ಯುಜಿಸಿಇಟಿ ಅರ್ಜಿ ಸಲ್ಲಿಕೆ ದಿನಾಂಕ ಫೆಬ್ರವರಿ ೨೪ಕ್ಕೆ ವಿಸ್ತರಣೆಯಾಗಿದೆ. ಎಂಜಿನಿಯರಿಂಗ್, ವೈದ್ಯಕೀಯ ಸೇರಿದಂತೆ ಇತರೆ ವೃತ್ತಿಪರ ಕೋರ್ಸ್‌ಗಳಿಗೆ ಅರ್ಜಿ ಸಲ್ಲಿಸಲು ಕೆಇಎ ಅವಕಾಶ ಕಲ್ಪಿಸಿದೆ. ಶುಲ್ಕ ಪಾವತಿಗೆ ಫೆಬ್ರವರಿ 25 ಕೊನೆಯ ದಿನ. ಕೆಇಎ ನಿರ್ದೇಶಕ ಹೆಚ್. ಪ್ರಸನ್ನ ಈ ಮಾಹಿತಿ ನೀಡಿದ್ದಾರೆ.

ಬೆಂಗಳೂರು (ಫೆ.15): ಪ್ರಸಕ್ತ ಸಾಲಿನ ಯುಜಿಸಿಇಟಿ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆಯಾಗಿದೆ. ಎಂಜಿನಿಯರಿಂಗ್‌, ವೈದ್ಯಕೀಯ ಸೇರಿದಂತೆ ಇತರ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಅರ್ಜಿ ಸಲ್ಲಿಸುವ ದಿನಾಂಕ ಫೆ.24ರವರೆಗೆ ವಿಸ್ತರಿಸಿ ಕೆಇಎ ಘೋಷಿಸಿದೆ. ಈ ಹಿಂದೆ ಫೆ.18ರವರೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಿದ್ದ ಕೆಇಎ. ಆದರೆ ದಿನಾಂಕ ವಿಸ್ತರಣೆಗೆ ಅನೇಕರು ಮನವಿ ಮಾಡಿದ್ದರು. ಮನವಿಯನ್ನು ಪುರಸ್ಕರಿಸಿದ ಕೆಇಎ ಅರ್ಜಿ ದಿನಾಂಕ ವಿಸ್ತರಿಸಿ ಶುಲ್ಕ ಕಟ್ಟಲು ಫೆ.25ರವರೆಗೆ ಅವಕಾಶ ನೀಡಲಾಗಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಿರ್ದೇಶಕ ಹೆಚ್ ಪ್ರಸನ್ನ ಈ ಬಗ್ಗೆ ಮಾಹಿತಿ ನೀಡಿದ್ದಾರೆ.

ಕರಾಮುವಿಯಲ್ಲಿ 2024-25ರ ಶೈಕ್ಷಣಿಕ ಪ್ರವೇಶಾತಿ ಆರಂಭ; ಆನ್‌ಲೈನಲ್ಲೂ ಅರ್ಜಿ ಸಲ್ಲಿಕೆಗೆ ಅವಕಾಶ

ಪಿಂಚನೆ ಪಾವತಿಸಲು ಸೂಚಿಸಿದ್ದ ಆದೇಶ ರದ್ದು:
ಕೇಂದ್ರದ ಆರನೇ ವೇತನ ಆಯೋಗ ಮತ್ತು ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ವೇತನ ಪರಿಷ್ಕರಣೆಗೆ ಅನುಗುಣವಾಗಿ ನಿವೃತ್ತ ಪ್ರಾಧ್ಯಾಪಕರ ವೇತನವನ್ನು ಪರಿಷ್ಕರಿಸಿ ಅವರಿಗೆ 4 ತಿಂಗಳಲ್ಲಿ ಪಿಂಚಣಿ ಪಾವತಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿದ್ದ ಹೈಕೋರ್ಟ್‌ ಏಕಸದಸ್ಯ ನ್ಯಾಯಪೀಠದ ಆದೇಶವನ್ನು ವಿಭಾಗೀಯ ನ್ಯಾಯಪೀಠ ರದ್ದುಪಡಿಸಿದೆ.

ಯುಜಿಸಿ ನಿಯಮಾವಳಿ ವಾಪಸ್‌ ಪಡೆಯಿರಿ: ಸಿಎಂ ಸಿದ್ದರಾಮಯ್ಯ ಆಗ್ರಹ

ಏಕಸದಸ್ಯ ನ್ಯಾಯಪೀಠದ ಆದೇಶದ ರದ್ದತಿಗೆ ಕೋರಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅನು ಶಿವರಾಮನ್‌ ಅವರ ನೇತೃತ್ವದ ವಿಭಾಗೀಯ ಪೀಠ ಈ ಆದೇಶ ಮಾಡಿದೆ. ರಾಜ್ಯ ಸರ್ಕಾರದ ಪರ ಹೆಚ್ಚುವರಿ ಅಡ್ವೊಕೇಟ್‌ ಜನರಲ್‌ ಎಸ್‌.ಎ.ಅಹಮದ್‌ ವಾದ ಮಂಡಿಸಿ, ಮೈಸೂರಿನ ನಿವೃತ್ತ ಪ್ರಾಧ್ಯಾಪಕ ಕೆ.ಗೋಪಾಲ್‌ ಸೇರಿದಂತೆ 18ಕ್ಕೂ ಹೆಚ್ಚು ನಿವೃತ್ತ ಪ್ರಾಧ್ಯಾಪಕರು ಹೈಕೋರ್ಟ್‌ಗೆ ತಕರಾರು ಅರ್ಜಿಸಿದ್ದರು. ಆ ಅರ್ಜಿ ಪುರಸ್ಕರಿಸಿದ್ದ ಏಕ ಸದಸ್ಯ ಪೀಠ, ನಿವೃತ್ತ ಪ್ರಾಧ್ಯಾಪಕರ ನಿವೃತ್ತ ವೇತನವನ್ನು ಪರಿಷ್ಕರಿಸಿ, 4 ತಿಂಗಳಲ್ಲಿ ಪರಿಷ್ಕೃತ ಪಿಂಚಣಿ ಪಾವತಿಸುವಂತೆ ಸರ್ಕಾರಕ್ಕೆ 2019ರ ಮಾ.23ರಂದು ಆದೇಶಿಸಿದೆ. ಒಂದೊಮ್ಮೆ ಏಕ ಸದಸ್ಯ ಪೀಠದ ಆದೇಶವನ್ನು ಪಾಲಿಸಲು ಮುಂದಾದರೆ ರಾಜ್ಯದ ಬೊಕ್ಕಸಕ್ಕೆ ₹477 ಕೋಟಿ ಹೆಚ್ಚಿನ ಹೊರೆಯಾಗುತ್ತದೆ. ಆದ್ದರಿಂದ ಆದೇಶ ರದ್ದುಪಡಿಸಬೇಕು ಎಂದು ಕೋರಿದ್ದರು.