Asianet Suvarna News Asianet Suvarna News

1ರಿಂದ 9ನೇ ತರಗತಿ ವಿದ್ಯಾರ್ಥಿಗಳ ಪರೀಕ್ಷೆ ಬಗ್ಗೆ ಸ್ಪಷ್ಟನೆ ಕೊಟ್ಟ ಸಚಿವ ಸುರೇಶ್ ಕುಮಾರ್

ಒಂದರಿಂದ ಒಂಬತ್ತನೇ ತರಗತಿ ವಿದ್ಯಾರ್ಥಿಗಳ ಪರೀಕ್ಷೆ ಕುರಿತಂತೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಸ್ಪಷ್ಟನೆ ಕೊಟ್ಟಿದ್ದಾರೆ.

Minister Suresh Kumar Clarifications about 1 to 9 Class students Exams rbj
Author
Bengaluru, First Published Mar 28, 2021, 8:58 PM IST

ಬೆಂಗಳೂರು, (ಮಾ.28): ಒಂದರಿಂದ ಒಂಬತ್ತನೇ ತರಗತಿ ವಿದ್ಯಾರ್ಥಿಗಳನ್ನು ಪರೀಕ್ಷೆ ಇಲ್ಲದೆಯೇ ಪಾಸ್ ಮಾಡಿಸುವ ಯಾವುದೇ ನಿರ್ಧಾರವನ್ನು ತೆಗೆದುಕೊಂಡಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ. 

ಕೊರೋನಾ  ಎರಡನೇ ಅಲೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಸಚಿವ ಎಸ್. ಸುಧಾಕರ್ ಅವರು ವಿದ್ಯಾರ್ಥಿಗಳನ್ನು ಪರೀಕ್ಷೆ ಇಲ್ಲದೆಯೇ ಪಾಸ್ ಮಾಡಲು ತೀರ್ಮಾನಿಸಿದ್ದು, ಈ ಕುರಿತು ಸಿಎಂ ಬಳಿ ಸೋಮವಾರ ಚರ್ಚೆ ಮಾಡುವುದಾಗಿ ಹೇಳಿದ್ದರು.

1ರಿಂದ 9ನೇ ತರಗತಿಯವರೆಗಿನ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ನೀಡಿದ ರಾಜ್ಯ ಸರ್ಕಾರ

ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿರುವ ಸುರೇಶ್ ಕುಮಾರ್, ಶಿಕ್ಷಣ ಇಲಾಖೆಯು ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಲು ಸಿದ್ಧತೆ ನಡೆಸುತ್ತಿದೆ. ಸದ್ಯ ಪರೀಕ್ಷೆ ಇಲ್ಲದೆಯೇ ಪಾಸ್ ಮಾಡುವ ಯಾವುದೇ ಪ್ರಸ್ತಾಪ ನಮ್ಮ ಮುಂದೆ ಇಲ್ಲ ಎಂದರು. 

ನಾವು ಆ ಬಗ್ಗೆ ತೀರ್ಮಾನಿಸಿಲ್ಲ. ಈ ಕುರಿತು ಆರೋಗ್ಯ ಸಚಿವರೊಂದಿಗೆ ಮಾತುಕತೆ ನಡೆಸಿ ಸೂಕ್ತ ನಿರ್ಧಾರಗಳನ್ನು ಮುಂದಿನ ದಿನಗಳಲ್ಲಿ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು.

Follow Us:
Download App:
  • android
  • ios