Asianet Suvarna News Asianet Suvarna News

ಫ್ಯೂಚರ್‌ ಡಿಜಿಟಲ್‌ ಜಾಬ್ಸ್‌ಗೆ ಸಚಿವ ಅಶ್ವತ್ಥ ಚಾಲನೆ

*   ಸರ್ಕಾರಿ ಎಂಜಿನಿಯರಿಂಗ್‌, ಪಾಲಿಟೆಕ್ನಿಕ್‌ ಕಾಲೇಜು ವಿದ್ಯಾರ್ಥಿಗಳಿಗೆ ತರಬೇತಿ ನೀಡುವ ಯೋಜನೆ
*   ಶಿಕ್ಷಣ ಇಲಾಖೆ-ಕೆಡಿಇಎಂ ಒಡಂಬಡಿಕೆ
*   ರಾಜ್ಯದ ಎಲ್ಲ ಕಾಲೇಜುಗಳಲ್ಲೂ ಒಂದು ವಿಶೇಷ ಆಂದೋಲನ 
 

Minister CN Ashwathnarayan Start to Future Digital Jobs Programme in Karnataka grg
Author
Bengaluru, First Published Jan 14, 2022, 6:12 AM IST

ಬೆಂಗಳೂರು(ಜ.14):  ಸರ್ಕಾರಿ ಎಂಜಿನಿಯರಿಂಗ್‌ ಮತ್ತು ಪಾಲಿಟೆಕ್ನಿಕ್‌ ಕಾಲೇಜು ವಿದ್ಯಾರ್ಥಿಗಳನ್ನು(Students) ಕೈಗಾರಿಕೆ ಸೇರಿದಂತೆ ಉದ್ಯಮರಂಗಕ್ಕೆ ಅಗತ್ಯಕ್ಕೆ ತಕ್ಕಂತೆ ಸೂಕ್ತ ತರಬೇತಿ ನೀಡಿ ಸಜ್ಜುಗೊಳಿಸುವ ಮಹತ್ವಾಕಾಂಕ್ಷಿ ‘ಫ್ಯೂಚರ್‌ ಡಿಜಿಟಲ್‌ ಜಾಬ್ಸ್‌’ (Future Digital Jobs) ಕಾರ್ಯಕ್ರಮಕ್ಕೆ ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್‌.ಅಶ್ವತ್ಥ ನಾರಾಯಣ(CN Ashwathnarayan) ಚಾಲನೆ ನೀಡಿದರು.

ವಿಧಾನಸೌಧದಲ್ಲಿ ಗುರುವಾರ ನಡೆದ ಈ ಕಾರ್ಯಕ್ರಮದಲ್ಲಿ ಯೋಜನೆ ಸಂಬಂಧ ರಾಜ್ಯ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಹಾಗೂ ಕರ್ನಾಟಕ ಡಿಜಿಟಲ್‌ ಎಕಾನಮಿ ಮಿಷನ್‌ (Karnataka Digital Economy Mission) ಸಂಸ್ಥೆಗಳು ಒಡಂಬಡಿಕೆಗೆ ಸಚಿವರ ಸಮ್ಮುಖದಲ್ಲಿ ಸಹಿ ಹಾಕಿದವು.

Covid 19 Spike: ಇಂದಿನಿಂದ 1-8ನೇ ಭೌತಿಕ ತರಗತಿ ಬಂದ್‌

ಬಳಿಕ ಮಾತನಾಡಿದ ಸಚಿವರು, ನೂತನ ಕಾರ್ಯಕ್ರಮದಿಂದ ರಾಜ್ಯ(Karnataka) 92 ಸರ್ಕಾರಿ ಪಾಲಿಟೆಕ್ನಿಕ್‌ ಮತ್ತು 14 ಸರ್ಕಾರಿ ಎಂಜಿನಿಯರಿಂಗ್‌ ಕಾಲೇಜುಗಳ ವಿದ್ಯಾರ್ಥಿಗಳಿಗೆ ಸಮರ್ಪಕ ಇಂಟರ್ನ್‌ಶಿಪ್‌, ಪ್ರಾಜೆಕ್ಟ್‌ಗಳ ತಯಾರಿ ಮತ್ತು ಅವರ ಉದ್ಯೋಗ(Jobs) ನೇಮಕಾತಿ ಕನಸು ನನಸಾಗಿಸಿಕೊಳ್ಳಲು ವೃತ್ತಿ ಸಮಾಲೋಚನೆ ಮತ್ತು ಮಾರ್ಗದರ್ಶನವನ್ನು ನೀಡಲಾಗುವುದು ಎಂದು ಹೇಳಿದರು.

ಈ ಕಾರ್ಯಕ್ರಮವನ್ನು ಎಲ್ಲ ಕಾಲೇಜುಗಳಲ್ಲೂ ಒಂದು ವಿಶೇಷ ಆಂದೋಲನದಂತೆ ಹಮ್ಮಿಕೊಳ್ಳಲಾಗುವುದು. ಉದ್ಯಮರಂಗಕ್ಕೆ ಬೇಕಾದ ಸ್ವರೂಪದಲ್ಲಿ ವಿದ್ಯಾರ್ಥಿಗಳನ್ನು ಸಜ್ಜುಗೊಳಿಸಲಾಗುವುದು. ಉದ್ಯಮಗಳೊಂದಿಗೆ ಸೇರಿಕೊಂಡು ತಾಂತ್ರಿಕ ಶಿಕ್ಷಣದ(Technical Education) ಪಠ್ಯಕ್ರಮವನ್ನು ಸಮಕಾಲೀನ ಅಗತ್ಯಗಳಿಗೆ ತಕ್ಕಂತೆ ಅಭಿವೃದ್ಧಿ ಪಡಿಸಿ, ಬೋಧನಾ ಮೂಲಸೌಕರ್ಯಗಳನ್ನು ಹೆಚ್ಚಿಸಲಾಗುವುದು ಎಂದರು.

ಟ್ಯಾಲೆನ್ಷಿಯಾ ಗ್ಲೋಬಲ್‌ ಕಂಪನಿಯ ಸಿಇಒ ಎಸ್‌.ಸುಬ್ರಹ್ಮಣಿಯನ್‌ ಮಾತನಾಡಿ, ಇದೊಂದು ಹೊಸ ಪ್ರಯತ್ನವಾಗಿದ್ದು, ಇದರಿಂದ ಮಕ್ಕಳಿಗೆ ಅನುಕೂಲ ಆಗಲಿದೆ. ಸಾವಿರಕ್ಕೂ ಹೆಚ್ಚು ಮಂದಿಗೆ ಈ ವರ್ಷ ಉದ್ಯೋಗ ಸಿಗುವ ಹಾಗೆ ಮಾಡಲಾಗುವುದು. ಮುಂದಿನ ದಿನಗಳಲ್ಲಿ ಹತ್ತು ಸಾವಿರಕ್ಕೂ ಹೆಚ್ಚು ಮಂದಿಗೆ ಉದ್ಯೋಗ ಸಿಗುವ ಹಾಗೆ ಮಾಡಲಾಗುವುದು ಎಂದರು.

ಕಾರ್ಯಕ್ರಮದಲ್ಲಿ ಕಾಲೇಜು ಶಿಕ್ಷಣ ಇಲಾಖೆ ಆಯುಕ್ತ ಪ್ರದೀಪ್‌, ಕೆಡಿಇಎಂ ಅಧ್ಯಕ್ಷ ಬಿ.ವಿ.ನಾಯ್ಡು, ತಾಂತ್ರಿಕ ಶಿಕ್ಷಣ ಇಲಾಖೆ ನಿರ್ದೇಶಕ ಮಂಜುನಾಥ್‌, ಉದ್ಯಮಿ ವಾದಿರಾಜ್‌ ಮತ್ತಿತರರು ಉಪಸ್ಥಿತರಿದ್ದರು.

ವಿದ್ಯಾರ್ಥಿಗಳನ್ನು ಕೈಗಾರಿಕೆ ಸೇರಿದಂತೆ ಉದ್ಯಮರಂಗಕ್ಕೆ ಅಗತ್ಯಕ್ಕೆ ತಕ್ಕಂತೆ ಸೂಕ್ತ ತರಬೇತಿ ನೀಡಿ ಸಜ್ಜುಗೊಳಿಸಲು ‘ಫ್ಯೂಚರ್‌ ಡಿಜಿಟಲ್‌ ಜಾಬ್ಸ್‌’ ಕಾರ್ಯಕ್ರಮಕ್ಕೆ ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್‌.ಅಶ್ವತ್ಥ ನಾರಾಯಣ ಸಮ್ಮುಖದಲ್ಲಿ ಗುರುವಾರ ಒಡಂಬಡಿಕೆಗೆ ಸಹಿ ಹಾಕಲಾಯಿತು. ಕಾಲೇಜು ಶಿಕ್ಷಣ ಇಲಾಖೆ ಆಯುಕ್ತ ಪ್ರದೀಪ್‌, ಕೆಡಿಇಎಂ ಅಧ್ಯಕ್ಷ ಬಿ.ವಿ.ನಾಯ್ಡು, ತಾಂತ್ರಿಕ ಶಿಕ್ಷಣ ಇಲಾಖೆ ನಿರ್ದೇಶಕ ಮಂಜುನಾಥ್‌, ಉದ್ಯಮಿ ವಾದಿರಾಜ್‌ ಉಪಸ್ಥಿತರಿದ್ದರು.

RTE Karnataka Admission 2022-23: RTE ಕಾಯ್ದೆಯಡಿ 2022-23ನೇ ಸಾಲಿನ ಪ್ರವೇಶ ಪ್ರಕ್ರಿಯೆ ಆರಂಭ

ಶಿಕ್ಷಣ ವ್ಯವಸ್ಥೆ ಡಿಜಿಟಲೀಕರಣ: ಸಚಿವ ಅಶ್ವತ್ಥ

ಮುಂದಿನ ಒಂದು ವರ್ಷದಲ್ಲಿ ಇಡೀ ಶಿಕ್ಷಣ ವ್ಯವಸ್ಥೆ(Education System) ಡಿಜಿಟಲೀಕರಣಗೊಳ್ಳಲಿದೆ. ದೇಶದ ಎಲ್ಲ ಭಾಗಗಳಲ್ಲಿ ಗುಣಮಟ್ಟದ ಶಿಕ್ಷಣ ಲಭ್ಯವಾಗಲಿದ್ದು, ಶಿಕ್ಷಣ ವ್ಯವಸ್ಥೆಯಲ್ಲಿ ಸಮಾನತೆ ಸಾಧಿಸಲಿದ್ದೇವೆ ಎಂದು ಉನ್ನತ ಶಿಕ್ಷಣ ಮತ್ತು ಕೌಶಲಾಭಿವೃದ್ಧಿ ಸಚಿವ ಡಾ. ಸಿ.ಎನ್‌.ಅಶ್ವತ್ಥನಾರಾಯಣ ತಿಳಿಸಿದ್ದರು. 

ಪ್ರಸ್ತುತ ಶಿಕ್ಷಣ ವ್ಯವಸ್ಥೆಯಲ್ಲಿ ಡಿಜಿಟಲ್‌ ವ್ಯವಸ್ಥೆ ಜಾರಿಯಲ್ಲಿ ಇರದ ಹಿನ್ನೆಲೆಯಲ್ಲಿ ಎಲ್ಲರಿಗೂ ಒಂದೇ ರೀತಿಯ ಶಿಕ್ಷಣ ನೀಡಲು ಅಸಾಧ್ಯವಾಗಿತ್ತು. ಹೀಗಾಗಿ ಇಡೀ ಶಿಕ್ಷಣ ವ್ಯವಸ್ಥೆಯನ್ನು ಡಿಜಿಟಲೀಕರಣ(Digitization) ಮಾಡುತ್ತಿರುವುದರಿಂದ ಮುಂದಿನ ವರ್ಷಗಳಲ್ಲಿ ಗುಣಮಟ್ಟದ ಶಿಕ್ಷಣ ಎಲ್ಲರಿಗೂ ಲಭ್ಯವಾಗಲಿದೆ ಎಂದು ಸಚಿವ ಅಶ್ವತ್ಥನಾರಾಯಣ ತಿಳಿಸಿದ್ದರು. 

ಬೆಂಗಳೂರು ನಗರ ವಿವಿ ರಿಜಿಸ್ಟ್ರಾರ್‌ ಶ್ರೀಧರ್‌, ಪಶು ಸಂಗೋಪನೆ ಮತ್ತು ಪಶು ವೈದ್ಯಕೀಯ ವಿಭಾಗದ ಉಪನಿರ್ದೇಶಕ ಡಾ. ಎಂ.ಜಯಪ್ರಕಾಶ್‌, ಬೆಂಗಳೂರು ನಗರ ವಿವಿಯ ಪ್ರೊ.ನರಸಿಂಹಮೂರ್ತಿ ಉಪಸ್ಥಿತರಿದ್ದರು.

Follow Us:
Download App:
  • android
  • ios