ಸಿಎಂ ಜೊತೆ ಚರ್ಚಿಸಿ ಎಸ್ಸೆಸ್ಸೆಲ್ಸಿ ಪರೀಕ್ಷೆ ನಿಗದಿ : ಸುಧಾಕರ್

  • ಹತ್ತನೇ ತರಗತಿ ಪರೀಕ್ಷೆ ನಡೆಸುವ ಬಗ್ಗೆ ಶಿಕ್ಷಣ ಸಚಿವ ಸುರೇಶ್‌ ಕುಮಾರ್‌ ಚರ್ಚೆ
  • ಬಿ.ಎಸ್‌. ಯಡಿಯೂರಪ್ಪ ಅವರೊಂದಿಗೆ ಚರ್ಚೆ ನಡೆಸಿ ತೀರ್ಮಾನ
  • ಸುರೇಶ್‌ ಕುಮಾರ್‌ ತೀರ್ಮಾನದ ಬಗ್ಗೆ ತಿಳಿಸಿದ್ದಾರೆ ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್‌  ಸ್ಪಷ್ಟನೆ
Minister Sudhakar clarifies on SSLC Exam confusion snr

ಬೆಂಗಳೂರು (ಜೂ.30):  ಹತ್ತನೇ ತರಗತಿ ಪರೀಕ್ಷೆ ನಡೆಸುವ ಬಗ್ಗೆ ಶಿಕ್ಷಣ ಸಚಿವ ಸುರೇಶ್‌ ಕುಮಾರ್‌ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರೊಂದಿಗೆ ಚರ್ಚೆ ನಡೆಸಿ ತೀರ್ಮಾನಕ್ಕೆ ಬಂದಿದ್ದಾರೆ. ಆದರೆ ಈ ವೇಳೆ ನಾನು ನಮ್ಮ ಇಲಾಖೆಯ ಸಭೆಯಲ್ಲಿದ್ದೆ. ತಾಂತ್ರಿಕ ಸಲಹಾ ಸಮಿತಿಯ ಜೊತೆ ಚರ್ಚಿಸಿ ತೀರ್ಮಾನಕ್ಕೆ ಬಂದಿರಬಹುದು. ಸಭೆ ಮುಗಿದ ಬಳಿಕ ಸುರೇಶ್‌ ಕುಮಾರ್‌ ತೀರ್ಮಾನದ ಬಗ್ಗೆ ತಿಳಿಸಿದ್ದಾರೆ ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್‌ ಹೇಳಿದ್ದಾರೆ.

ಸರ್ಕಾರದಲ್ಲಿ ಸಮನ್ವಯ ಕೊರತೆ ಇಲ್ಲ, ದೆಹಲಿಗೆ ಹೊರಟ ಸುಧಾಕರ್

ಹತ್ತನೇ ತರಗತಿ ಪರೀಕ್ಷೆ ನಡೆಸುವ ಬಗ್ಗೆ ತೀರ್ಮಾನ ಕೈಗೊಂಡಿರುವ ಬಗ್ಗೆ ನನಗೆ ಗೊತ್ತಿಲ್ಲ, ನನ್ನ ಜೊತೆ ಈ ಬಗ್ಗೆ ಚರ್ಚಿಸಿಲ್ಲ ಎಂದು ಸೋಮವಾರ ಡಾ. ಸುಧಾಕರ್‌ ಹೇಳಿದ್ದರು. ಆದರೆ ಈ ಹೇಳಿಕೆ ವಿವಾದದ ಸ್ವರೂಪ ಪಡೆದು ಸರ್ಕಾರದ ನಡುವೆಯ ಸಮನ್ವಯತೆಯಲ್ಲಿನ ಲೋಪ ಬಹಿರಂಗವಾಗಿತ್ತು.

SSLC ಪರೀಕ್ಷೆ: ಸುರೇಶ್ ಕುಮಾರ್‌ ನಡೆಗೆ ಆರೋಗ್ಯ ಸಚಿವ ಸುಧಾಕರ್ ಬೇಸರ .

ಬಳಿಕ ಮಂಗಳವಾರ ಖುದ್ದು ಮುಖ್ಯಮಂತ್ರಿಯವರೇ ಪ್ರತಿಕ್ರಿಯಿಸಿ ಶಿಕ್ಷಣ ಸಚಿವರು ನನ್ನೊಂದಿಗೆ ಪೂರ್ವಭಾವಿಯಾಗಿ ಚರ್ಚಿಸಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬಗ್ಗೆ ತೀರ್ಮಾನ ಕೈಗೊಂಡಿದ್ದಾರೆ. ಸಮಗ್ರ ಚರ್ಚೆ ನಡೆದು ಮಕ್ಕಳ ಹಿತದೃಷ್ಟಿಯಿಂದ ತೀರ್ಮಾನಕ್ಕೆ ಬರಲಾಗಿದೆ. ಈ ಬಗ್ಗೆ ಗೊಂದಲ ಸೃಷ್ಟಿಸುವುದು ಅನಗತ್ಯ ಎಂದು ಟ್ವೀಟ್‌ ಮಾಡಿದರು. ಈ ಹಿನ್ನೆಲೆಯಲ್ಲಿ ಸುಧಾಕರ್‌ ಈ ಸ್ಪಷ್ಟಿಕರಣ ನೀಡಿದ್ದಾರೆ.

ಕಾಂಗ್ರೆಸ್‌ ಬಗ್ಗೆ ಪ್ರತಿಕ್ರಿಯಿಸಲ್ಲ: ಕಾಂಗ್ರೆಸ್‌ ಪಕ್ಷದಲ್ಲಿನ ಮುಖ್ಯಮಂತ್ರಿ ಅಭ್ಯರ್ಥಿಗಳ ಗೊಂದಲದ ಪ್ರತಿಕ್ರಿಯಿಸಿದ ಡಾ. ಸುಧಾಕರ್‌, ಇದು ಕಾಂಗ್ರೆಸ್‌ ಪಕ್ಷದ ಆಂತರಿಕ ವಿಚಾರ. ಈ ಬಗ್ಗೆ ನನಗೆ ಏನೂ ಗೊತ್ತಿಲ್ಲ. ಸಾಮಾನ್ಯವಾಗಿ ಕೆಪಿಸಿಸಿ ಅಧ್ಯಕ್ಷರು ಅಥವಾ ವಿಪಕ್ಷ ನಾಯಕರು ಮುಖ್ಯಮಂತ್ರಿ ಆಗುತ್ತಾರೆ. ಹಿಂದಿನಿಂದಲೂ ಈ ಪದ್ಧತಿ ನಡೆಯುತ್ತಿದೆ ಎಂದು ಹೇಳಿದರು.

Latest Videos
Follow Us:
Download App:
  • android
  • ios