ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ (ಕೆ-ಸೆಟ್) ಪರೀಕ್ಷೆ ಮುಂದೂಡಿಕೆ
ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (KSET) ಮುಂದೂಡಿಕೆಯಾಗಿದೆ. ಈ ಬಗ್ಗೆ ಶನಿವಾರ ಅಧಿಕೃತ ಪ್ರಕಣೆ ಹೊರಬಿದ್ದಿದೆ.
ಮೈಸೂರು, (ಏ.10) : ನಾಳೆ ಅಂದ್ರೆ ಏ.11ರಂದು ನಡೆಯಬೇಕಿದ್ದ ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (KSET) ಅನ್ನು ಮುಂದೂಡಲಾಗಿದೆ.
ಸದ್ಯ ರಾಜ್ಯದಲ್ಲಿ ಸಾರಿಗೆ ನೌಕರರ ಮುಷ್ಕರ ನಡೆಯುತ್ತಿರುವ ಹಿನ್ನೆಲೆಯಲ್ಲಿ ಪರೀಕ್ಷೆಯನ್ನು ಮುಂದೂಡಿಕೆ ಮಾಡಲಾಗಿದೆ ಮೈಸೂರು ವಿವಿ ಶನಿವಾರ ಪ್ರಕಟಣೆ ಹೊರಡಿಸಿದೆ. ಕೆಸೆಟ್ ಪರೀಕ್ಷೆಯ ಮುಂದಿನ ದಿನಾಂಕವನ್ನು ಸದ್ಯದಲ್ಲೇ ಪ್ರಕಟಮಾಡಲಾಗುವುದಾಗಿಯೂ ಪ್ರಕಟಣೆಯಲ್ಲಿ ತಿಳಿಸಿದೆ.
ಖಾಸಗಿ ಶಾಲಾ ಶಿಕ್ಷಕರಿಗೆ ಗುಡ್ ನ್ಯೂಸ್ ನೀಡಿದ ಸರ್ಕಾರ!
ಈ ಬಗ್ಗೆ ಪ್ರಕಟಣೆ ಹೊರಡಿಸಿರುವ ವಿವಿ, ಮೈಸೂರು ವಿವಿ ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಯನ್ನು ಭಾನುವಾರ ನಡೆಸಲು ಪೂರ್ವ ಸಿದ್ಧತೆಗಳನ್ನು ಮಾಡಕೊಂಡಿತ್ತು. ಆದರೆ ಕಾರಣಾಂತರಗಳಿಂದ ಪರೀಕ್ಷೆಯನ್ನು ಮುಂದೂಡಲು ನಿರ್ಧರಿಸಲಾಗಿದೆ. ಮುಂದಿನ ಪರೀಕ್ಷಾ ದಿನಾಂಕವನ್ನು ಶೀಘ್ರದಲ್ಲೇ ತಿಳಿಸಲಾಗುವುದು ಎಂದು ತಿಳಿಸಿದೆ.
ರಾಜ್ಯಾದ್ಯಂತ ಸಾರಿಗೆ ನೌಕರರು ವೇತನ ಹೆಚ್ಚಳ ಸೇರಿದಂತೆ ತಮ್ಮ ಬೇಡಿಕೆಗಳನ್ನು ಸರ್ಕಾರದ ಮುಂದಿಟ್ಟು ಪ್ರತಿಭಟನೆ ನಡೆಸುತ್ತಿದ್ದಾರೆ. ಇಂದಿಗೆ ಮುಷ್ಕರ ಶುರುವಾಗಿ ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಈ ಹಿನ್ನೆಲೆಯಲ್ಲಿ ಪರೀಕ್ಷೆಗಳನ್ನ ಮುಂದೂಡಲಾಗಿದೆ ಎಂದು ತಿಳಿದುಬಂದಿದೆ.