Asianet Suvarna News Asianet Suvarna News

SSLC ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್, ಪರೀಕ್ಷೆ ವೇಳೆ ಕೆಎಸ್‌ಆರ್‌ಟಿಸಿಯಲ್ಲಿ ಉಚಿತ ಪ್ರಯಾಣ

ಪರೀಕ್ಷೆ ಸಮಯದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ನೀಡಿದೆ. 10 ನೇ ತರಗತಿ ಪರೀಕ್ಷೆ ಬರೆಯಲು ಪ್ರಯಾಣಿಸುವ ವಿದ್ಯಾರ್ಥಿಗಳಿಗೆ  ಬಸ್ ನಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಮಾಡಿಕೊಟ್ಟಿದೆ.

KSRTC Free bus travel for SSLC students gow
Author
First Published Mar 21, 2023, 6:34 PM IST

ಬೆಂಗಳೂರು (ಮಾ.21): ಪರೀಕ್ಷೆ ಸಮಯದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ನೀಡಿದೆ. 10 ನೇ ತರಗತಿ ಪರೀಕ್ಷೆ ಬರೆಯಲು ಪ್ರಯಾಣಿಸುವ ವಿದ್ಯಾರ್ಥಿಗಳಿಗೆ  ಬಸ್ ನಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಮಾಡಿಕೊಟ್ಟಿದೆ. ಪರೀಕ್ಷೆ ಬರೆಯಲು ಹೋಗುವ ವಿದ್ಯಾರ್ಥಿಗಳು ಉಚಿತವಾಗಿ ಕೆಎಸ್ಆರ್‌ಟಿಸಿ  ಪರೀಕ್ಷಾ ಕೇಂದ್ರಗಳವರೆಗೆ ಉಚಿತ ಪ್ರಯಾಣಕ್ಕೆ ಅವಕಾಶ ನೀಡಿದೆ. ಮಾರ್ಚ್ 31ರಿಂದ ಏಪ್ರಿಲ್ 15 ರವರೆಗೆ 10ನೇ ತರಗತಿ ಪರೀಕ್ಷೆಗಳು  ನಡೆಯಲಿದ್ದು, ಪರೀಕ್ಷೆ ನಡೆಯುವ ದಿನಾಂಕದಂದು ವಿದ್ಯಾರ್ಥಿಗಳು ತಮ್ಮ ಪರೀಕ್ಷಾ ಪ್ರವೇಶ ಪತ್ರ ತೋರಿಸಿ ಸಂಚರಿಸಲು  ಸೂಚನೆ ನೀಡಿದೆ. ಬಸ್ ಡ್ರೈವರ್ ಗಳಿಗೆ ವಿದ್ಯಾರ್ಥಿಗಳ ಪರೀಕ್ಷಾ ಕೇಂದ್ರಗಳ ಮುಂದೆ ಸ್ಟಾಪ್ ಕೊಡುವಂತೆ ನಿಗಮ ಸೂಚಿಸಿದೆ. ಪರೀಕ್ಷಾ ಕೇಂದ್ರಗಳ ಮುಂದೆ ವಿದ್ಯಾರ್ಥಿಗಳ ಕೋರಿಗೆ ಮೇರೆಗೆ ಇಳಿಯಲು ಮತ್ತು ಹತ್ತಲು ಕೋರಿಕೆ ನಿಲುಗಡೆ ನೀಡಲು ಸೂಚನೆ ನೀಡಿದೆ.

ವಿದ್ಯಾರ್ಥಿಗಳಿಗಾಗಿ ಸಹಾಯವಾಣೆ: ಇದೇ ಮಾ.31ರಿಂದ ಏಪ್ರಿಲ್‌ 15ರವರೆಗೆ ನಡೆಯುವ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಸಂಬಂಧಿಸಿದಂತೆ ವಿದ್ಯಾರ್ಥಿಗಳು ಹಾಗೂ ಪೋಷಕರಲ್ಲಿ ಮೂಡುವ ಯಾವುದೇ ಸಂದೇಹ, ಆತಂಕ, ಗೊಂದಲಗಳನ್ನು ಪರಿಹರಿಸಲು ಕರ್ನಾಟಕ ಶಾಲಾ ಶಿಕ್ಷಣ ಮತ್ತು ಮೌಲ್ಯನಿರ್ಣಯ ಮಂಡಳಿ ಸಹಾಯವಾಣಿ 080- 23310075 , 080- 23310076 ಆರಂಭಿಸಿದೆ. 

ಬೆಂಗಳೂರು ಉತ್ತರ ವಿವಿ ಕ್ಯಾಂಪಸ್ ನಿರ್ಮಾಣಕ್ಕೆ ಚಾಲನೆ, 172 ಎಕರೆ ಪ್ರದೇಶದಲ್ಲಿ ನಿರ್ಮಾಣ

ಈ ಸಹಾಯವಾಣಿಯು ಮಾ. 28ರವರೆಗೆ ಸರ್ಕಾರಿ ರಜಾ ದಿನಗಳನ್ನು ಹೊರತುಪಡಿಸಿ ಉಳಿದ ದಿನಗಳಲ್ಲಿ ಮಧ್ಯಾಹ್ನ 3ರಿಂದ ಸಂಜೆ 7.30ರವರೆಗೆ ಮತ್ತು ಮಾ.26ರಂದು ಬೆಳಗ್ಗೆ 11ರಿಂದ ಸಂಜೆ 6ರವರೆಗೆ ಕಾರ್ಯನಿರ್ವಹಿಸಲಿದೆ. ಪರೀಕ್ಷೆ ನಡೆಯುವ ಮಾ.31ರಿಂದ ಏ.15ರ ವರೆಗಿನ ದಿನಗಳಲ್ಲಿ ಈ ಸಹಾಯವಾಣಿ ಕೇಂದ್ರ ನಿಯಂತ್ರಣ ಕೊಠಡಿಯಾಗಿ ಮಾರ್ಪಾಡು ಮಾಡಲಾಗುತ್ತದೆ ಎಂದು ಮಂಡಳಿ ಪ್ರಕಟಣೆ ತಿಳಿಸಿದೆ.

ಅರ್ಹತಾ ಪರೀಕ್ಷೆಯಲ್ಲಿ ಕನ್ನಡ ಭಾಷೆ ಕಡೆಗಣನೆ, ಕರ್ನಾಟಕ ರಕ್ಷಣಾ ವೇದಿಕೆ ಪ್ರತಿಭಟನೆ

10 ನೇ ತರಗತಿಯ ಅಂತಿಮ ವೇಳಾ ಪಟ್ಟಿ ಇಂತಿದೆ
ಮಾ.31ರಂದು - ಪ್ರಥಮ ಭಾಷೆ (ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು , ಉರ್ದು, ಇಂಗ್ಲಿಷ್, ಇಂಗ್ಲಿಷ್ (NCERT), ಸಂಸ್ಕೃತ.)
ಏ.4ರಂದು - ಗಣಿತ, ಸಮಾಜಶಾಸ್ತ್ರ
ಏ. 6ರಂದು - ದ್ವಿತೀಯ ಭಾಷೆ (ಇಂಗ್ಲಿಷ್, ಕನ್ನಡ)
ಏ. 8ರಂದು - ಕೋರ್ ವಿಷಯ, ಅರ್ಥಶಾಸ್ತ್ರ
ಏ. 10ರಂದು - ವಿಜ್ಞಾನ, ರಾಜ್ಯಶಾಸ್ತ್ರ, ಹಿಂದೂಸ್ಥಾನಿ ಸಂಗೀತ, ಕರ್ನಾಟಕ ಸಂಗೀತ
ಏ. 12ರಂದು - ತೃತೀಯ ಭಾಷೆ (ಹಿಂದಿ, ಕನ್ನಡ, ಇಂಗ್ಲಿಷ್, ತುಳು, ಕೊಂಕಣಿ, ಅರೇಬಿಕ್, ಪರ್ಷಿಯನ್, ಉರ್ದು, ಸಂಸ್ಕೃತ.)
ಏ. 15ರಂದು - ಸಮಾಜ ವಿಜ್ಞಾನ

Follow Us:
Download App:
  • android
  • ios