ಕೊರೋನಾ ಸಂಕಷ್ಟ ಹಿನ್ನೆಲೆಯಲ್ಲಿ ಮಕ್ಕಳ ಶಾಲಾ-ಕಾಲೇಜುಗಳ ಶುಲ್ಕವನ್ನು ಮನ್ನಾ ಮಾಡುವಂತೆ ಕೂಗು ಕೇಳಿಬಂದಿದೆ. ಇದಕ್ಕೆ ಕೇಂದ್ರ ಮನಸ್ಸು ಮಾಡಬೇಕಷ್ಟೇ.

ಲಕ್ನೋ, (ಸೆ.12): ದೇಶದ ಪ್ರಜೆಗಳ ಹಿತ ದೃಷ್ಟಿಯಿಂದ ಶಾಲಾ-ಕಾಲೇಜುಗಳ ಶುಲ್ಕವನ್ನು ಮನ್ನಾ ಮಾಡುವಂತೆ ಬಹುಜನಾ ಸಮಾಜ ಪಕ್ಷದ ನಾಯಕಿ ಮಾಯಾವತಿ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಮಾಯಾವತಿ. ಕೊರೋನಾ ಲಾಕ್ ಡೌನ್ ಹಿನ್ನೆಲೆ ಜನರು ಸಂಕಷ್ಟದಲ್ಲಿದ್ದಾರೆ. ಕೋಟ್ಯಾಂತರ ಮಂದಿ ಕೆಲಸ ಕಳೆದುಕೊಂಡಿದ್ದಾರೆ, ಪೋಷಕರು ತಮ್ಮ ಮಕ್ಕಳ ಫೀಸ್ ಕಟ್ಟಲಾಗುತ್ತಿಲ್ಲ, ಆದ್ದರಿಂದ ಶಾಲಾ-ಕಾಲೇಜು ಶುಲ್ಕ ಮನ್ನಾ ಮಾಡುವಂತೆ ಮನವಿ ಮಾಡಿದ್ದಾರೆ.

ಪ್ರಾಥಮಿಕ ಶಾಲಾ ಮಕ್ಕಳಿಗೆ ಸಿಹಿ ಸುದ್ದಿ

ಕೋವಿಡ್ ಸಂಕಷ್ಟದಲ್ಲಿರುವ ದೇಶದ ಜನರ ಹಿತಾಸಕ್ತಿಗೆ ಕೇಂದ್ರ ಸರ್ಕಾರ ಮುಂದಾಗಬೇಕು. ಪೋಷಕರ ಕಷ್ಟಗಳನ್ನು ಅರಿತು ಅವರು ಈಗಾಗಲೇ ನೀಡಿರುವ ಶುಲ್ಕಗಳನ್ನು ವಾಪಸ್ ನೀಡಬೇಕು. ಅಲ್ಲದೇ ಈ ಬಾರಿಯ ಶಾಲಾ ಕಾಲೇಜು ಶುಲ್ಕವನ್ನು ಸಂಪೂರ್ಣ ಮನ್ನಾ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

Scroll to load tweet…

ಹೌದು...ಮಾಯಾವತಿ ಅವರ ಆಗ್ರಹವನ್ನು ಒಪ್ಪಲೇಬೇಕು. ಕೊರೋನಾ ಜನರಿಗೆ ತಂದಿಟ್ಟ ಸಂಕಷ್ಟ ಒಂದೆರೆಡಲ್ಲ. ಲಾಕ್‌ಡೌನ್‌ನಿಂದ ಅನುಭವಿಸಿದ ಕಷ್ಟ, ನಷ್ಟಗಳು ಹೇಳತೀರದು. 

ಅದೆಷ್ಟೋ ಪೋಷಕರು ತಮ್ಮ ಮಕ್ಕಳ ಶಾಲೆ-ಕಾಲೇಜು ಫೀ ಕಟ್ಟಲಾಗದೇ ಕಣ್ಣೀರಿನಲ್ಲಿ ಕೈತೊಳೆಯುತ್ತಿದ್ದಾರೆ. ಇನ್ನು ಕೆಲವರು ಕೂಲಿ-ನಾಲಿ ಮಾಡಿ ಮಕ್ಕಳ ಶುಲ್ಕ ಕಟ್ಟುತ್ತಿದ್ದಾರೆ. ಇದಕ್ಕೆ ಕೇಂದ್ರ ಸರ್ಕಾರ ಒಂದು ವ್ಯವಸ್ಥೆ ಮಾಡಬೇಕಿದೆ.