾರ ತೀರ್ಮಾನ ಕೂಡ ಮಾಡಿತ್ತು. ಅದರಂತೆ, ಒಬ್ಬ ವಿದ್ಯಾರ್ಥಿ ಹೊರತು ಪಡಿಸಿ ಎಲ್ಲರನ್ನು ಪಾಸ್ ಮಾಡಲಾಗಿತ್ತು. ಶೇ. 99.9 ಫಲಿತಾಂಶ ಕೂಡ ಬಂದಿತ್ತು. ತಾನು ಪರೀಕ್ಷೆ ಬರೆಯುವ ಬದಲು ಬೇರೆಯುವರು ಪರೀಕ್ಷೆ ಬರೆದ ಕಾರಣ ಒಬ್ಬ ವಿದ್ಯಾರ್ಥಿಯನ್ನು ಫೇಲು ಮಾಡಲಾಗಿತ್ತು.