ಶಿಕ್ಷಕರ ವರ್ಗ ಪರಿಷ್ಕೃತ ವೇಳಾಪಟ್ಟಿ ಪ್ರಕಟ, ಜ.16ರ ವರೆಗೆ ಹೆಚ್ಚುವರಿ ಶಿಕ್ಷಕರ ದಾಖಲೆಗಳ ಪರಿಶೀಲನೆ
ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಯ ಪರಿಷ್ಕೃತ ವೇಳಾಪಟ್ಟಿಯನ್ನು ಶಿಕ್ಷಣ ಇಲಾಖೆ ಪ್ರಕಟಿಸಿದ್ದು, ಜ.12ರಿಂದ 16ರ ವರೆಗೆ ಹೆಚ್ಚುವರಿ ಶಿಕ್ಷಕರು ಸಲ್ಲಿಸಿರುವ ಆದ್ಯತೆಯಲ್ಲಿನ ದಾಖಲೆಗಳ ಪರಿಶೀಲನೆ ನಡೆಯಲಿದೆ. ಕೌನ್ಸೆಲಿಂಗ್‌ಗೆ ಅರ್ಹರಾಗಿರುವ ಶಿಕ್ಷಕರ ಜ್ಯೇಷ್ಠತಾ ಪಟ್ಟಿಯನ್ನು ಜ.23ರಂದು ಪ್ರಕಟಿಸಲಾಗುತ್ತದೆ.
ಬೆಂಗಳೂರು (ಜ.12): ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಯ ಪರಿಷ್ಕೃತ ವೇಳಾಪಟ್ಟಿಯನ್ನು ಶಿಕ್ಷಣ ಇಲಾಖೆ ಪ್ರಕಟಿಸಿದ್ದು, ಜ.12ರಿಂದ 16ರ ವರೆಗೆ ಹೆಚ್ಚುವರಿ ಶಿಕ್ಷಕರು ಸಲ್ಲಿಸಿರುವ ಆದ್ಯತೆಯಲ್ಲಿನ ದಾಖಲೆಗಳ ಪರಿಶೀಲನೆ ನಡೆಯಲಿದೆ. ಡಿ.28ರಂದು ಪ್ರಕಟಿಸಿದ್ದ ಹೆಚ್ಚುವರಿ ಶಿಕ್ಷಕರ ಕರಡು ಪಟ್ಟಿಯಿಂದ ಸಮಸ್ಯೆಗೆ ಒಳಗಾದ ಶಿಕ್ಷಕರು ಜ.16 ಮತ್ತು 17ರಂದು ಅಧಿಕಾರಿಗಳನ್ನು ಸಂಪರ್ಕಿಸಿ ಸಮಸ್ಯೆ ಬಗೆಹರಿಸಿಕೊಳ್ಳಬಹುದು. ಮರುಹಂಚಿಕೆ ಕೌನ್ಸೆಲಿಂಗ್‌ಗೆ ಅರ್ಹರಾಗಿರುವ ಶಿಕ್ಷಕರ ಜ್ಯೇಷ್ಠತಾ ಪಟ್ಟಿಯನ್ನು ಜ.23ರಂದು ಪ್ರಕಟಿಸಲಾಗುತ್ತದೆ.
ಜ.24ರಂದು ಬ್ಲಾಕ್ ಹಂತದಲ್ಲಿ ಸಮರ್ಪಕ ಮರುಹೊಂದಾಣಿಕೆ ಕೌನ್ಸೆಲಿಂಗ್ ನಡೆಯಲಿದೆ. ಜ.30ರಂದು ಜಿಲ್ಲಾ ಹಂತದಲ್ಲಿ ಮರು ಹೊಂದಾಣಿಕೆ ಪ್ರಕ್ರಿಯೆ ನಡೆಯಲಿದೆ. ಫೆ.9ರಿಂದ 14ರ ವರೆಗೆ ಜಿಲ್ಲಾ ಹಂತದ ವರ್ಗಾವಣೆ ಕೌನ್ಸೆಲಿಂಗ್, ಫೆ.16ರಂದು ಪರಸ್ಪರ ವರ್ಗಾವಣೆ ಕೌನ್ಸೆಲಿಂಗ್, ಫೆ.17ರಂದು ತಾಂತ್ರಿಕ ಸಹಾಯಕರ ಗಣಕೀಕೃತ ಕೌನ್ಸೆಲಿಂಗ್ ನಡೆಯಲಿದೆ.
ಫೆ.17ರಿಂದ ವಿಭಾಗೀಯ ಹಂತದ ಪ್ರಕ್ರಿಯೆಗಳು, ಮಾ.1ರಿಂದ ಅಂತರ್ ವಿಭಾಗೀಯ ಹಂತ ನಡೆಯಲಿದೆ. ಮಾ.10ರಂದು ಅಂತಿಮ ಜ್ಯೇಷ್ಠತಾ ಪಟ್ಟಿಯಂತೆ ಪರಸ್ಪರ ವರ್ಗಾವಣೆಗಳ ಗಣಕೀಕೃತ ಕೌನ್ಸೆಲಿಂಗ್ ಮೂಲಕ ಸ್ಥಳ ನಿಯುಕ್ತಿ ಮಾಡಲಾಗುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ನಿರ್ದೇಶಕರು ತಿಳಿಸಿದ್ದಾರೆ.
ಶಿವಮೊಗ್ಗ: ಕುವೆಂಪು ವಿವಿ ಕುಲಸಚಿವೆ ವಿಜಯನಗರ ಅಪರ ಜಿಲ್ಲಾಧಿಕಾರಿಯಾಗಿ ವರ್ಗಾವಣೆ
ವಿವಿಧ ವಸತಿ ಶಾಲೆಗಳ 6ನೇ ತರಗತಿಯ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ:
ಕೊಡಗು ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಪರಿಶಿಷ್ಟವರ್ಗಗಳ ಕಲ್ಯಾಣ ಇಲಾಖೆಗಳ ವತಿಯಿಂದ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ (ಕೈ ್ರಸ್) ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕೊಡಗು ಜಿಲ್ಲೆಯ ಮೊರಾರ್ಜಿ ದೇಸಾಯಿ, ಏಕಲವ್ಯ, ಡಾ.ಬಿ.ಆರ್. ಅಂಬೇಡ್ಕರ್, ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಗಳಲ್ಲಿ 2023-24ನೇ ಸಾಲಿಗೆ 6ನೇ ತರಗತಿ ಸೇರ್ಪಡೆಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು(ಕೆಇಎ) ಪ್ರವೇಶ ಪರೀಕ್ಷೆ ನಡೆಸಲಿದೆ. ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ 5ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಸಿಎ ಪರೀಕ್ಷೆ: ಮಂಗಳೂರಿನ ರಮ್ಯಶ್ರೀ ದೇಶಕ್ಕೇ ನಂ.2..!
ಅರ್ಜಿಯನ್ನು ಸಮೀಪದ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವಸತಿ ಶಾಲೆಯಲ್ಲಿಯೇ ಆನ್‌ಲೈನ್ ಮೂಲಕ ಸಲ್ಲಿಸಬೇಕು. ಅಭ್ಯರ್ಥಿಯು ತನ್ನ ಸ್ವಂತ ಜಿಲ್ಲೆಯ ವಸತಿ ಶಾಲೆಗಳಿಗೆ ಮಾತ್ರ ಅರ್ಜಿ ಸಲ್ಲಿಸಲು ಅರ್ಹರಿರುತ್ತಾರೆ. ವಿವರದಲ್ಲಿ ಯಾವುದೇ ನ್ಯೂನ್ಯತೆಯನ್ನು ನೇರವಾಗಿ ಮಾರ್ಪಾಡು ಮಾಡಲು ಅರ್ಜಿ ಹಾಕುವ ಸ್ಥಳದಲ್ಲಿ ಅವಕಾಶವಿರುವುದಿಲ್ಲ. (ಆದ್ದರಿಂದ ಪ್ರಸ್ತುತ ಸಾಲಿನಲ್ಲಿ ವ್ಯಾಸಂಗ ಮಾಡುತ್ತಿರುವ ಪ್ರಾಥಮಿಕ ಶಾಲೆಯಲ್ಲಿ ಸರಿಪಡಿಸಿದ ನಂತರ ಅದನ್ನು ಪರಿಗಣಿಸಲಾಗುವುದು.) ಹೆಚ್ಚಿನ ಮಾಹಿತಿಗೆ ಹತ್ತಿರದ ವಸತಿ ಶಾಲೆಗಳನ್ನು ಸಂಪರ್ಕಿಸಬಹುದು. ಅರ್ಜಿ ಸಲ್ಲಿಸಲು ಜನವರಿ 22 ಕೊನೆ ದಿನವಾಗಿದೆ. 2023ರ ಮಾಚ್‌ರ್ 12ರಂದು ಪರೀಕ್ಷೆ ನಡೆಯಲಿದೆ ಎಂದು ವಸತಿ ಶಾಲೆಗಳ ಜಿಲ್ಲಾ ಸಮನ್ವಯ ಅಧಿಕಾರಿಗಳು ಲೋಕೇಶ್ (9611307646) ಅವರು ತಿಳಿಸಿದ್ದಾರೆ.