KCET 2023: ಆನ್ ಲೈನ್ ನಲ್ಲಿ ಪಿಯು ಅಂಕ ದಾಖಲಿಸಲು ಕೆಇಎ ಕಡ್ಡಾಯ ಸೂಚನೆ
12ನೇ ತರಗತಿ ಪರೀಕ್ಷೆಯನ್ನು 2023ಕ್ಕಿಂತ ಮುಂಚೆ ಪಾಸಾಗಿರುವ ಎಲ್ಲ ಅಭ್ಯರ್ಥಿಗಳು ಕಡ್ಡಾಯವಾಗಿ ತಮ್ಮ ಅಂಕಗಳನ್ನು ಆನ್ ಲೈನ್ ಮೂಲಕ ಮೇ 31ರ ಒಳಗೆ ದಾಖಲಿಸುವಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸೂಚಿಸಿದೆ.
ಬೆಂಗಳೂರು (ಮೇ.24): ಕರ್ನಾಟಕ ಪಿಯು ಬೋರ್ಡ್ (PUC Board Karnataka) ನಡೆಸುವ ದ್ವಿತೀಯ ಪಿಯುಸಿ ಪರೀಕ್ಷೆಯನ್ನು 2023ಕ್ಕಿಂತ ಮುಂಚೆ ಪಾಸಾಗಿರುವವರು ಮತ್ತು 12ನೇ ತರಗತಿಯನ್ನು ಸಿಬಿಎಸ್‌ಇ, ಸಿಐಎಸ್‌ಸಿಇ, 10+2, ಐಜಿಸಿಎಸ್‌ಇ (ಜಮ್ಮು ಮತ್ತು ಕಾಶ್ಮೀರ ಸೇರಿದಂತೆ) ಮತ್ತಿತರ ಬೋರ್ಡ್ ಗಳ ಪರೀಕ್ಷೆಯನ್ನು 2023ರಲ್ಲಿ ಪೂರೈಸಿರುವ ಎಲ್ಲ ಅಭ್ಯರ್ಥಿಗಳು ಕಡ್ಡಾಯವಾಗಿ ತಮ್ಮ 12ನೇ ತರಗತಿಯ ಅಂಕಗಳನ್ನು ಆನ್ ಲೈನ್ ಮೂಲಕ ಮೇ 31ರ ಒಳಗೆ ದಾಖಲಿಸುವಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಬುಧವಾರ ಸೂಚಿಸಿದೆ.
ಕೆಇಎ ವ್ಯವಸ್ಥಾಪಕ ನಿರ್ದೇಶಕಿ ಎಸ್. ರಮ್ಯಾ ಅವರು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿ, ಪ್ರಾಧಿಕಾರದ ವೆಬ್‌ಸೈಟಿನಲ್ಲಿ ಕೆಇಎ ಪೋರ್ಟಲ್ ನ ನಿಗದಿತ ಲಿಂಕ್ ಬಳಸಿಕೊಂಡು ಅಭ್ಯರ್ಥಿಗಳು ಅಂಕಗಳನ್ನು ಮೇ 31ರೊಳಗೆ ದಾಖಲಿಸಬೇಕು ಎಂದು ತಿಳಿಸಿದ್ದಾರೆ.
ರಾಜ್ಯ ಪಠ್ಯಕ್ರಮದಲ್ಲಿ 2023ರಲ್ಲಿ ದ್ವಿತೀಯ ಪಿಯುಸಿ ಓದಿದವರ ಅಂಕಗಳನ್ನು ಪ್ರಾಧಿಕಾರವು ನೇರವಾಗಿ ಪದವಿ ಪೂರ್ವ ಶಿಕ್ಷಣ ಇಲಾಖೆಯಿಂದ ಪಡೆದುಕೊಳ್ಳಲಿದೆ ಎಂದು ಅವರು ಹೇಳಿದ್ದಾರೆ.
ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಪುನಃ ತೆಗೆದುಕೊಂಡಿರುವ ಅಭ್ಯರ್ಥಿಗಳು (ರಿಪೀಟರ್ಸ್) ಕೂಡ ಅಂಕಗಳನ್ನು ದಾಖಲಿಸಬೇಕು. ಅರ್ಹತಾ ಕಂಡಿಕೆ' 'Clause-Y' ಅನ್ನು ಆಯ್ಕೆ ಮಾಡಿರುವ ಅಭ್ಯರ್ಥಿಗಳೂ ಅಂಕಗಳನ್ನು ಪೋರ್ಟಲ್‌ನಲ್ಲಿ ದಾಖಲಿಸಬೇಕು.
ಮತ್ತೆ ಪಠ್ಯಪುಸ್ತಕ ಪರಿಷ್ಕರಣೆ, ಕಾಂಗ್ರೆಸ್ ಸರ್ಕಾರದ ಹೊಸ ಪಠ್ಯಪುಸ್ತಕ ಮುದ್ರಣ!
ಆರ್ಕಿಟೆಕ್ಚರ್ ಕೋರ್ಸುಗಳ ಪ್ರವೇಶಕ್ಕಾಗಿ ಅಭ್ಯರ್ಥಿಗಳು 2023ರ 'ನಾಟಾ' (NATA-2023) ಪರೀಕ್ಷೆಯ ಅಂಕಗಳನ್ನು ಅರ್ಹತೆಗೆ ಅನುಗುಣವಾಗಿ ದಾಖಲಿಸಬಹುದು. ವಿವರಗಳಿಗಾಗಿ ಅಭ್ಯರ್ಥಿಗಳು ಪ್ರಾಧಿಕಾರದ ವೆಬ್‌ಸೈಟ್ http://kea.kar.nic.in ಗೆ ಭೇಟಿ ನೀಡಬಹುದು.
ಸಿದ್ದರಾಮಯ್ಯ ಸಿಎಂ ಆಗ್ತಿದ್ದಂತೆ ಬಿಜೆಪಿ ಸರಕಾರದ ಪಠ್ಯಕ್ರಮ ತೆಗೆದು ಹಾಕುವಂತೆ ಶಿಕ್ಷಣ ತಜ್ಞರ ಮನವಿ!
ಬೆಂ.ವಿವಿಯಿಂದ ಹಾನರ್ಸ್ ಕೋರ್ಸ್‌ಗೆ ಅರ್ಜಿ ಆಹ್ವಾನ
ಬೆಂಗಳೂರು ವಿಶ್ವವಿದ್ಯಾಲಯವು ತನ್ನ ಸಂಯೋಜಿತ ಕಾಲೇಜುಗಳಲ್ಲಿ 2023-24ನೇ ಸಾಲಿನ 4 ವರ್ಷಗಳ ಬಿಎ, ಬಿಎಸ್ಸಿ ಮತ್ತು ಬಿಕಾಂ (ಹಾನರ್ಸ್) ಕೋರ್ಸ್‌ಗಳ ಪ್ರವೇಶಾತಿಗೆ ಅರ್ಜಿ ಸಲ್ಲಿಕೆ ಅವಧಿಯನ್ನು ಮೇ 31ರವರೆಗೆ ವಿಸ್ತರಿಸಿದೆ.
ರಾಷ್ಟ್ರೀಯ ಶಿಕ್ಷಣ ನೀತಿ-2020 ಅಡಿ ಕೋರ್ಸ್‌ಗಳನ್ನು ನಡೆಸುತ್ತಿದೆ. ಆಸಕ್ತ ವಿದ್ಯಾರ್ಥಿಗಳು ಸಮಗ್ರ ವಿಶ್ವವಿದ್ಯಾಲಯ ಮತ್ತು ಕಾಲೇಜು ನಿರ್ವಹಣಾ ವ್ಯವಸ್ಥೆ (ಯುಯುಸಿಎಂಎಸ್) ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು. ದ್ವಿತೀಯ ಪಿಯುಸಿ ಅಥವಾ ತತ್ಸಮಾನ ಕಲೆ, ವಿಜ್ಞಾನ ಮತ್ತು ವಾಣಿಜ್ಯ ವಿಷಯಗಳಲ್ಲಿ ಶೇ.50 ಅಂಕ ಗಳಿಸಿರುವಂತಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಪರಿಶಿಷ್ಟಜಾತಿ/ಪಂಗಡ ಹಾಗೂ ಪ್ರವರ್ಗ-1ರ ವಿದ್ಯಾರ್ಥಿಗಳಿಗೆ ಶೇ.45 ಅಂಕ ಪಡೆದಿರುವವರು ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಯನ್ನು ಅವರು ಗಳಿಸಿರುವ ಅಂಕಗಳ ಜ್ಯೇಷ್ಠತೆ ಆಧಾರದಲ್ಲಿ ನಡೆಸಲಾಗುತ್ತದೆ. ಯಯುಸಿಎಂಸ್ ತಂತ್ರಾಂಶ hಠಿಠಿps://್ಠ್ಠ್ಚಞs.ka್ಟ್ಞaಠಿaka.ಜಟv.ಜ್ಞಿ/ ಅರ್ಜಿಗಳನ್ನು ಸಲ್ಲಿಸಬಹುದು.