Dharwad: ಶಿಕ್ಷಕರ ನೇಮಕಾತಿ ಪರೀಕ್ಷೆ: ಜಿಲ್ಲೆಯಲ್ಲಿ 9 ಪರೀಕ್ಷಾ ಕೇಂದ್ರಗಳು ಅಕ್ರಮ ತಡೆಗೆ ಬಿಗಿ ಕ್ರಮ!

ಶಿಕ್ಷಕರ ನೇಮಕಾತಿ ಸ್ಪರ್ಧಾತ್ಮಕ ಪರೀಕ್ಷೆ ವೇಳೆ ಯಾವುದೇ ರೀತಿಯ ಅಕ್ರಮವನ್ನು ತಡೆಗಟ್ಟುವ ಉದ್ದೇಶದಿಂದ ಪರೀಕ್ಷಾರ್ಥಿಗಳ ತಪಾಸಣೆಗಾಗಿ ಎರಡು ಹಂತದಲ್ಲಿ ವ್ಯವಸ್ಥೆ ಮಾಡಬೇಕು. ಪ್ರತಿಯೊಂದು ಪರೀಕ್ಷಾ ಕೊಠಡಿಗಳಲ್ಲಿ ಸಿಸಿಟಿವಿ ಕ್ಯಾಮೆರಾ, ಗಡಿಯಾರಗಳನ್ನು ಕಡ್ಡಾಯವಾಗಿ ಅಳವಡಿಸಬೇಕು ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದರು.

karnataka teachers recruitment exam dharwad dc holds preparation meeting gvd

ವರದಿ: ಪರಮೇಶ್ವರ ಅಂಗಡಿ, ಏಷ್ಯಾನೆಟ್ ಸುವರ್ಣ ನ್ಯೂಸ್, ಧಾರವಾಡ

ಧಾರವಾಡ (ಮೇ.19): ಶಿಕ್ಷಕರ ನೇಮಕಾತಿ ಸ್ಪರ್ಧಾತ್ಮಕ ಪರೀಕ್ಷೆ (Teachers Recruitment Exam) ವೇಳೆ ಯಾವುದೇ ರೀತಿಯ ಅಕ್ರಮವನ್ನು ತಡೆಗಟ್ಟುವ ಉದ್ದೇಶದಿಂದ ಪರೀಕ್ಷಾರ್ಥಿಗಳ ತಪಾಸಣೆಗಾಗಿ ಎರಡು ಹಂತದಲ್ಲಿ ವ್ಯವಸ್ಥೆ ಮಾಡಬೇಕು. ಪ್ರತಿಯೊಂದು ಪರೀಕ್ಷಾ ಕೊಠಡಿಗಳಲ್ಲಿ ಸಿಸಿಟಿವಿ ಕ್ಯಾಮೆರಾ, ಗಡಿಯಾರಗಳನ್ನು ಕಡ್ಡಾಯವಾಗಿ ಅಳವಡಿಸಬೇಕು ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ (DC Gurudatta Hegde) ತಿಳಿಸಿದರು. ಮೇ 21 ಹಾಗೂ 22 ರಂದು ನಡೆಯಲಿರುವ ಶಿಕ್ಷಕರ ನೇಮಕಾತಿಯ ಸ್ಪರ್ಧಾತ್ಮಕ ಪರೀಕ್ಷೆಗಳ ಹಿನ್ನೆಲೆಯಲ್ಲಿ ನಗರದ ಬಾಸೆಲ್ ಮಿಷನ್, ಕೆ.ಇ. ಬೋರ್ಡ್, ಶಾರದಾ, ಯೂನಿವರ್ಸಿಟಿ ಪಬ್ಲಿಕ್ ಶಾಲೆ ಸೇರಿದಂತೆ ವಿವಿಧ 9 ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಸಿದ್ಧತೆಗಳನ್ನು ಪರಿಶೀಲಿಸಿ, ನಿರ್ದೇಶನಗಳನ್ನು ನೀಡಿದರು.

ಧಾರವಾಡ ನಗರದ ವಿವಿಧ 9 ರೀಕ್ಷಾ ಕೇಂದ್ರಗಳಲ್ಲಿ  ಒಟ್ಟು 2134 ಅಭ್ಯರ್ಥಿಗಳು ಪರೀಕ್ಷೆಗಳಿಗೆ ಹಾಜರಾಗಲಿದ್ದಾರೆ. ಪರೀಕ್ಷಾ ಕೇಂದ್ರಗಳನ್ನು ಪ್ರವೇಶಿಸುವ ಮುನ್ನ ಪರೀಕ್ಷಾರ್ಥಿಗಳ ತಪಾಸಣೆಗಾಗಿ ಪೊಲೀಸ್, ಶಿಕ್ಷಣ, ಆರೋಗ್ಯ ಮತ್ತಿತರ ಇಲಾಖೆಗಳ ಸಿಬ್ಬಂದಿಯನ್ನು ನಿಯೋಜಿಸಲಾಗುವುದು. ಯಾವುದೇ ರೀತಿಯ ಅಕ್ರಮಕ್ಕೆ ಅವಕಾಶ ನೀಡಬಾರದು. ಅಕ್ರಮ ತಡೆಗಟ್ಟಲು ಪ್ರತಿಯೊಂದು ಪರೀಕ್ಷಾ ಕೊಠಡಿಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಕೂಡ ಅಳವಡಿಸುವ ಕಾರ್ಯ ಪರಿಶೀಲಿಸಿದರು.

ಅನೈತಿಕ ಸಂಬಂಧಕ್ಕೆ ಅಡ್ಡಿ, ಪ್ರಿಯಕರನ ಜತೆ ಸೇರಿ ತಮ್ಮನನ್ನೇ ಕೊಂದ ಅಕ್ಕ

ಪಾರದರ್ಶಕ ಪರೀಕ್ಷೆ ನಮ್ಮೆಲ್ಲರ ಜವಾಬ್ದಾರಿ ಕಟ್ಟುನಿಟ್ಟಾಗಿ ಪರೀಕ್ಷೆ ನಡೆಸಬೇಕು.ಜಿಲ್ಲೆಯಲ್ಲಿ ಯಾವುದೇ ರೀತಿಯ ನ್ಯೂನ್ಯತೆ ಕಂಡು ಬಂದರೆ ಸಂಬಂಧಿಸಿದ ಅಧಿಕಾರಿಗಳು ಉತ್ತರಿಸಬೇಕಾಗುತ್ತದೆ. ಆದ್ದರಿಂದ ಎಲ್ಲ ಇಲಾಖೆಗಳು ಸಮನ್ವಯದೊಂದಿಗೆ ಪಾರದರ್ಶಕವಾಗಿ ಪರೀಕ್ಷೆ ನಡೆಸಬೇಕಿದೆ. ಪರೀಕ್ಷೆ ಕೆಲಸವನ್ನು ಗಂಭೀರವಾಗಿ ಪರಿಗಣಿಸಬೇಕು. ಪರೀಕ್ಷೆಗೆ ನಿಯೋಜಿತರಾದ ಎಲ್ಲ ಅಧಿಕಾರಿಗಳು ಮತ್ತು ಸಿಬ್ಬಂದಿ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ನಿರ್ದೇಶನ ನೀಡಿದರು. ಇದೇ ಮೊದಲ ಬಾರಿ ಪರೀಕ್ಷಾ ಕೇಂದ್ರಗಳನ್ನು ಸುಪರ್ದಿಗೆ ಪಡೆದುಕೊಳ್ಳಲಾಗುತ್ತಿದೆ. 

ಪರೀಕ್ಷಾರ್ಥಿಗಳನ್ನು ಹೊರತುಪಡಿಸಿ ಮೂರನೇ ವ್ಯಕ್ತಿಗೆ ಪರೀಕ್ಷಾ ಕೇಂದ್ರದಲ್ಲಿ ಪ್ರವೇಶ ಇರುವುದಿಲ್ಲ. ಪರೀಕ್ಷಾ ಕೇಂದ್ರ ಪ್ರವೇಶಿಸುವ ಮುನ್ನ ಎರಡು ಹಂತಗಳಲ್ಲಿ ಅಭ್ಯರ್ಥಿಗಳ ತಪಾಸಣೆ ನಡೆಸಲಾಗುತ್ತದೆ. ಮೊಬೈಲ್, ವಾಚ್ ಸೇರಿದಂತೆ ಯಾವುದೇ ಎಲೆಕ್ಟ್ರಾನಿಕ್ ವಸ್ತುಗಳನ್ನು ತೆಗೆದುಕೊಂಡು ಬರಲು ಅವಕಾಶವಿಲ್ಲ ಎಂದರು. ಈ ಬಾರಿಯ ನೇಮಕಾತಿ ಸ್ಪರ್ಧಾತ್ಮಕ ಪರೀಕ್ಷೆಯನ್ನು ಎಲ್ಲರೂ ಗಮನಿಸುತ್ತಿದ್ದಾರೆ. ಪ್ರತಿಯೊಬ್ಬರೂ ತಮ್ಮ ಕೆಲಸವನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು.ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸುವ ನಿಟ್ಟಿನಲ್ಲಿ ಎಲ್ಲರೂ ಶಿಸ್ತುಬದ್ಧವಾಗಿ ಕೆಲಸ ಮಾಡಬೇಕು ಎಂದು ಜಿಲ್ಲಾಧಿಕಾರಿಗಳು ಸೂಚಿಸಿದರು.

ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಸುರೇಶ ಇಟ್ನಾಳ ಮಾತನಾಡಿ, ಪ್ರಶ್ನೆಪತ್ರಿಕೆ ವಿತರಣೆ ಹಾಗೂ ಉತ್ತರ ಪತ್ರಿಕೆಗಳ ಸಂಗ್ರಹಕ್ಕೆ ಸಂಬಂಧಿಸಿದಂತೆ ಸಮಯ ಪಾಲನೆಗೆ ಹೆಚ್ಚು ಒತ್ತು ನೀಡಬೇಕು. ಪರೀಕ್ಷಾ ಕೇಂದ್ರದ ಮೂಲಸೌಕರ್ಯವನ್ನು ಮುಂಚಿತವಾಗಿ ಪರಿಶೀಲಿಸಿ ಏನಾದರೂ ಅನಾನುಕೂಲ ಕಂಡುಬಂದರೆ ಸರಿಪಡಿಸಬೇಕು. ಎಲ್ಲ ಕೊಠಡಿಗಳಲ್ಲಿ ಗಡಿಯಾರ ಅಳವಡಿಸಬೇಕು.ಪರೀಕ್ಷಾ ಸಮಯ, ಪ್ರಶ್ನೆಪತ್ರಿಕೆಗಳ ಸ್ವೀಕಾರ ಮತ್ತು ವಿತರಣೆ ಕುರಿತ ಮಾರ್ಗಸೂಚಿಗಳನ್ನು ಮತ್ತು ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸಬೇಕು. 

Dharwad ಕಾಂಗ್ರೆಸ್‌ನಲ್ಲಿ ಜೀವ ಬೆದರಿಕೆ: ಪ್ರಕರಣ ವಿಚಾರಣೆಯಾದ್ರೆ ಕಾಂಗ್ರೆಸ್‌ನಲ್ಲಿ ಅಲ್ಲೋಲ ಕಲ್ಲೋಲ!

ಪರೀಕ್ಷಾರ್ಥಿಗಳಿಗೆ ಯಾವುದೇ ರೀತಿಯ ಗೊಂದಲ ಮತ್ತು ಅಕ್ರಮಗಳಿಗೆ ಅವಕಾಶ ನೀಡದೇ ಸಮಯಪಾಲನೆ ಜತೆಗೆ ಅಚ್ಚುಕಟ್ಟಾಗಿ ಪರೀಕ್ಷೆ ನಡೆಸಲು ಸಿದ್ಧತೆ ಮಾಡಿಕೊಳ್ಳಬೇಕು ಎಂದರು. ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಸ್.ಎಸ್.ಕೆಳದಿಮಠ,ಡಯಟ್ ಪ್ರಾಚಾರ್ಯೆ ಎನ್.ಕೆ.ಸಾವ್ಕಾರ್,ಶಿಕ್ಷಣಾಧಿಕಾರಿ ಸುರೇಶ ಹುಗ್ಗಿ ,ನಿರ್ಮಿತಿ ಕೇಂದ್ರದ ಯೋಜನಾ ವ್ಯವಸ್ಥಾಪಕ ಶಿವಕುಮಾರ ಪಾಟೀಲ ಸೇರಿದಂತೆ ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರು, ಸಿಬ್ಬಂದಿ ಉಪಸ್ಥಿತರಿದ್ದರು.

Latest Videos
Follow Us:
Download App:
  • android
  • ios