Asianet Suvarna News Asianet Suvarna News

Mangaluru University: ಫಲಿತಾಂಶ ವಿಳಂಬ: ಸಿಂಡಿಕೇಟ್ ಸಭೆಗೆ ನುಗ್ಗಲು ಯತ್ನಿಸಿದ ಎಬಿವಿಪಿ ಕಿಡಿ!

ಮಂಗಳೂರು ವಿವಿ ಫಲಿತಾಂಶ ವಿಳಂಬದ ವಿರುದ್ಧ ಎಬಿವಿಪಿ ಕಾರ್ಯಕರ್ತರ ಆಕ್ರೋಶ ಸ್ಪೋಟಗೊಂಡಿದ್ದು, ವಿವಿ ಸಿಂಡಿಕೇಟ್ ಸಭೆಗೆ ಎಬಿವಿಪಿ ಕಾರ್ಯಕರ್ತರು ನುಗ್ಗಲು ಯತ್ನಿಸಿದ ಘಟನೆ ನಡೆದಿದೆ. 

Mangaluru university Result delay issue ABVP tried to break into the syndicate meeting rav
Author
First Published Dec 20, 2022, 1:24 PM IST

ಭರತ್ ರಾಜ್ ಏಷ್ಯಾನೆಟ್ ಸುವರ್ಣ ನ್ಯೂಸ್ ಮಂಗಳೂರು

ಮಂಗಳೂರು (ಡಿ.20) : ಮಂಗಳೂರು ವಿವಿ ಫಲಿತಾಂಶ ವಿಳಂಬದ ವಿರುದ್ಧ ಎಬಿವಿಪಿ ಕಾರ್ಯಕರ್ತರ ಆಕ್ರೋಶ ಸ್ಪೋಟಗೊಂಡಿದ್ದು, ವಿವಿ ಸಿಂಡಿಕೇಟ್ ಸಭೆಗೆ ಎಬಿವಿಪಿ ಕಾರ್ಯಕರ್ತರು ನುಗ್ಗಲು ಯತ್ನಿಸಿದ ಘಟನೆ ನಡೆದಿದೆ.  ಸಿಂಡಿಕೇಟ್ ಸಭೆಗೆ ನುಗ್ಗಲು ಯತ್ನಿಸಿದ ವೇಳೆ ಪೊಲೀಸರು-ಕಾರ್ಯಕರ್ತರ ನಡುವೆ ನೂಕಾಟ-ತಳ್ಳಾಟ ನಡೆದಿದೆ. ಮಂಗಳೂರು ವಿ.ವಿ ಫಲಿತಾಂಶ ವಿಳಂಬ ಪ್ರಶ್ನಿಸಿ ಎಬಿವಿಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಮಂಗಳೂರಿನ ಕೊಣಾಜೆಯಲ್ಲಿರುವ ವಿವಿಯ ಆಡಳಿತ ಸೌಧಕ್ಕೆ ಸುಮಾರು 500ರಷ್ಟಿದ್ದ ಎಬಿವಿಪಿ ಕಾರ್ಯಕರ್ತರು ಮುತ್ತಿಗೆ ಹಾಕಿ ಬೃಹತ್ ಪ್ರತಿಭಟನೆ ನಡೆಸಿದ್ದಾರೆ. 

ಮಂಗಳೂರು ವಿವಿ ಆಡಳಿತ ಸೌಧದ ಆವರಣಕ್ಕೆ ಬಂದಾಗ ಪೊಲೀಸರು ತಡೆದಿದ್ದು, ಈ ವೇಳೆ ಎಬಿವಿಪಿ ಕಾರ್ಯಕರ್ತರು ಬ್ಯಾರಿಕೇಡ್ ಗಳನ್ನು ತಳ್ಳಿ ನುಗ್ಗಲು ಯತ್ನಿಸಿದ್ದಾರೆ. ಬಳಿಕ ವಿ.ವಿ ಪರೀಕ್ಷಾಂಗ ಕುಲಸಚಿವ ಪ್ರೊ.ಪಿ.ಎಲ್ ಧರ್ಮ ಮತ್ತು ಕುಲಪತಿ ಪಿ.ಎಸ್ ಯಡಪಡಿತ್ತಾಯ ಆಗಮಿಸಿದ್ದು, ಈ ವೇಳೆ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದೆ. ವಿ.ವಿ ಪದವಿ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಅಂಕಪಟ್ಟಿ ನೀಡದೆ ಸತಾಯಿಸುತ್ತಿದ್ದು, ಅಂಕಪಟ್ಟಿ ಬಾರದೇ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಹಾಕಲಾಗದೇ ಸಮಸ್ಯೆ ಎದುರಾಗಿದೆ.

ಮಂಗಳೂರು ವಿಶ್ವವಿದ್ಯಾಲಯದಲ್ಲಿ ಮುಂದಿನ ವರ್ಷದಿಂದ 5 ನೂತನ ಶೈಕ್ಷಣಿಕ ವಿಭಾಗ ಆರಂಭ

ವಿಶ್ವವಿದ್ಯಾಲಯದ ಪದವಿ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಅಂಕಪಟ್ಟಿ ನೀಡದೆ ಸತಾಯಿಸುತ್ತಿರುವುದು, ಅಂಕಪಟ್ಟಿ ಬಾರದೆ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಹಾಕಲು ಅವಕಾಶ ಸಿಗದಿರುವುದು, ಮೌಲ್ಯಮಾಪನ ವನ್ನು ಸೂಕ್ತ ಸಮಯದಲ್ಲಿ ನಡೆಸದಿರುವುದು ಇವೆಲ್ಲ ಸಮಸ್ಯೆಗಳು ಒಂದು ಕಡೆಯಾದರೆ, ಎನ್‌ಇಪಿ ಜಾರಿಯಾದ ನಂತರ ಮೊದಲನೇ ವರ್ಷಕ್ಕೆ ಸೇರ್ಪಡೆಯಾದ ವಿದ್ಯಾರ್ಥಿಗಳು ಪ್ರಸ್ತುತ ದ್ವಿತೀಯ ವರ್ಷದಲ್ಲಿ ಇದ್ದರೂ ಸಹ ಪ್ರಥಮ ಹಾಗೂ ದ್ವಿತೀಯ ಸೆಮಿಸ್ಟರ್ ನ ಮೌಲ್ಯಮಾಪನವನ್ನು ನಡೆಸಿ ಫಲಿತಾಂಶವನ್ನು ಈವರೆಗೂ ನೀಡದೆ ಮಂಗಳೂರು ವಿವಿ ವಿದ್ಯಾರ್ಥಿಗಳ ಭವಿಷ್ಯದ ಜತೆಗೆ ಚೆಲ್ಲಾಟವಾಡುತ್ತಿದೆ. 

ಈ ಎಲ್ಲ ಸಮಸ್ಯೆಗಳಿಗೆ ಮಂಗಳೂರು ವಿವಿಯ ಕುಲಪತಿ ಹಾಗೂ ಪರೀಕ್ಷಾಂಗ ಕುಲಸಚಿವರು ಕಾರಣ ಎಂದು ವಿದ್ಯಾರ್ಥಿಗಳು ಆರೋಪಿಸಿದರು. ಕುಲಸಚಿವರೇ ಕಾರಣ ಎಂಬ ಆರೋಪಕ್ಕೆ ಭಾವುಕರಾದ ಪರೀಕ್ಷಾಂಗ ಕುಲಸಚಿವ ಪ್ರೊ. ಪಿ.ಎಲ್. ಧರ್ಮ, ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಾ ಫಲಿತಾಂಶ ವಿಳಂಬಕ್ಕೆ ಪರೀಕ್ಷಾಂಗ ಕುಲಸಚಿವರ ರಾಜೀನಾಮೆ ಆಗ್ರಹಿಸುತ್ತಿದ್ದು, ಆ ಕಾರಣದಿಂದ ನನ್ನಿಂದ ಸಮಸ್ಯೆ ಆಗಿದ್ದು, ಪರಿಹಾರ ದೊರಕೋದಾದ್ರೆ ನಾನು ನೈತಿಕ ಹೊಣೆ ಹೊತ್ತು ರಾಜೀನಾಮೆ ಕೊಡಲು ರಾಜೀನಾಮೆ ಪತ್ರ ಬರೆದು ಸಿದ್ಧನಾಗಿಯೇ ಬಂದಿದ್ದೇನೆ ಎಂದರು.

ಭಾರತ ಮಾತೆ ಕೈಯಲ್ಲಿ ಭಗವಾಧ್ವಜ: ಮಂಗಳೂರು ವಿವಿ ಕಾಲೇಜಿನಲ್ಲಿ ‌ಮತ್ತೆ ವಿವಾದ!

 ವಿದ್ಯಾರ್ಥಿಗಳು ವಾಸ್ತವ ಅರ್ಥಮಾಡಿಕೊಂಡಿಲ್ಲ. ಒಂದು ದಿನ ಸಿಎಲ್ ಹಾಕದೆ ನನ್ನ ಸಿಬ್ಬಂದಿ ಕೆಲಸ ಮಾಡುತ್ತಿದ್ದಾರೆ. ಯುಸಿಎಂಎಸ್ ನದ್ದೇ ನಮಗೆ ಸಮಸ್ಯೆ ಆಗಿರೋದು. ಸರ್ವರ್ ಸರಿಯಾಗಿ ಕೆಲಸ ಮಾಡುತ್ತಿಲ್ಲ. ಸರಕಾರದ ವಿರುದ್ಧ ನಾನು ಮಾತನಾಡುತ್ತಿಲ್ಲ, ವ್ಯವಸ್ಥೆ ವಿರುದ್ಧ ಮಾತನಾಡುತ್ತಿದ್ದೇನೆ. ವಿವಿ ವಿದ್ಯಾರ್ಥಿಗಳಿಗೆ ಸಹಾಯವೇ ಮಾಡಿದೆ. ಜನವರಿ 25ರ ಒಳಗಡೆ ಫಲಿತಾಂಶ ಪ್ರಕಟಣೆಗೆ ಎಲ್ಲ ವ್ಯವಸ್ಥೆ ಮಾಡುತ್ತೇವೆ ಎಂಬ ಭರವಸೆ ನೀಡಬಲ್ಲೆ ಎಂದರು. ಪರೀಕ್ಷಾಂಗ ಕುಲಸಚಿವರ ಭರವಸೆಯ ಮೇರೆಗೆ ಎಬಿವಿಪಿ ಕಾರ್ಯಕರ್ತರು ಪ್ರತಿಭಟನೆ ಹಿಂಪಡೆದರು.

Follow Us:
Download App:
  • android
  • ios