Asianet Suvarna News Asianet Suvarna News

ಹೈಕೋರ್ಟ್ ಮೆಟ್ಟಿಲೇರಿದ CET Rank ಗೊಂದಲ

ಪ್ರಸಕ್ತ ವರ್ಷದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (ಕೆಸಿಇಟಿ) ಫಲಿತಾಂಶದಲ್ಲಿ ಕೇವಲ ಕೆಸಿಇಟಿ ಪರೀಕ್ಷೆಯ ಅಂಕವನ್ನು ಮಾತ್ರ ಪರಿಗಣಿಸಿದೆ. ಈ ಹಿನ್ನೆಲೆಯಲ್ಲಿ ರಿಪೀಟರ್ಸ್ ಕೋರ್ಟ್ ಮೆಟ್ಟಿಲೇರಿದ್ದಾರೆ.

kcet repeaters students appealed In Karnataka against kea rbj
Author
Bengaluru, First Published Aug 4, 2022, 3:44 PM IST

ಬೆಂಗಳೂರು, (ಆಗಸ್ಟ್.04): ಕರ್ನಾಟಕ ಸಿಇಟಿ ರ್ಯಾಂಕ್ ಗೆ ಪುನರಾವರ್ತಿತ ಅಭ್ಯರ್ಥಿಗಳ ಪಿಯುಸಿ ಅಂಕ ಪರಿಗಣಿಸದ ಸರ್ಕಾರದ ಅದೇಶದ ವಿರುದ್ಧ ವಿದ್ಯಾರ್ಥಿಗಳು ಹೈಕೋರ್ಟ್ ಮೆಟ್ಟಿಲೇರಿದ್ದಾರೆ. 

ಜುಲೈ 30 ರಂದು ರಾಜ್ಯ ಸರ್ಕಾರ ಹೊರಡಿಸಿದ ಆದೇಶವನ್ನ ರದ್ದು ಮಾಡುವಂತೆ ವಿದ್ಯಾರ್ಥಿಗಳು ಅರ್ಜಿಯಲ್ಲಿ ಮನವಿ ಮಾಡಿಕೊಂಡಿದ್ದಾರೆ. 2021ನೇ ಸಾಲಿನ ಸಿಇಟಿ ಪುನರಾವರ್ತಿತ 24 ವಿದ್ಯಾರ್ಥಿಗಳಿಗೆ ದ್ವಿತೀಯ ಪಿಯುಸಿ ಅಂಕಗಳನ್ನ ಪರಿಗಣಿಸಲು ಸಾಧ್ಯವಿಲ್ಲ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಿರ್ಧಾರ ಪ್ರಕಟಿಸಿತ್ತು. 

Bengaluru: ಕೆಇಎ ಎದುರು ಸಿಇಟಿ ಪುನರಾವರ್ತಿತ ವಿದ್ಯಾರ್ಥಿಗಳಿಂದ ಮುಂದುವರಿದ ಪ್ರತಿಭಟನೆ

ರಾಜ್ಯದ ನಿರ್ಧಾರ ವಿವೇಚನಾ ರಹಿತವಾಗಿದ್ದು, 2006 ಸಿಇಟಿ ನಿಯಮಗಳಿಗೆ ವಿರುದ್ಧವಾಗಿದೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ. ಈ ಬಗ್ಗೆ ವಕೀಲರಾದ ಶತಬೀಶ್ ಶಿವಣ್ಣ, ಅರ್ನವ್ ಬಗಲ್ವಾಡಿ, ಅಭಿಷೇಕ್ ಅವರು ಇಂದು ಹೈಕೋರ್ಟ್ ಅರ್ಜಿ ಸಲ್ಲಿಸಿದ್ದಾರೆ. 

ವಿಚಾರದ ಗಂಭೀರತೆ ಅರಿತ ಹೈಕೋರ್ಟ್ ಇಂದೆ ಅರ್ಜಿ ವಿಚಾರಣೆ ಕೈಗೆತ್ತಿಕೊಂಡಿತು. ಈ ವೇಳೆ ಅರ್ಜಿದಾರರ ವಕೀಲರಾದ ಶತಬೀಶ್ ಶಿವಣ್ಣ ವಾದ ಮಂಡಿಸಿ, ರಾಜ್ಯ ಸರ್ಕಾರ ತನ್ನ ಆದೇಶದಂತೆ ಕ್ರಮಕೈಗೊಳ್ಳಲು ಮುಂದಾಗಿದ್ದು ವಿದ್ಯಾರ್ಥಿಗಳಿಗೆ ಅನ್ಯಾಯ ಆಗಲಿದೆ ಎಂದರು. 

ಇದೇ ವೇಳ ಸರ್ಕಾರದ ಪರ ವಕೀಲರು ಹಾಜರಾಗಿ ಜು.30ರ ನಿರ್ಧಾರದ ಮೇಲೆ‌ ಯಾವುದೇ ಪ್ರಕ್ರಿಯೆ ಆರಂಭಿಸುವುದಿಲ್ಲ ಎಂದು ನ್ಯಾಯಪೀಠಕ್ಕೆ ತಿಳಿಸಿದ್ರು. ವಾದ ಆಲಿಸಿದ ಏಕಸದಸ್ಯ ಪೀಠ ವಿಚಾರಣೆ ಯನ್ನ ಆ.8 ಕ್ಕೆ ಮುಂದೂಡಿದೆ..

ಕೋವಿಡ್ ಪಾಸ್: ಕೆಇಎ ತೀರ್ಮಾನಕ್ಕೆ ಸರ್ಕಾರ ಬದ್ಧ, ಅಶ್ವತ್ಥನಾರಾಯಣ ಸ್ಪಷ್ಟ

2020-21ನೇ ಸಾಲಿಗೆ ಮಾತ್ರ ಸಿಇಟಿ ಅಂಕಗಳನ್ನು ಪರಿಗಣಿಸಿ ರ್ಯಾಂಕ್ ನೀಡಲಾಗುವುದು’ ಎಂಬ ಆದೇಶ ಕೂಡ ಇದೆ. ಈ ಆದೇಶ ಕಳೆದ ವರ್ಷಕ್ಕೆ ಅನ್ವಯವಾಗುವುದೇ ಹೊರತು ಈ ವರ್ಷಕ್ಕಲ್ಲ. ಹೀಗಿರುವಾಗ ಸರ್ಕಾರ ವಿದ್ಯಾರ್ಥಿಗಳಿಗೆ ಆಗಿರುವ ಅನ್ಯಾಯ ಸರಿಪಡಿಸಲು ಮುಂದಾಗಬೇಕೇ ಹೊರತು ಆಗಿರುವ ತಪ್ಪನ್ನು ಸಮರ್ಥಿಸಿಕೊಳ್ಳಬಾರದು ಎಂದು ಆಕ್ರೋಶ ವ್ಯಕ್ತಪಡಿಸಿದರು. ಕಳೆದ ವರ್ಷ 17ರಿಂದ 20 ಸಾವಿರ ರ್ಯಾಂಕ್ ಪಡೆದಿದ್ದ ವಿದ್ಯಾರ್ಥಿಗಳು ಈ ಬಾರಿ 1.2 ಲಕ್ಷಕ್ಕೆ ಹೋಗಿದೆ. ಇದರಿಂದ ಸೀಟು ಪಡೆಯಲು ಯಾವ ರೀತಿಯಲ್ಲಿ ನಿರೀಕ್ಷೆಯನ್ನಿಟ್ಟುಕೊಳ್ಳಬೇಕು ಎಂದು ನೊಂದ ವಿದ್ಯಾರ್ಥಿಯರು ಅಳಲು ತೋಡಿಕೊಂಡಿದ್ದಾರೆ. 

2020-21ನೇ ಸಾಲಿಗೆ ಮಾತ್ರ ಸಿಇಟಿ ಅಂಕಗಳನ್ನು ಪರಿಗಣಿಸಿ ರ್ಯಾಂಕ್ ನೀಡಲಾಗುವುದು’ ಎಂಬ ಆದೇಶ ಕೂಡ ಇದೆ. ಈ ಆದೇಶ ಕಳೆದ ವರ್ಷಕ್ಕೆ ಅನ್ವಯವಾಗುವುದೇ ಹೊರತು ಈ ವರ್ಷಕ್ಕಲ್ಲ. ಹೀಗಿರುವಾಗ ಸರ್ಕಾರ ವಿದ್ಯಾರ್ಥಿಗಳಿಗೆ ಆಗಿರುವ ಅನ್ಯಾಯ ಸರಿಪಡಿಸಲು ಮುಂದಾಗಬೇಕೇ ಹೊರತು ಆಗಿರುವ ತಪ್ಪನ್ನು ಸಮರ್ಥಿಸಿಕೊಳ್ಳಬಾರದು ಎಂದು ಆಕ್ರೋಶ ವ್ಯಕ್ತಪಡಿಸಿದರು. ಕಳೆದ ವರ್ಷ 17ರಿಂದ 20 ಸಾವಿರ ರ್ಯಾಂಕ್ ಪಡೆದಿದ್ದ ವಿದ್ಯಾರ್ಥಿಗಳು ಈ ಬಾರಿ 1.2 ಲಕ್ಷಕ್ಕೆ ಹೋಗಿದೆ. ಇದರಿಂದ ಸೀಟು ಪಡೆಯಲು ಯಾವ ರೀತಿಯಲ್ಲಿ ನಿರೀಕ್ಷೆಯನ್ನಿಟ್ಟುಕೊಳ್ಳಬೇಕು ಎಂದು ನೊಂದ ವಿದ್ಯಾರ್ಥಿಯರು ಅಳಲು ತೋಡಿಕೊಂಡಿದ್ದಾರೆ. 

ಅಶ್ವತ್ಥ್ ನಾರಾಯಣ ಹೇಳಿದ್ದೇನು?
2021-22ನೇ ಶೈಕ್ಷಣಿಕ ವರ್ಷದಲ್ಲಿ ದ್ವಿತೀಯ ಪಿಯುಸಿಯಲ್ಲಿ ತೇರ್ಗಡೆ ಹೊಂದಿ ಈ ವರ್ಷವೂ ಪುನಃ ಸಿಇಟಿ ಬರೆದಿರುವ 24 ಸಾವಿರ ವಿದ್ಯಾರ್ಥಿಗಳಿಗೆ ಪಿಯುಸಿ ಅಂಕಗಳನ್ನು ಪರಿಗಣಿಸುವುದು ಸಾಧ್ಯವಿಲ್ಲ. ಈ ವಿಷಯದಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ತೆಗೆದುಕೊಂಡಿರುವ ನಿರ್ಧಾರ ಸರಿಯಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಸಿ ಎನ್ ಅಶ್ವತ್ಥನಾರಾಯಣ  ಸ್ಪಷ್ಟಪಡಿಸಿದ್ದಾರೆ.

ಈ 24,000 ವಿದ್ಯಾರ್ಥಿಗಳಿಗೆ ಈಗ ಪಿಯುಸಿ ಅಂಕಗಳನ್ನು ಪರಿಗಣಿಸಿ, ರಾಂಕಿಂಗ್ ಕೊಟ್ಟರೆ ಒಟ್ಟು 3 ಲಕ್ಷ ವಿದ್ಯಾರ್ಥಿಗಳಿಗೆ ಅನ್ಯಾಯ ಮಾಡಿದಂತಾಗುತ್ತದೆ. ಇವರಲ್ಲಿ ಒಂದುವರೆ ಲಕ್ಷ ವಿದ್ಯಾರ್ಥಿಗಳು ಹೋದ ವರ್ಷವೇ ಸಿಇಟಿ ಬರೆದಿರುವವರು ಹಾಗೂ ಈ ವರ್ಷದ ಒಂದೂವರೆ ಲಕ್ಷ ವಿದ್ಯಾರ್ಥಿಗಳು ಸೇರಿದ್ದಾರೆ ಎಂದು ಹೇಳಿದ್ದಾರೆ.

ಇದಲ್ಲದೆ, ಕಳೆದ ವರ್ಷದ ಐಸಿಎಸ್ಇ ಪಠ್ಯಕ್ರಮದ 64 ಮತ್ತು ಸಿಬಿಎಸ್ಇ ಪಠ್ಯಕ್ರಮದ 600 ವಿದ್ಯಾರ್ಥಿಗಳು ಕೂಡ ಈ ಬಾರಿ ಸಿಇಟಿ ಬರೆದಿದ್ದು ಅವರದ್ದನ್ನು ಕೂಡ ಕೇವಲ ಸಿಇಟಿ ಅಂಕದ ಮೇಲೆ ರಾಂಕಿಂಗ್ ಕೊಡಲಾಗಿದೆ. ಈ ವಿಷಯದಲ್ಲಿ ಗೊಂದಲ ಬೇಡ ಎಂದು ಸ್ಪಷ್ಟಪಡಿಸಿfದಾರೆ.

ಈ ವಿದ್ಯಾರ್ಥಿಗಳಿಗೆ ಯಾವ ರೀತಿ ಸಹಾಯ ಮಾಡಬಹುದು ಎಂಬುದರ ಬಗ್ಗೆ ಸುದೀರ್ಘ ವಾಗಿ ಚರ್ಚಿಸಲಾಯಿತು. ಏನೇ ಮಾಡಿದರೆ ಇತರ ದೊಡ್ಡ ಸಂಖ್ಯೆಯ ‌ಹಾಗೂ ಎರಡೂ ಪರೀಕ್ಷೆಗಳನ್ನು ಬರೆದವರಿಗೆ‌ ಅನ್ಯಾಯ ಆಗುತ್ತದೆ. ಅವರ ರಾಂಕಿಂಗ್ ನಲ್ಲಿ ಬಹಳ ವ್ಯತ್ಯಾಸ ಆಗುತ್ತದೆ. ಹೀಗಾಗಿ ಕೆಇಎ ತೆಗೆದುಕೊಂಡು ನಿಲುವುದು ಸರಿ‌ ಇದೆ ಎನ್ನುವುದರ ತೀರ್ಮಾನಕ್ಕೆ ಬರಲಾಯಿತು ಎಂದು ತಿಳಿಸಿದ್ದಾರೆ.

 

Follow Us:
Download App:
  • android
  • ios