ಅಲ್ಪಸಂಖ್ಯಾತರಿಗೆ ವಿದೇಶಿ ವ್ಯಾಸಂಗಕ್ಕೆ ಸಾಲ: ಸರ್ಕಾರದಿಂದ ಅರ್ಜಿ ಆಹ್ವಾನ
ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮವು 2024-25ನೇ ಸಾಲಿನಲ್ಲಿ ವಿದೇಶದಲ್ಲಿ ಉನ್ನತ ವ್ಯಾಸಂಗ ಮಾಡುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಸಾಲ ಯೋಜನೆಗೆ ಅರ್ಜಿ ಆಹ್ವಾನಿಸಿದೆ.
ಬೆಂಗಳೂರು (ಆ.16): ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ನಿಗಮದ ವತಿಯಿಂದ 2024-25 ನೇ ಸಾಲಿಗೆ ಅಲ್ಪಸಂಖ್ಯಾತ ಜನಾಂಗದ ವಿದ್ಯಾರ್ಥಿಗಳಿಗೆ ವಿದೇಶಿ ಉನ್ನತ ವ್ಯಾಸಂಗಕ್ಕಾಗಿ ನೇರ ಸಾಲದ ಯೋಜನೆಯಡಿ ಸಾಲ ಸೌಲಭ್ಯ ನೀಡಲು ಸರ್ಕಾರದಿಂದ ಅರ್ಜಿ ಅಹ್ವಾನಿಸಲಾಗಿದೆ.
ಅಲ್ಪಸಂಖ್ಯಾತ ಜನಾಂಗದವರಾದ ಮುಸ್ಲಿಂ, ಕ್ರೈಸ್ತರು, ಜೈನರು, ಬೌದ್ಧರು, ಸಿಖ್ಖರು ಮತ್ತು ಪಾರ್ಸಿ ಜನಾಂಗದ ವಿದ್ಯಾರ್ಥಿಗಳಿಂದ ವಿದೇಶಿ ಉನ್ನತ ವ್ಯಾಸಂಗಕ್ಕಾಗಿ (Foreign Education Loan) ನೇರಸಾಲದ ಯೋಜನೆಯಡಿಯಲ್ಲಿ ಸಾಲ ಸೌಲಭ್ಯ ಪಡೆಯಲು ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಇನ್ನು ಅರ್ಜಿ ಹಾಕುವ ವಿದ್ಯಾರ್ಥಿಗಳು ಕರ್ನಾಟಕ ರಾಜ್ಯದ ನಿವಾಸಿಯಾಗಿದ್ದು, ಇಲ್ಲಿ ತಿಳಿಸಲಾದ ಅಲ್ಪ ಸಂಖ್ಯಾತರ ಸಮುದಾಯಕ್ಕೆ ಸೇರಿದವರಾಗಿರಬೇಕು.
ನನ್ನ ಮಗಳಿಗೆ ನೋವಾಗುತ್ತೆ... ಪರಿಹಾರ ನಿರಾಕರಿಸಿದ ಕೋಲ್ಕತ್ತಾ ಟ್ರೈನಿ ವೈದ್ಯೆಯ ತಂದೆ
ವಿದೇಶಿ ವ್ಯಾಸಂಗಕ್ಕೆ ಹೋಗುವ ಮೊದಲು ಅಂದರೆ ಹಿಂದಿನ ವರ್ಷದಲ್ಲಿ ಕನಿಷ್ಠ 60% ಅಂಕವನ್ನು ಪಡೆದಿರಬೇಕು. ವಿದೇಶ ವಿಶ್ವವಿದ್ಯಾಲಯದಿಂದ ಆಫರ್ ಲೆಟರ್ ಪಡೆದಿರಬೇಕು. ವಿದ್ಯಾರ್ಥಿಯ ಗರಿಷ್ಠ ವಯೋಮಿತಿ 38 ವರ್ಷ ಮೀರಿರಬಾರದು. ವಿದ್ಯಾರ್ಥಿಯ ಕುಟುಂಬ ವಾರ್ಷಿಕ ಆದಾಯ 8 ಲಕ್ಷ ರೂ. ಮೀರಿರಬಾರದು ಎಂದು ಷರತ್ತುಗಳನ್ನು ವಿಧಿಸಲಾಗಿದೆ.
ಆಸಕ್ತ ವಿದ್ಯಾರ್ಥಿಗಳು ವೆಬ್ ಸೈಟ್: www.kmdconline.karnataka.gov.in ನಲ್ಲಿ ಆಗಸ್ಟ್ 31 ರೊಳಗೆ ಅರ್ಜಿಗಳನ್ನು ಸಲ್ಲಿಸಬಹುದು ಹಾಗೂ ಆನ್ ಲೈನ್ ನಲ್ಲಿ ಸಲ್ಲಿಸಿರುವ ಅರ್ಜಿ ಮತ್ತು ಅಗತ್ಯ ದಾಖಲೆಗಳನ್ನು ಜಿಲ್ಲಾ ವ್ಯವಸ್ಥಾಪಕರು, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ(ನಿ), ಹಮೀದ್ ಷಾ ಕಾಂಪ್ಲೆಕ್ಸ್, 1ನೇ ಮಹಡಿ, ಎಫ್.ಎಫ್.29/37, ಹಲಸೂರು ಗೇಟ್ ಪೊಲೀಸ್ ಸ್ಟೇಷನ್ ಹಿಂಭಾಗ, ಕಬ್ಬನ್ ಪೇಟೆ ಮುಖ್ಯ ರಸ್ತೆ, ಬೆಂಗಳೂರು ಇಲ್ಲಿ ಸಲ್ಲಿಸಬಹುದು.
ಕಾಂತಾರಕ್ಕೆ ರಾಷ್ಟ್ರ ಪ್ರಶಸ್ತಿ: 23 ವರ್ಷಗಳ ಬರ ನೀಗಿಸಿದ ರಿಷಭ್ ಶೆಟ್ಟಿ
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 080-22114815 ಗೆ ಸಂಪರ್ಕಿಸಬಹುದು ಎಂದು ಬೆಂಗಳೂರು ನಗರ ಜಿಲ್ಲೆಯ ಕೇಂದ್ರಿಯ ವಿಭಾಗದ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮ (ನಿ) ಜಿಲ್ಲಾ ವ್ಯವಸ್ಥಾಂಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.