ಪರಿಷ್ಕೃತ ಪಠ್ಯ ವಾಪಸ್‌ ಪ್ರಶ್ನೆಯೇ ಇಲ್ಲ: ಸಚಿವ ನಾಗೇಶ್‌

*  ಪ್ರತಿಭಟನೆ ಮಾಡುವವರು ಮಾಡಲಿ, ಅಭ್ಯಂತರವಿಲ್ಲ
*  ಈ ವಿಚಾರದಲ್ಲಿ ಸರ್ಕಾರ ತನ್ನ ಸ್ಪಷ್ಟ ನಿರ್ಧಾರವನ್ನು ತೆಗೆದುಕೊಂಡಿದೆ
*  ಪ್ರತಿಭಟನೆ ಮಾಡುವ ಹಕ್ಕು ಪ್ರತಿಯೊಬ್ಬರಿಗೂ ಇದೆ

Minister BC Nagesh React on Textbook Revision in Karnataka grg

ಬೆಂಗಳೂರು(ಜೂ.18): ಪರಿಷ್ಕೃತ ಪಠ್ಯ ಪುಸ್ತಕಗಳನ್ನು ಹಿಂಪಡೆಯುವ ಅಥವಾ ಕೈಬಿಡುವ ಪ್ರಶ್ನೆಯೇ ಇಲ್ಲ. ಈಗಾಗಲೇ ಈ ವಿಚಾರದಲ್ಲಿ ಸರ್ಕಾರ ತನ್ನ ಸ್ಪಷ್ಟ ನಿರ್ಧಾರವನ್ನು ತೆಗೆದುಕೊಂಡಿದೆ. ಅದೇ ಅಂತಿಮ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್‌ ತಿಳಿಸಿದ್ದಾರೆ.

ನಗರದಲ್ಲಿ ಶನಿವಾರ ಸುದ್ದಿಗಾರರ ಪ್ರಶ್ನೆಗೆ ಪತ್ರಿಕ್ರಿಯೆ ನೀಡಿದ ಅವರು, ಪರಿಷ್ಕೃತ ಪಠ್ಯಪುಸ್ತಕಗಳನ್ನು ಕೈಬಿಡುವಂತೆ ಆಗ್ರಹಿಸಿ ಪ್ರತಿಭಟನೆ ಮಾಡುವವರು ಮಾಡಲಿ, ನಮ್ಮ ಅಭ್ಯಂತರವಿಲ್ಲ. ಪ್ರತಿಭಟನೆ ಮಾಡುವ ಹಕ್ಕು ಪ್ರತಿಯೊಬ್ಬರಿಗೂ ಇದೆ. ಇದುವರೆಗೆ ಸಾಕಷ್ಟು ಪ್ರತಿಭಟನೆಗಳು ನಡೆದಿವೆ. ಇದೂ ಹಾಗೆ ನಡೆಯುತ್ತದೆ. ಪರಿಷ್ಕೃತ ಪಠ್ಯಪುಸ್ತಕಗಳನ್ನು ಈಗಾಗಲೇ ಮುದ್ರಿಸಿ ಶಾಲೆಗಳಿಗೆ ಪೂರೈಸಲಾಗಿದೆ. ಇಂತಹ ಸಂದರ್ಭದಲ್ಲಿ ಯಾವ ಪಠ್ಯವನ್ನೂ ಕೈಬಿಡುವ, ಹಿಂಪಡೆಯಲು ಸಾಧ್ಯವೇ ಇಲ್ಲ ಎಂದರು.

ಹಿಂದಿ ಬಂದರಷ್ಟೇ ಪ್ರವಾಸ ಆದೇಶದ ಹಿಂದೆ ಡಿಡಿಪಿಐ ಕೈವಾಡ ಖಚಿತ!

ಪರಿಷ್ಕೃತ ಪಠ್ಯದಲ್ಲಿ ಇರುವ ಕೆಲ ಆಕ್ಷೇಪಾರ್ಹ ಅಂಶಗಳನ್ನು ಸರಿಪಡಿಸಿ ಸಂಬಂಧಿಸಿದ ಅಧ್ಯಾಯಗಳನ್ನು ಮಾತ್ರ ಮರು ಮುದ್ರಿಸಿ ಶಾಲೆಗೆ ಕಳುಹಿಸುವುದಾಗಿ ಈಗಾಗಲೇ ತಿಳಿಸಿದ್ದೇವೆ. ಅಂತಹ ಆಕ್ಷೇಪಣೆಗಳನ್ನು ಇನ್ನೊಂದು ತಿಂಗಳಲ್ಲಿ ಸರಿಪಡಿಸುವ ಕಾರ್ಯ ನಡೆಯಲಿದೆ ಎಂದು ತಿಳಿಸಿದರು.
 

Latest Videos
Follow Us:
Download App:
  • android
  • ios