ಸಿಇಟಿ 75%, ಪಿಯು 25% ಅಂಕ ಪರಿಗಣನೆಗೆ ಕೆಇಎ ನಕಾರ

 ಪಿಯು ವಿದ್ಯಾರ್ಥಿಗಳು ಈ ಬಾರಿಯ  ಸಿಇಟಿ ಪಡೆದಿರುವ ಶೇ.75 ಅಂಕ ಮತ್ತು ಪಿಯು ಪರೀಕ್ಷೆಯಲ್ಲಿ ಪಡೆದಿರುವ ಶೇ.25ರಷ್ಟುಅಂಕಗಳನ್ನು ಪರಿಗಣಿಸಿ ರ್ಯಾಂಕ್‌ ಲಿಸ್ಟ್‌ ಪ್ರಕಟಿಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ  ನಿರಾಕರಿಸಿದೆ.

KEA refused to consider CET  and  PU  marks gow

ಬೆಂಗಳೂರು (ಆ.23): ಕಳೆದ ಸಾಲಿನಲ್ಲಿ ಪರೀಕ್ಷೆ ಬರೆಯದೆ ಉತ್ತೀರ್ಣರಾಗಿರುವ ಪಿಯು ವಿದ್ಯಾರ್ಥಿಗಳು ಈ ಬಾರಿಯ ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ (ಸಿಇಟಿ) ಪಡೆದಿರುವ ಶೇ.75 ಅಂಕ ಮತ್ತು ಪಿಯು ಪರೀಕ್ಷೆಯಲ್ಲಿ ಪಡೆದಿರುವ ಶೇ.25ರಷ್ಟುಅಂಕಗಳನ್ನು ಪರಿಗಣಿಸಿ ರ್ಯಾಂಕ್‌ ಲಿಸ್ಟ್‌ ಪ್ರಕಟಿಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ನಿರಾಕರಿಸಿದೆ. 2020-21ನೇ ಸಾಲಿನ ಪಿಯು ಪರೀಕ್ಷೆಯಲ್ಲಿ ಪಡೆದ ಅಂಕಗಳನ್ನು ವೃತ್ತಿಪರ ಕೋರ್ಸ್‌ಗಳ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಪರಿಗಣಿಸದ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಕ್ರಮ ಪ್ರಶ್ನಿಸಿ ಕೆಲ ವಿದ್ಯಾರ್ಥಿಗಳು ಹೈಕೋರ್ಚ್‌ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿಯನ್ನು ಆ.18ರಂದು ವಿಚಾರಣೆ ನಡೆಸಿದ್ದ ಹೈಕೋರ್ಚ್‌, ತಾವು ಪಿಯು ಪರೀಕ್ಷೆಯಲ್ಲಿ ಪಡೆದಿರುವ ಶೇ.50 ಅಂಕಗಳನ್ನು ಪರಿಗಣಿಸಲು ಸರ್ಕಾರಕ್ಕೆ ನಿರ್ದೇಶಿಸುವಂತೆ ಅರ್ಜಿದಾರರು ಕೋರಿದ್ದಾರೆ. ಮತ್ತೊಂದೆಡೆ ಕೋವಿಡ್‌ ಹಿನ್ನೆಲೆಯಲ್ಲಿ 2021ನೇ ವಿದ್ಯಾರ್ಥಿಗಳು ಪರೀಕ್ಷೆ ಬರೆಯದೇ ಉತ್ತೀರ್ಣರಾಗಿರುವುದರಿಂದ ವಿದ್ಯಾರ್ಥಿಗಳ ಮನವಿ ಪರಿಗಣಿಸುವುದಿಲ್ಲ ಎಂಬುದಾಗಿ ಸರ್ಕಾರ ಹೇಳುತ್ತಿದೆ. ಹಾಗಾಗಿ, ಎರಡೂ ಕಡೆಯವರ ವಾದವನ್ನು ಸಮತೋಲನ ಮಾಡುವ ನಿಟ್ಟಿನಲ್ಲಿ ಅರ್ಜಿದಾರ ವಿದ್ಯಾರ್ಥಿಗಳ ಸಿಇಟಿಯ ಶೇ.75 ಅಂಕ ಮತ್ತು ಪಿಯು ಪರೀಕ್ಷೆಯ ಶೇ.25ರಷ್ಟುಅಂಕ ಪರಿಗಣಿಸಿ ರ್ಯಾಂಕ್‌ ಲಿಸ್ಟ್‌ ಪ್ರಕಟಿಸಲು ಸಾಧ್ಯವೇ ಎಂಬ ಬಗ್ಗೆ ನಿಲುವು ತಿಳಿಸುವಂತೆ ಕೆಇಎಗೆ ತಿಳಿಸಿತ್ತು.

ಅರ್ಜಿ ಸೋಮವಾರ ಮತ್ತೆ ವಿಚಾರಣೆಗೆ ಬಂದಾಗ ಕೆಇಎ ಪರ ಸರ್ಕಾರಿ ವಕೀಲರು ಹಾಜರಾಗಿ, 75, 25ರಷ್ಟುಅಂಕಗಳನ್ನು ಪರಿಗಣಿಸಿ ರ್ಯಾಂಕ್‌ ಲಿಸ್ಟ್‌ ಪ್ರಕಟಿಸಲು ಸಾಧ್ಯವಿಲ್ಲ ಎಂದು ತಿಳಿಸಿದರು. ಅರ್ಜಿದಾರರ ವಕೀಲರು ವಾದ ಮಂಡಿಸಿ, ಕೆಇಎ ನೀತಿ ತಾರತಮ್ಯ ಮತ್ತು ಕಾನೂನು ಬಾಹಿರವಾಗಿದೆ. ಈ ವಾದ-ಪ್ರತಿವಾದ ಆಲಿಸಿದ ನ್ಯಾಯಪೀಠ ತೀರ್ಪು ಕಾಯ್ದಿರಿಸಿದೆ.

ಅರ್ಜಿದಾರರ ವಕೀಲರು ವಾದ ಮಂಡಿಸಿ, ಕೆಇಎ ನೀತಿ ತಾರತಮ್ಯ ಮತ್ತು ಕಾನೂನು ಬಾಹಿರವಾಗಿದೆ. ಇದರಿಂದ ಅರ್ಜಿದಾರರ ವಿದ್ಯಾರ್ಥಿಗಳ ಭವಿಷ್ಯದ ಮೇಲೆ ದುಷ್ಪರಿಣಾಮ ಬೀರುತ್ತದೆ. ಹಾಗಾಗಿ, 2020-21, 2021-22ನೇ ಸಾಲಿನ ಪಿಯು ಪರೀಕ್ಷೆಯಲ್ಲಿ ಅರ್ಜಿದಾರ ವಿದ್ಯಾರ್ಥಿಗಳು ಪಡೆದಿರುವ ಅಂಕಗಳಲ್ಲಿ ಶೇ.50ರಷ್ಟುಅಂಕ ಮತ್ತು ಸಿಇಟಿಯಲ್ಲಿ ಪಡೆದಿರುವ ಶೇ.50 ಅಂಕಗಳನ್ನು ಆಧರಿಸಿ ರ್ಯಾಂಕ್‌ ಪ್ರಕಟಿಸಲು ಕೆಇಎಗೆ ನಿರ್ದೇಶಿಸಬೇಕು ಎಂದು ಕೋರಿದರು.

ಸಿಇಟಿ ದಾಖಲೆ ಪರಿಶೀಲನೆಗೆ ಸರ್ವರ್‌ ಸಮಸ್ಯೆ: ಎಂಜಿನಿಯರಿಂಗ್‌ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸುಗಳ ಪ್ರವೇಶಕ್ಕೆ ಸಿಇಟಿ ರ್ಯಾಂಕಿಂಗ್ ನ ಅರ್ಹ ವಿದ್ಯಾರ್ಥಿಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸೋಮವಾರದಿಂದ ದಾಖಲೆ ಪರಿಶೀಲನೆ ಆರಂಭವಾಗಿದೆ. ಆದರೆ, ಮೊದಲ ದಿನ ಸವರ್‌ ಸಮಸ್ಯೆ ಹಾಗೂ ಕೆಲ ಅಧಿಕಾರಿಗಳು ತಡವಾಗಿ ಬಂದಿದ್ದರಿಂದ ಪ್ರಕ್ರಿಯೆ ಗಂಟೆ ತಡವಾಗಿ ಆರಂಭವಾಗಿದ್ದಾಗಿ ವಿದ್ಯಾರ್ಥಿಗಳು ಹಾಗೂ ಪೋಷಕರು ಆರೋಪಿಸಿದ್ದಾರೆ. ದಾಖಲೆ ಪರಿಶೀಲನೆಗಾಗಿ ಬೆಂಗಳೂರಿನ ಮಲ್ಲೇಶ್ವರ ಕೆಇಎ ಕಚೇರಿಯಲ್ಲಿ ಕೆಇಎ ಸೂಚನೆಯಂತೆ 1ರಿಂದ 5000 ರ್ಯಾಂಕ್‌ ವರೆಗಿನ ಸಾವಿರಾರು ಅಭ್ಯರ್ಥಿಗಳು ಮತ್ತು ಪೋಷಕರು ಬೆಳಗ್ಗೆ 8 ಗಂಟೆಗೇ ಹಾಜರಾಗಿದ್ದರು. ಆದರೆ, ಸರ್ವರ್‌ ಸಮಸ್ಯೆಯಿಂದಾಗಿ ಪ್ರಕ್ರಿಯೆಯು ಗಂಟೆಗಳ ಕಾಲ ವಿಳಂಬವಾಯಿತು.

ಮತ್ತೊಂದಡೆ ದಾಖಲೆಗಳ ಪರಿಶೀಲನೆ ಜವಾಬ್ದಾರಿ ಹೊತ್ತಿರುವ ಕ್ಷೇತ್ರ ಶಿಕ್ಷಣಾಧಿಕಾರಿಗಳ ಪೈಕಿ ಕೆಲವರು ತಡವಾಗಿ ಕಚೇರಿಗೆ ಬಂದಿದ್ದಾಗಿ ತಿಳಿದು ಬಂದಿದೆ. ಇದರಿಂದ ಅಸಮಾಧಾನಗೊಂಡ ಪೋಷಕರು ಹಾಗೂ ವಿದ್ಯಾರ್ಥಿಗಳು ಕೆಇಎ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಳಿಕ ಎಚ್ಚೆತ್ತ ಅಧಿಕಾರಿಗಳು ಸಮಸ್ಯೆ ಸರಿಪಡಿಸಿ ಪ್ರಕ್ರಿಯೆ ಆರಂಭಿಸಿದ್ದಾರೆ. ರಾತ್ರಿ 8 ಗಂಟೆವರೆಗೂ ದಾಖಲೆ ಪರಿಶೀಲನೆ ನಡೆಸಿ ಮುಗಿಸಿದ್ದಾರೆ.

ದಾಖಲೆಗಳ ಪರಿಶೀಲನೆ ಪ್ರಕ್ರಿಯೆಯನ್ನು ಆನ್‌ಲೈನ್‌ಗೊಳಿಸಲಾಗಿದೆ. ಶೈಕ್ಷಣಿಕ ದಾಖಲೆಗಳ ಪರಿಶೀಲಿಸಿ ದೃಢೀಕರಿಸುವ ಹೊಣೆಯನ್ನು ಶಿಕ್ಷಣ ಇಲಾಖೆಯ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ವಹಿಸಿದೆ. ಬೆಂಗಳೂರು ವ್ಯಾಪ್ತಿಯ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿರುವುದರಿಂದ ಜಿಲ್ಲೆಯ ಬಿಇಒಗಳಿಗೆ ಮಾತ್ರ ಪ್ರಾಧಿಕಾರದ ಕೇಂದ್ರ ಕಚೇರಿಯಲ್ಲೇ ಕಾರ್ಯವರ್ನಿಹಿಸಲು ಅವಕಾಶ ನೀಡಲಾಗಿದೆ. ಉಳಿದ ಬಿಇಒಗಳು ತಮ್ಮ ಜಿಲ್ಲೆ, ತಾಲ್ಲೂಕು ವ್ಯಾಪ್ತಿಯಲ್ಲೇ ಕೆಲಸ ಮಾಡುತ್ತಿದ್ದಾರೆ.

Teachers Recruitment; ಮಾಸಾಂತ್ಯಕ್ಕೆ 15000 ಶಿಕ್ಷಕರ ಪರೀಕ್ಷೆ ರಿಸಲ್ಟ್‌

ಮೊದಲ ದಿನ ಸಮಸ್ಯೆ ಸಾಮಾನ್ಯಎಂದ ಅಧಿಕಾರಿಗಳು: ಕೆಇಎ ಅಧಿಕಾರಿಗಳು ಪೋಷಕರು, ವಿದ್ಯಾರ್ಥಿಗಳ ಆರೋಪವನ್ನು ನಿರಾಕರಿಸಿದ್ದಾರೆ. ಆರಂಭದ ಕೆಲ ನಿಮಿಷಗಳ ಕಾಲವಷ್ಟೆದಾಖಲೆ ಪರಿಶೀಲನಾ ಪ್ರಕ್ರಿಯೆ ವಿಳಂಬವಾಗಿತ್ತು. ಗಂಟೆಗಳ ಕಾಲ ಆಗಿಲ್ಲ. ಅಲ್ಲದೆ, ಮೊದಲ ದಿನ ಸಮಸ್ಯೆಗಳು ಸಾಮಾನ್ಯ. ಅವುಗಳನ್ನು ಸರಿಪಡಿಸಿ ಪ್ರಕ್ರಿಯೆ ನಡೆಸಲಾಗಿದೆ. ಕೆಲ ವಿದ್ಯಾರ್ಥಿಗಳು ತಮ್ಮ ಅರ್ಜಿಯಲ್ಲಿ ತಮ್ಮ ವಿಳಾಸ, ತಾಲ್ಲೂಕು ಮತ್ತಿತರ ಸಮಾನ್ಯ ಮಾಹಿತಿಗಳನ್ನೂ ದಾಖಲಿಸಿಲ್ಲ. ಅಂತಹವರ ದಾಖಲೆಗಳ ಪರಿಶೀಲನೆಗೆ ಯಾವ ಬಿಇಒಗೆ ಕಳುಹಿಸಲಾಗುತ್ತದೆ. ಪೂರ್ಣ ಮಾಹಿತಿ ಇದ್ದರೆ ಮಾತ್ರ ಸಂಬಂಧಿಸಿದ ಅಧಿಕಾರಿಗಳಿಗೆ ವರ್ಗಾಯಿಸಲು ಸಾಧ್ಯ. ಎಂಟು ಬಾರಿ ಅರ್ಜಿ ತಿದ್ದುಪಡಿಗೆ ಅವಕಾಶ ನೀಡಿದರೂ ಪೂರ್ಣ ಮಾಹಿತಿ ನೀಡಿಲ್ಲ, ಕೆಲವರು ತಪ್ಪು ಮಾಹಿತಿ ನೀಡಿದ್ದಾರೆ. ಆದರೂ ಅವರ ಭವಿಷ್ಯದಿಂದ ಯಾರಿಗೂ ಸಮಸ್ಯೆಯಾಗದಂತೆ ಕ್ರಮ ವಹಿಸಿದ್ದೇವೆ. ಆದರೆ, ಮೀಸಲಾತಿ ಮಾಹಿತಿಯನ್ನು ತಪ್ಪಾಗಿ ದಾಖಲಿಸಿರುವವರಿಗೆ ಮತ್ತೆ ತಿದ್ದುಪಡಿಗೆ ಅವಕಾಶವಿಲ್ಲ. ಅದನ್ನು ಸ್ಪಷ್ಟವಾಗಿ ತಿಳಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.

Latest Videos
Follow Us:
Download App:
  • android
  • ios