ಕುವೆಂಪು ವಿಶ್ವವಿದ್ಯಾಲಯದ  ಅಂತಿಮ ಪದವಿ ಮತ್ತು ಸ್ನಾತಕೋತ್ತರ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಈ ಬಗ್ಗೆ ವಿವಿ ಕುಲಸಚಿವರು ಆದೇಶ ಹೊರಡಿಸಿದ್ದಾರೆ.

ಬೆಂಗಳೂರು, (ಸೆ.25) : ಕೇಂದ್ರ ಹಾಗೂ ರಾಜ್ಯ ಸರ್ಕಾರದ ರೈತ ವಿರೋಧಿ ವಿಧೇಯಕಗಳನ್ನು ವಿರೋಧಿಸಿ, ರಾಜ್ಯದ ವಿವಿಧ ರೈತ ಸಂಘಟನೆಗಳು ಸೇರಿದಂತೆ ವಿವಿಧ ಸಂಘಟನೆಗಳಿಂದ ಸೆ.28 ರಂದು ಕರ್ನಾಟಕ ಬಂದ್ ಗೆ ಕರೆ ನೀಡಲಾಗಿದೆ

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಈ ಹಿನ್ನೆಲೆ ಕುವೆಂಪು ವಿವಿಯ ಸೆ. 28 ರಂದು ನಡೆಯಬೇಕಿದ್ದ, ಅಂತಿಮ ಪದವಿ ಮತ್ತು ಸ್ನಾತಕೋತ್ತರ ಪರೀಕ್ಷೆಗಳನ್ನು ಮುಂದೂಡಲಾಗಿದೆ. 

ಮೋದಿ ಮಾತು ಮೀರದ ಸಿಎಂ: ರೈತರ ಜೊತೆ ಸಭೆ ವಿಫಲ, ಕರ್ನಾಟಕ ಬಂದ್ ಖಚಿತ

ಮುಂದೂಡಿದ ದಿನಾಂಕವನ್ನು ಶೀಘ್ರದಲ್ಲೇ ಘೋಷಣೆ ಮಾಡಲಾಗುವುದು ಎಂದು ಕುವೆಂಪು ವಿಶ್ವವಿದ್ಯಾಲಯದ ಕುಲಸಚಿವರು ಅಧಿಕೃತ ಆದೇಶ ಹೊರಡಿಸಿದ್ದಾರೆ.

ಸೆ.28ರಂದು ರೈತ ಸಂಘಟನೆಗಳು ಸೇರಿದಂತೆ ವಿವಿಧ ಸಂಘಟನೆಗಳ ಬೆಂಬಲದೊಂದಿಗೆ ಕರ್ನಾಟಕ ಬಂದ್ ನಡೆಸಲಾಗುತ್ತಿದೆ. ಈ ರಾಜ್ಯಾಧ್ಯಂತ ಎಲ್ಲಾ ಸಂಘಟನೆಗಳು ಬೆಂಬಲ ನೀಡಲಿವೆ.