KCET Result 2022: ಸಿಇಟಿ ಪರಿಷ್ಕೃತ ರ‍್ಯಾಕಿಂಗ್‌ ಪಟ್ಟಿ ಅ.1ರಂದು ಮಧ್ಯಾಹ್ನ ಪ್ರಕಟ

ಪ್ರಸಕ್ತ ಸಾಲಿನ ಸಿಇಟಿ ಪರಿಷ್ಕೃತ ರ‍್ಯಾಕಿಂಗ್‌ ಪಟ್ಟಿ  ಅಕ್ಟೋಬರ್‌ 1ರಂದು ಪ್ರಕಟಿಸುವುದಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ.   ಮಧ್ಯಾಹ್ನ 2 ಗಂಟೆಗೆ ಸಿಇಟಿ ಪರಿಷ್ಕೃತ ರ‍್ಯಾಕಿಂಗ್‌ ಪಟ್ಟಿ ಬಿಡುಗಡೆ ಮಾಡಲಾಗುತ್ತಿದೆ.

KEA  announce revised Karnataka CET ranking to October 1st gow

ಬೆಂಗಳೂರು (ಸೆ.30): ಎಂಜಿನಿಯರಿಂಗ್‌ ಕೋರ್ಸುಗಳ ಪ್ರವೇಶಕ್ಕೆ ಸಂಬಂಧಿಸಿದಂತೆ ಪ್ರಸಕ್ತ ಸಾಲಿನ ಸಿಇಟಿ ಪರಿಷ್ಕೃತ ರ‍್ಯಾಕಿಂಗ್‌ ಪಟ್ಟಿ  ಅಕ್ಟೋಬರ್‌ 1ರಂದು ಪ್ರಕಟಿಸುವುದಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ.  ಕರ್ನಾಟಕ ಹೈಕೋರ್ಟ್ ಆದೇಶದಂತೆ ಸಿಇಟಿ ಪರಿಷ್ಕೃತ ರ‍್ಯಾಕಿಂಗ್‌ ಪಟ್ಟಿ ಪ್ರಕಟಗೊಳಿಸಲಾಗುತ್ತಿದೆ. ಮಧ್ಯಾಹ್ನ 2 ಗಂಟೆಗೆ ಸಿಇಟಿ ಪರಿಷ್ಕೃತ ರ‍್ಯಾಕಿಂಗ್‌ ಪಟ್ಟಿ ಬಿಡುಗಡೆ ಮಾಡಲಾಗುತ್ತಿದೆ. ಅಭ್ಯರ್ಥಿಗಳು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕೃತ ವೆಬ್ ಸೈಟ್ Karresults.nic.in ನಲ್ಲಿ ಪರಿಷ್ಕೃತ ರ‍್ಯಾಕಿಂಗ್‌ ಪಟ್ಟಿ ವೀಕ್ಷಿಸಬಹುದು ಎಂದು ಉನ್ನತ ಶಿಕ್ಷಣ ಸಚಿವ ಡಾ. ಸಿ‌ ಎನ್ ಅಶ್ವಥ್ ನಾರಾಯಣ್ ಮಾಹಿತಿ ನೀಡಿದ್ದಾರೆ. ಈಗಾಗಲೇ ಪರಿಷ್ಕೃತ ರ‍್ಯಾಕಿಂಗ್‌ ನಿಂದ ತಮ್ಮ ರ‍್ಯಾಕಿಂಗ್‌ ನಲ್ಲಿ ಏರುಪೇರಾಗುವ ಹಾಗೂ ಸೀಟು ಕೈತಪ್ಪುವ ಆತಂಕಕ್ಕೀಡಾಗಿರುವ ಸಾವಿರಾರು ವಿದ್ಯಾರ್ಥಿಗಳಲ್ಲಿ ಪಟ್ಟಿ ಪ್ರಕಟಣೆ ಮುಂದೂಡಿಕೆ ಮತ್ತಷ್ಟುಆತಂಕ ಹೆಚ್ಚಿಸಿತ್ತು. ಈ ಮಧ್ಯೆ, ಪರಿಷ್ಕೃತ ರ‍್ಯಾಂಕ್‌ ಪಟ್ಟಿ ಪ್ರಕಟವಾದ ಬೆನ್ನಲ್ಲೇ ಅ.3ರಿಂದ ಕೌನ್ಸೆಲಿಂಗ್‌ ಕೂಡ ಆರಂಭವಾಗಲಿದೆ. ಈ ಬಗ್ಗೆ ಪಟ್ಟಿ ಪ್ರಕಟವಾದ ಬಳಿಕ ಅಧಿಕೃತ ವೇಳಾಪಟ್ಟಿ ಪ್ರಕಟಿಸಲಾಗುವುದು ಎಂದು ಪ್ರಾಧಿಕಾರದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. 

ಈ ಬಾರಿ ಪುನರಾವರ್ತಿತ ಅಭ್ಯರ್ಥಿಗಳಾಗಿ ಸಿಇಟಿ ಬರೆದಿದ್ದ 2021ನೇ ಸಾಲಿನ ಕೋವಿಡ್‌ ಬ್ಯಾಚ್‌ನಲ್ಲಿ ಪರೀಕ್ಷೆ ಇಲ್ಲದೆ ದ್ವಿತೀಯ ಪಿಯುಸಿ ಪಾಸಾಗಿದ್ದ ಸುಮಾರು 24 ಸಾವಿರ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಅಂಕಗಳನ್ನು ಸಿಇಟಿ ರ‍್ಯಾಕಿಂಗ್‌ ಗೆ ಸರ್ಕಾರ ಪರಿಗಣಿಸಿರಲಿಲ್ಲ. ಇದನ್ನು ಹೈಕೋರ್ಚ್‌ನಲ್ಲಿ ಪ್ರಶ್ನಿಸಿದಾಗ ಆ ಮಕ್ಕಳಿಗೂ ಪಿಯು ಫಲಿತಾಂಶ ಪರಿಗಣಿಸಿ ರ‍್ಯಾಕಿಂಗ್‌ ನೀಡಲು ನ್ಯಾಯಾಲಯ ಆದೇಶಿಸಿತ್ತು.

ಸಿಇಟಿ ರ‍್ಯಾಂಕ್‌ ಸೂತ್ರ: ರಿಪೀಟರ್ಸ್‌ಗೆ 6% ಕಡಿತ, ರ‍್ಯಾಂಕಿಂಗ್‌ ಪಟ್ಟಿ ಪ್ರಕಟಕ್ಕೆ ಹೈಕೋರ್ಟ್‌ ಆದೇಶ

ಆದರೆ, ಸರ್ಕಾರ ಪುನರಾವರ್ತಿತರು, ಹೊಸಬರು ಯಾರಿಗೂ ಅನ್ಯಾಯವಾಗದಂತೆ ಸಮನ್ವಯ ಸೂತ್ರ ರಚಿಸಿ ಇದಕ್ಕೆ ಹೈಕೋರ್ಚ್‌ನ ಒಪ್ಪಿಗೆಯನ್ನೂ ಪಡೆದಿದೆ. ಪುನರಾವರ್ತಿತ ವಿದ್ಯಾರ್ಥಿಗಳ ಪಿಯು ಪರೀಕ್ಷೆಯ ಮೂರು ವಿಷಯಗಳಲ್ಲಿ ಶೇ.6ರಷ್ಟುಅಂಕ ಕಡಿತಗೊಳಿಸುವ ಸಮನ್ವಯ ಸೂತ್ರವನ್ನು ಪಾಲಿಸಿ ಸೆ.29ರಂದು ಪರಿಷ್ಕೃತ ರ‍್ಯಾಕಿಂಗ್‌ ಪಟ್ಟಿಪ್ರಕಟಿಸುವುದಾಗಿ ಉನ್ನತ ಶಿಕ್ಷಣ ಸಚಿವ ಅಶ್ವತ್ಥ ನಾರಾಯಣ ಹೇಳಿಕೆ ನೀಡಿದ್ದರು. ಆದರೆ, ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅ.1ರಂದು ಪಟ್ಟಿ ಪ್ರಕಟಿಸುವುದಾಗಿ ಪ್ರಕಟಣೆಯಲ್ಲಿ ತಿಳಿಸಿದೆ.

CET: ಪೂರ್ಣ ಇಲ್ಲ, ಶೇ.60ರಷ್ಟು ಮಾತ್ರ ಪರಿಹಾರ: ತಜ್ಞರು

ಈ ಮಧ್ಯೆ, ಬಿಎಸ್ಸಿ ಕೃಷಿ ಮತ್ತು ಪಶುವೈದ್ಯಕೀಯ ಸೀಟುಗಳಿಗಾಗಿ ಕಾಯುತ್ತಿರುವ ವಿದ್ಯಾರ್ಥಿಗಳಿಗೆ ತಜ್ಞರ ಸಮಿತಿ ವರದಿಯಲ್ಲಿ ಯಾವುದೇ ಉಲ್ಲೇಖವಿಲ್ಲ ಎಂಬುದು ಕುತೂಹಲಕಾರಿಯಾಗಿದೆ. ಅವರಿಗೂ ಕೆಇಎ ರ‍್ಯಾಂಕ್‌ ನೀಡುವಾಗ ದ್ವಿತೀಯ ಪಿಯುಸಿ ಅಂಕಗಳನ್ನು ಪರಿಗಣಿಸಿರಲಿಲ್ಲ ಎಂಬುದು ಗಮನಾರ್ಹ. ಈ ಬಗ್ಗೆ ಅಧಿಕಾರಿಗಳನ್ನು ಪ್ರಶ್ನಿಸಿದರೆ ಆ ಮಕ್ಕಳಿಗೆ ಸಮಸ್ಯೆಯಾಗುವುದಿಲ್ಲ. ಅವರ ಸಂಖ್ಯೆ ಕಡಿಮೆ ಇರುವುದರಿಂದ ಎಲ್ಲರಿಗೂ ಸೀಟು ಲಭ್ಯವಾಗುತ್ತವೆ ಎನ್ನುತ್ತಾರೆ.

Latest Videos
Follow Us:
Download App:
  • android
  • ios