ಮಂಗಳೂರು, (ಏ.06): ಕೆಎಸ್‌ಆರ್‌ಟಿಸಿ ನೌಕರರ ಮುಷ್ಕರ ಹಿನ್ನಲೆಯಲ್ಲಿ ನಾಳೆ ಅಂದ್ರೆ ಏ.7ರಂದು ನಡೆಯಬೇಕಿದ್ದ ಮಂಗಳೂರು ವಿಶ್ವವಿದ್ಯಾನಿಲಯದ ಎಲ್ಲಾ ಪರೀಕ್ಷೆಗಳನ್ನು ಮುಂದೂಡಲಾಗಿದೆ.

ಕೆಎಸ್‌ಆರ್‌ಟಿಸಿ ಬಸ್‌ ಸಂಚಾರ ಅನಿಶ್ಚಿತತೆಯಲ್ಲಿರುವ ಕಾರಣದಿಂದ ಏ.7 ರಂದು ನಿಗದಿಯಾಗಿದ್ದ ಮಂಗಳೂರು ವಿವಿ ಪರೀಕ್ಷೆಗಳನ್ನು ಮುಂದೂಡಿಕೆ ಮಾಡಲಾಗಿದೆ. ಮುಂದಿನ ದಿನಾಂಕವನ್ನು ತಿಳಿಸಲಾಗುವುದು ಎಂದು ವಿವಿ ಪರೀಕ್ಷಾಂಗ ಕುಲಸಚಿವ ಡಾ. ಧರ್ಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕರ್ನಾಟಕದ ಈ ವಿವಿ ವ್ಯಾಪ್ತಿಯ ಕಾಲೇಜುಗಳಿಗೆ 15 ದಿನ ರಜೆ ಘೋಷಣೆ 

ರಾಜ್ಯದಲ್ಲಿ ಸಾರಿಗೆ ನೌಕರರು ಎ. 7ರಿಂದ ಮುಷ್ಕರಕ್ಕೆ ಕರೆ ನೀಡಿದ್ದರೂ ಜಿಲ್ಲೆಯಲ್ಲಿ ಕೆಎಸ್ಸಾರ್ಟಿಸಿ ಹಾಗೂ ಖಾಸಗಿ ಬಸ್‌ ಸೇವೆಯಲ್ಲಿ ಯಾವುದೇ ರೀತಿಯಾದ ವ್ಯತ್ಯಯವಾಗುವ ಸಾಧ್ಯತೆ ಇಲ್ಲ. 

ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಸಾರಿಗೆ ನೌಕರರು ಮುಸ್ಕರಕ್ಕೆ ಕರೆ ಕೊಟ್ಟಿದ್ದಾರೆ. ಇದರಿಂದ ನಾಳೆ (ಬುಧವಾರ) ಬಸ್ ಸಂಚಾರದಲ್ಲಿ ವ್ಯತ್ಯಯ ಕಂಡುಬರುವ ಸಾಧ್ಯತೆಗಳು ಹೆಚ್ಚಿವೆ. ಈ ಹಿನ್ನೆಲೆಯಲ್ಲಿ ಒಂದು ಊರಿನಿಂದ ಮತ್ತೊಂದು ಊರಿಗೆ ಹೋಗುವವರು ಬೇರೆ ಮಾರ್ಗ ಕಂಡುಕೊಳ್ಳಬೇಕಿದೆ.