ಕೆಸೆಟ್ ಪರೀಕ್ಷೆ ಕೀ ಉತ್ತರ, ಫೆ.7ರವರೆಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ
ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಇತ್ತೀಚೆಗೆ ನಡೆಸಿದ್ದ ಪಿಎಸ್‌ಐ ಮರು ಪರೀಕ್ಷೆ ಮತ್ತು ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ ‘ಕೆ-ಸೆಟ್’ನ ತಾತ್ಕಾಲಿಕ ಕೀ ಉತ್ತರಗಳನ್ನು ಈಗಾಗಲೇ ಪ್ರಕಟಿಸಲಾಗಿದ್ದು ಆಕ್ಷೇಪಣೆ ಸಲ್ಲಿಕೆಗೆ ಅವಕಾಶ ಕಲ್ಪಿಸಲಾಗಿದೆ.
ಬೆಂಗಳೂರು (ಜ.3): ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಇತ್ತೀಚೆಗೆ ನಡೆಸಿದ್ದ ಪಿಎಸ್‌ಐ ಮರು ಪರೀಕ್ಷೆ ಮತ್ತು ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ ‘ಕೆ-ಸೆಟ್’ನ ತಾತ್ಕಾಲಿಕ ಕೀ ಉತ್ತರಗಳನ್ನು ಈಗಾಗಲೇ ಪ್ರಕಟಿಸಲಾಗಿದ್ದು ಆಕ್ಷೇಪಣೆ ಸಲ್ಲಿಕೆಗೆ ಅವಕಾಶ ಕಲ್ಪಿಸಲಾಗಿದೆ.
ಜ.13ರಂದು ಕೆ-ಸೆಟ್ ಮತ್ತು ಜ.23ರಂದು 545 ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಹುದ್ದೆಗಳ ನೇರ ನೇಮಕಾತಿಗೆ ಮರು ಪರೀಕ್ಷೆಗಳನ್ನು ನಡೆಸಲಾಗಿತ್ತು. ಈ ಎರಡೂ ಪರೀಕ್ಷೆಗಳಿಗೆ ಪ್ರಾಧಿಕಾರದ ವೆಬ್‌ಸೈಟ್ https:kea.kar.nic.in ನಲ್ಲಿ ತಾತ್ಕಾಲಿಕ ಕೀ ಉತ್ತರ ಪ್ರಕಟಿಸಲಾಗಿದೆ. ಈ ಪೈಕಿ ಕೆ ಸೆಟ್ ಪರೀಕ್ಷೆಯ ಕೀ ಉತ್ತರಗಳಿಗೆ ಆಕ್ಷೇಪಣೆಗಳಿದ್ದರೆ ಅಭ್ಯರ್ಥಿಗಳು ಪ್ರತಿ ಆಕ್ಷೇಪಣೆಗೆ 300 ರು.ನಂತೆ ಪಾವತಿಸಿ ಫೆ.7ರೊಳಗೆ ಆಕ್ಷೇಪಣೆ ಸಲ್ಲಿಸಬೇಕು ಎಂದು ಸೂಚಿಸಲಾಗಿದೆ.
ಸಿಬಿಎಸ್‌ಇ 9ನೇ ತರಗತಿಯ ಪಠ್ಯದಲ್ಲಿ ಡೇಟಿಂಗ್ & ರಿಲೇಷನ್‌ಷಿಪ್ ಬಗ್ಗೆ ಪಾಠ!
ಅದೇ ರೀತಿ ಪಿಎಸ್‌ಐ ಪರೀಕ್ಷೆಗೆ ಸಂಬಂಧಿಸಿದ ಆಕ್ಷೇಪಣೆಗಳನ್ನು ಅಭ್ಯರ್ಥಿಗಳು ತಮ್ಮ ಅರ್ಜಿ ಸಂಖ್ಯೆ, ಹೆಸರು, ಜನ್ಮ ದಿನಾಂಕ ಹಾಗೂ ಪೂರಕ ದಾಖಲೆಗಳೊಂದಿಗೆ ಫೆ.5ರ ಸಂಜೆ 5 ಗಂಟೆಯೊಳಗೆ ವೆಬ್‌ಸೈಟ್‌ನಲ್ಲಿ ನೀಡಿರುವ ಲಿಂಕ್ ಮೂಲಕವೇ ಸಲ್ಲಿಸಬೇಕು ಎಂದು ಪ್ರಕಟಣೆ ತಿಳಿಸಿದೆ. ಪತ್ರ ಮತ್ತು ಇ- ಮೇಲ್‌ನಲ್ಲಿ ಸಲ್ಲಿಸುವ ಆಕ್ಷೇಪಣೆಗಳನ್ನು ಪರಿಗಣಿಸುವುದಿಲ್ಲ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಕಟಣೆಯಲ್ಲಿ ತಿಳಿಸಿದೆ.
- ಕಳೆದ ಜನವರಿ13ರಂದು ನಡೆದಿದ್ದ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ ಕೆ ಸೆಟ್
- ಜ.23ರಂದು ನಡೆದಿದ್ದ ಸಬ್ ಇನ್ಸ್‌ಪೆಕ್ಟರ್ ನೇಮಕಾತಿ ಮರು ಪರೀಕ್ಷೆ
- ಕೆಇಎ ವೆಬ್‌ಸೈಟ್‌ನಲ್ಲಿ ಪಿಎಸ್‌ಐ, ಕೆ- ಸೆಟ್ ಪರೀಕ್ಷೆಯ ಕೀ ಉತ್ತರ ಪ್ರಕಟ
- ಕೆ ಸೆಟ್ ಕೀ ಉತ್ತರಗಳಿಗೆ ಆಕ್ಷೇಪಣೆಗಳಿದ್ದರೆ ಫೆ.7ರೊಳಗೆ ಸಲ್ಲಿಸಬೇಕು
-ಪ್ರತಿ ಆಕ್ಷೇಪಣೆಗೆ 300 ರು.ನಂತೆ ಪಾವತಿಸಲು ಪ್ರಾಧಿಕಾರ ಸೂಚನೆ
- ಪಿಎಸ್‌ಐ ಪರೀಕ್ಷೆಗೆ ಸಂಬಂಧಿಸಿದ ಆಕ್ಷೇಪಣೆ ಫೆ.5ರ ಮೊದಲು ಸಲ್ಲಿಸಬೇಕು